AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್​ನಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಪ್ಲೇಯಿಂಗ್ ಇಲೆವೆನ್

ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಶ್ರೀಲಂಕಾ ತಂಡ ಫೈನಲ್​ಗೆ ಪ್ರವೇಶಿಸಿದರೆ, ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 114 ರನ್​ಗಳ ಅಮೋಘ ಗೆಲುವಿನೊಂದಿಗೆ ಫೈನಲ್​ಗೆ ಲಗ್ಗೆಯಿಟ್ಟಿದೆ. ಅದರಂತೆ ಇದೀಗ ಉಭಯ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಿವೆ.

ಫೈನಲ್​ನಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಪ್ಲೇಯಿಂಗ್ ಇಲೆವೆನ್
ಭಾರತ vs ಶ್ರೀಲಂಕಾImage Credit source: x.com
ಝಾಹಿರ್ ಯೂಸುಫ್
|

Updated on: Sep 22, 2026 | 10:10 AM

Share

ಏಷ್ಯನ್ ಗೇಮ್ಸ್ 2026ರ ಮಹಿಳಾ ಟಿ20 ಟೂರ್ನಿಯ ಫೈನಲ್​ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಜಪಾನ್‌ನ ನಿಶ್ಶಿನ್‌ನಲ್ಲಿರುವ ಐಚಿ ಪ್ರಿಫೆಕ್ಚರಲ್ ಕೊರೊಗಿ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಇನ್ನು ಈ ಹಣಾಹಣಿಯಲ್ಲಿ ಗೆಲ್ಲುವ ತಂಡ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರೆ, ಸೋಲುವ ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಡಬೇಕಾಗುತ್ತದೆ. ಅಂದರೆ ಉಭಯ ತಂಡಗಳಿಗೂ ಏಷ್ಯನ್ ಗೇಮ್ಸ್​ ಪದಕ ಖಚಿತವಾದಂತಾಗಿದೆ. ಆದಾಗ್ಯೂ, ಎರಡೂ ತಂಡಗಳ ಆಟಗಾರ್ತಿಯರು ಜಿದ್ದಾಜಿದ್ದಿನ ಹೋರಾಟ ನಡೆಸಿ ಬಂಗಾರದ ಪದಕಕ್ಕೆ ಕೊರಳೊಡ್ಡಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ ಪ್ಲೇಯಿಂಗ್ XI: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಗುಣಲನ್ ಕಮಲಿನಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ಶ್ರೇಯಾಂಕಾ ಪಾಟೀಲ್, ಶ್ರೀ ಚರಣಿ, ನಂದನಿ ಶರ್ಮಾ, ಕ್ರಾಂತಿ ಗೌಡ್.

ಶ್ರೀಲಂಕಾ ಪ್ಲೇಯಿಂಗ್ XI: ಇಮೇಶಾ ದುಲಾನಿ, ಚಾಮರಿ ಅಥಾಪತ್ತು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ಹನ್ಸಿಮಾ ಕರುಣಾರತ್ನೆ, ಕೌಶಾನಿ ನುತ್ಯಂಗನಾ(ಪ), ಮಿಥಾಲಿ ಅಯೋಧ್ಯಾ, ಕಾವ್ಯಾ ಕವಿಂದಿ, ಚಾಮುಡಿ ಪ್ರಬೋದಾ, ಸುಗಂದಿಕಾ ಕುಮಾರಿ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಶ್ರೀಲಂಕಾ ನಡುವಣ ಫೈನಲ್ ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 10:30ಕ್ಕೆ ಪಂದ್ಯ ಆರಂಭವಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯದ ನೇರ ಪ್ರಸಾರವನ್ನು ‘ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್’ ವಾಹಿನಿಗಳಲ್ಲಿ ವೀಕ್ಷಿಸಬಹುದು. ಹಾಗೆಯೇ   ‘ಸೋನಿ ಲಿವ್’ ಆ್ಯಪ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕ) , ರಿಚಾ ಘೋಷ್ (ವಿಕೆಟ್ ಕೀಪರ್), ಸ್ಮೃತಿ ಮಂಧಾನ , ಶಫಾಲಿ ವರ್ಮಾ , ಗುಣಲನ್ ಕಮಲಿನಿ , ಭಾರತಿ ಫುಲ್ಮಾಲಿ , ದೀಪ್ತಿ ಶರ್ಮಾ , ಶ್ರೇಯಾಂಕಾ ಪಾಟೀಲ್ , ಶ್ರೀ ಚರಣಿ , ನಂದನಿ ಶರ್ಮಾ , ಕ್ರಾಂತಿ ಗೌಡ್ , ರೇಣುಕಾ ಸಿಂಗ್ ಠಾಕೂರ್ , ಅರುಂಧತಿ ರೆಡ್ಡಿ , ರಾಧಾ ಯಾದವ್.

ಇದನ್ನೂ ಓದಿ: ಲಕ್ಷ್ಮಣ್-ಅಗರ್ಕರ್ ನಡುವೆ ಭಿನ್ನಾಭಿಪ್ರಾಯ: ತಪ್ಪಿದ ವಾಗ್ವಾದ!

ಶ್ರೀಲಂಕಾ ತಂಡ: ಚಾಮರಿ ಅಥಾಪತ್ತು (ನಾಯಕ) , ಕೌಶಾನಿ ನುತ್ಯಂಗನ (ವಿಕೆಟ್ ಕೀಪರ್), ಇಮೇಶಾ ದುಲಾನಿ , ಹಸಿನಿ ಪೆರೆರಾ , ಹರ್ಷಿತಾ ಸಮರವಿಕ್ರಮ , ಕವಿಶಾ ದಿಲ್ಹಾರಿ , ಹನ್ಸಿಮಾ ಕರುಣರತ್ನೆ , ಮಿಥಾಲಿ ಅಯೋಧ್ಯೆ , ಕಾವ್ಯ ಕವಿಂದಿ , ಚಾಮುಡಿ ಪ್ರಬೋದ , ಸುಗಂಧಿಕಾ ಕುಮಾರಿ , ರಶ್ಮಿಕಾ ಸೆವ್ವಾಂಡಿ, ನಿಮಾಶಾ ಮೀಪಗೆ , ಸಂಜನಾ ಕವಿಂದಿ , ಅನುಷ್ಕಾ ಸಂಜೀವಿನಿ.

Follow Us
ಮತ್ತೆ ನಾಲಿಗೆ ಹರಿಬಿಟ್ಟ ಲಿಖಿತ್; ಈ ವಿಷಯಕ್ಕೆ ಸುದೀಪ್ ಕ್ಲಾಸ್ ಫಿಕ್ಸ್?
ಮತ್ತೆ ನಾಲಿಗೆ ಹರಿಬಿಟ್ಟ ಲಿಖಿತ್; ಈ ವಿಷಯಕ್ಕೆ ಸುದೀಪ್ ಕ್ಲಾಸ್ ಫಿಕ್ಸ್?
ಇಂದು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಗೆ ವಿಶೇಷ ದಿನ
ಇಂದು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಗೆ ವಿಶೇಷ ದಿನ
ಕೆಪಿಎಸ್​ಸಿ ನೇಮಕಾತಿ ಹಗರಣ: ಸಿಐಡಿ ತನಿಖೇಲಿ ಮತ್ತಷ್ಟು ಸ್ಫೋಟಕ ವಿಚಾರ ಬಯಲು
ಕೆಪಿಎಸ್​ಸಿ ನೇಮಕಾತಿ ಹಗರಣ: ಸಿಐಡಿ ತನಿಖೇಲಿ ಮತ್ತಷ್ಟು ಸ್ಫೋಟಕ ವಿಚಾರ ಬಯಲು
ಕೆಪಿಎಸ್​​ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೆಪಿಎಸ್​​ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ