ಭಾರತ- ಜಿಂಬಾಬ್ವೆ ನಡುವೆ ಏಕದಿನ ಸರಣಿ; ಮೊದಲ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ?
ಭಾರತ ಮಹಿಳಾ ತಂಡವು ಜಿಂಬಾಬ್ವೆ ವಿರುದ್ಧದ ಟಿ20 ಸರಣಿ ಗೆದ್ದು, ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಅಕ್ಟೋಬರ್ 23 ರಂದು ವಡೋದರಾದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಸ್ಮೃತಿ ಮಂಧಾನ ನಾಯಕತ್ವದಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ. ಜಿಂಬಾಬ್ವೆ ಪ್ರತಿರೋಧ ತೋರುವ ನಿರೀಕ್ಷೆಯಿದೆ. ಪಂದ್ಯದ ದಿನಾಂಕ, ಸಮಯ, ಸ್ಥಳ ಮತ್ತು ಲೈವ್ ವೀಕ್ಷಣೆಯ ಮಾಹಿತಿ ಇಲ್ಲಿದೆ.

ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ್ದ ಭಾರತ ಮಹಿಳಾ ತಂಡ ಇದೀಗ ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿದೆ. ಉಭಯ ಮಹಿಳಾ ತಂಡಗಳ ನಡುವಿನ ಏಕದಿನ ಸರಣಿ ಅಕ್ಟೋಬರ್ 23 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಉಭಯ ತಂಡಗಳು ಈಗಾಗಲೇ ವಡೋದರಾಕ್ಕೆ ಬಂದಿಳಿದಿದ್ದು, ಅಭ್ಯಾಸದಲ್ಲಿ ನಿರತವಾಗಿವೆ. ನೂತನ ನಾಯಕಿ ಸ್ಮೃತಿ ಮಂಧಾನ ತಮ್ಮ ನಾಯಕತ್ವದಲ್ಲಿ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದಂತೆ, ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ತಮ್ಮ ನಾಯಕತ್ವಕ್ಕೆ ಸ್ಮರಣೀಯ ಆರಂಭ ನೀಡುವ ಇರಾದೆಯಲ್ಲಿದ್ದಾರೆ. ಇತ್ತ ಟಿ20 ಸರಣಿಯನ್ನು ಏಕಪಕ್ಷೀಯವಾಗಿ ಸೋತಿದ್ದ ಜಿಂಬಾಬ್ವೆ ಏಕದಿನ ಸರಣಿಯಲ್ಲಾದರೂ ಪ್ರತಿರೋಧ ನೀಡುತ್ತಾ ಎಂಬುದನ್ನು ಕಾದುನೋಡಬೇಕಿದೆ. ಉಳಿದಂತೆ ಮೊದಲ ಏಕದಿನ ಪಂದ್ಯದ ಬಗ್ಗೆಗಿನ ಪೂರ್ಣ ವಿವರ ಇಂತಿದೆ.
ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಅಕ್ಟೋಬರ್ 23 ರಂದು ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ವಡೋದರಾದ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ವಿವಿದ ಚಾನೆಲ್ಗಳಲ್ಲಿ ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ಮಹಿಳಾ ತಂಡ: ಪ್ರತಿಕಾ ರಾವಲ್, ಸ್ಮೃತಿ ಮಂಧಾನ (ನಾಯಕಿ), ಶಫಾಲಿ ವರ್ಮಾ, ಹರ್ಮನ್‌ಪ್ರೀತ್ ಕೌರ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸಯಾಲಿ ಸತ್ಘರೆ, ಕ್ರಾಂತಿ ಗೌಡ್, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ವೈಷ್ಣವಿ ಶರ್ಮಾ, ನಂದಿನಿ ಶರ್ಮಾ, ತೇಜಲ್ ಹಸಬ್ನಿಸ್, ಜಿಂತಿಮಣಿ ಕಲಿತಾ.
ಜಿಂಬಾಬ್ವೆ ಮಹಿಳಾ ತಂಡ: ಮೊಡೆಸ್ಟರ್ ಮುಪಾಚಿಕ್ವಾ (ವಿಕೆಟ್ ಕೀಪರ್), ಕೆಲಿಸ್ ನ್ದ್ಲೋವು, ಚಿಪೊ ಮುಗೇರಿ-ತಿರಿಪಾನೊ, ಬೆಲವ್ಡ್ ಬಿಜಾ, ಜೋಸೆಫಿನ್ ನ್ಕೊಮೊ (ನಾಯಕಿ), ಶಾರ್ನೆ ಮೇಯರ್ಸ್, ನ್ಯಾಷಾ ಗ್ವಾಂಜುರಾ, ಮಿಚೆಲ್ ಮವುಂಗಾ, ನೊಮ್ವೆಲೊ ಸಿಬಾಂಡಾ, ಫ್ರಾನ್ಸಿಸ್ಕಾ ಚಿಪಾರೆ, ಒಲಿಂಡರ್ ಚಾರೆ, ಕುಡ್ಜೈ ಚಿಗೋರಾ, ತೆಂಡೈ ಮಕುಶಾ, ಲೋರಿನ್ ಫಿರಿ, ಚಿಡ್ಜಾ ಧುರೂರು.
