AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs AUSW: ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

India Womens vs Australia Women: 9ನೇ ಕ್ರಮಾಂಕದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶಿಸಿದ ಪೂಜಾ 126 ಎಸೆತಗಳನ್ನು ಎದುರಿಸಿ 47 ರನ್​ ಕಲೆಹಾಕಿದರು. ಈ ಮೂಲಕ ಪೂಜಾ-ದೀಪ್ತಿ ಜೋಡಿ ತಂಡದ ಮೊತ್ತವನ್ನು 400ರ ಗಡಿದಾಟಿಸಿದರು. ಅಂತಿಮವಾಗಿ ಭಾರತ ತಂಡವು 406 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 187 ರನ್​ಗಳ ಬೃಹತ್ ಮುನ್ನಡೆ ಸಾಧಿಸಿತು.

INDW vs AUSW: ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
Team India
TV9 Web
| Updated By: ಝಾಹಿರ್ ಯೂಸುಫ್|

Updated on: Dec 24, 2023 | 12:48 PM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಭಾರತ ಮಹಿಳಾ ತಂಡ (India Womens) ಐತಿಹಾಸಿಕ ಗೆಲುವು ದಾಖಲಿಸಿದೆ. ಇದು 50 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಮಹಿಳಾ ತಂಡಕ್ಕೆ ದೊರೆತ ಮೊದಲ ಜಯ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ತಹ್ಲಿಯಾ ಮೆಕ್‌ಗ್ರಾತ್ (50) ಅವರ ಅರ್ಧಶತಕದ ನೆರವಿನಿಂದ 261 ರನ್​ ಕಲೆಹಾಕಿ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಕರಾರುವಾಕ್ ದಾಳಿ ಸಂಘಟಿಸಿದ ಪೂಜಾ 53 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು.

ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 90 ರನ್ ಪೇರಿಸಿದ ಬಳಿಕ ಶಫಾಲಿ ವರ್ಮಾ (40) ವಿಕೆಟ್ ಒಪ್ಪಿಸಿದರು. ಇನ್ನು 74 ರನ್​ಗಳ ಕೊಡುಗೆ ನೀಡಿದ ಸ್ಮೃತಿ ಮಂಧಾನ ರನೌಟ್​ಗೆ ಬಲಿಯಾದರು.

ಆ ಬಳಿಕ ಬ್ಯಾಟ್ ಬೀಸಿದ ರಿಚಾ ಘೋಷ್ (52) ಹಾಗೂ ಜೆಮಿಮಾ ರೊಡ್ರಿಗಾಸ್ (73) ಅರ್ಧಶತಕಗಳನ್ನು ಬಾರಿಸಿ ಮಿಂಚಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಹರ್ಮನ್​ಪ್ರೀತ್ ಕೌರ್ (0) ಹಾಗೂ ಯಾಸ್ತಿಕಾ ಭಾಟಿಯಾ (1) ಬೇಗನೆ ಔಟಾಗಿ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ದೀಪ್ತಿ ಶರ್ಮಾ ಹಾಗೂ ಪೂಜಾ ವಸ್ತ್ರಾಕರ್ ಅರ್ಧಶತಕದ ಜೊತೆಯಾಟದೊಂದಿಗೆ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತರು. ಅದರಲ್ಲೂ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೀಪ್ತಿ ಶರ್ಮಾ 171 ಎಸೆತಗಳನ್ನು ಎದುರಿಸಿ 9 ಫೋರ್​ಗಳೊಂದಿಗೆ 78 ರನ್ ಬಾರಿಸಿದರು.

ಮತ್ತೊಂದೆಡೆ 9ನೇ ಕ್ರಮಾಂಕದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶಿಸಿದ ಪೂಜಾ 126 ಎಸೆತಗಳನ್ನು ಎದುರಿಸಿ 47 ರನ್​ ಕಲೆಹಾಕಿದರು. ಈ ಮೂಲಕ ಪೂಜಾ-ದೀಪ್ತಿ ಜೋಡಿ ತಂಡದ ಮೊತ್ತವನ್ನು 400ರ ಗಡಿದಾಟಿಸಿದರು. ಅಂತಿಮವಾಗಿ ಭಾರತ ತಂಡವು 406 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 187 ರನ್​ಗಳ ಬೃಹತ್ ಮುನ್ನಡೆ ಸಾಧಿಸಿತು.

187 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಟೀಮ್ ಇಂಡಿಯಾ ವನಿತೆಯರ ಕರಾರುವಾಕ್ ದಾಳಿಗೆ ಕ್ರೀಸ್ ಕಚ್ಚಿ ನಿಲ್ಲಲು ಆಸೀಸ್ ಬ್ಯಾಟರ್​ಗಳು ತಡಕಾಡಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ತಹ್ಲಿಯಾ ಮೆಕ್​ಗ್ರಾಥ್ ಮತ್ತೊಮ್ಮೆ ಆಸ್ಟ್ರೇಲಿಯಾ ತಂಡಕ್ಕೆ ಆಸರೆಯಾದರು. 177 ಎಸೆತಗಳನ್ನು ಎದುರಿಸಿದ ತಹ್ಲಿಯಾ 73 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

ಅದರಂತೆ 3ನೇ ದಿನದಾಟದ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡವು 5 ವಿಕೆಟ್ ಕಳೆದುಕೊಂಡು 233 ರನ್ ಪೇರಿಸಿತು. ಆದರೆ 4ನೇ ದಿನದಾಟದ ಆರಂಭದಲ್ಲೇ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಡುವಲ್ಲಿ ಪೂಜಾ ವಸ್ತ್ರಾಕರ್ ಯಶಸ್ವಿಯಾದರು. ಅಷ್ಟೇ ಅಲ್ಲದೆ ತಂಡದ ಮೊತ್ತಕ್ಕೆ 28 ರನ್​ ಸೇರಿಸಿ ಆಸ್ಟ್ರೇಲಿಯಾ ತಂಡವು 261 ರನ್​ಗಳಿಗೆ ಆಲೌಟ್ ಆಯಿತು. ಭಾರತ ತಂಡದ ಪರ ಸ್ನೇಹ ರಾಣಾ 63 ರನ್​ಗಳಿಗೆ 4 ವಿಕೆಟ್ ಕಬಳಿಸಿ ಮಿಂಚಿದರು.

ಇತ್ತ ಮೊದಲ ಇನಿಂಗ್ಸ್​ನ 187 ರನ್​ಗಳ ಮುನ್ನಡೆಯೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 75 ರನ್​ಗಳ ಗುರಿ ಪಡೆಯಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಕೇವಲ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ಸ್ಮೃತಿ ಮಂಧಾನ ಹಾಗೂ ರಿಚಾ ಘೋಷ್ ಅರ್ಧಶತಕದ ಜೊತೆಯಾಟವಾಡಿದರು. ಈ ಮೂಲಕ ಟೀಮ್ ಇಂಡಿಯಾ 2 ವಿಕೆಟ್ ಕಳೆದುಕೊಂಡು 75 ರನ್ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇದು ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾದ ಮೊದಲ ಟೆಸ್ಟ್ ಗೆಲುವು ಎಂಬುದು ವಿಶೇಷ.

ಭಾರತ ಪ್ಲೇಯಿಂಗ್ ಇಲೆವೆನ್: ಸ್ಮೃತಿ ಮಂಧಾನ , ಶಫಾಲಿ ವರ್ಮಾ , ಜೆಮಿಮಾ ರೊಡ್ರಿಗಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್) , ರಿಚಾ ಘೋಷ್ , ದೀಪ್ತಿ ಶರ್ಮಾ , ಸ್ನೇಹ ರಾಣಾ , ಪೂಜಾ ವಸ್ತ್ರಾಕರ್ , ರೇಣುಕಾ ಠಾಕೂರ್ ಸಿಂಗ್ , ರಾಜೇಶ್ವರಿ ಗಾಯಕ್ವಾಡ್.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ಅತ್ಯಧಿಕ ವೇತನ ಪಡೆಯುವ 10 ಆಟಗಾರರು: ಲಿಸ್ಟ್​ನಲ್ಲಿಲ್ಲ ವಿರಾಟ್ ಕೊಹ್ಲಿ..!

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಬೆತ್ ಮೂನಿ , ಫೋಬೆ ಲಿಚ್‌ಫೀಲ್ಡ್ , ಎಲ್ಲಿಸ್ ಪೆರ್ರಿ , ತಹ್ಲಿಯಾ ಮೆಕ್‌ಗ್ರಾತ್ , ಅಲಿಸ್ಸಾ ಹೀಲಿ (ನಾಯಕಿ) , ಅನ್ನಾಬೆಲ್ ಸದರ್ಲ್ಯಾಂಡ್ , ಆಶ್ಲೀ ಗಾರ್ಡ್ನರ್ , ಜೆಸ್ ಜೊನಾಸೆನ್ , ಅಲಾನಾ ಕಿಂಗ್ , ಕಿಮ್ ಗಾರ್ತ್ , ಲಾರೆನ್ ಚೀಟಲ್.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!