Sign In

By signing in or creating an account, you agree with Associated Broadcasting Company's Terms & Conditions and Privacy Policy.

IND W vs ENG W: ಇಂಗ್ಲೆಂಡ್​ ವಿರುದ್ಧ ಭಾರತಕ್ಕೆ ಅಮೋಘ ಜಯ

India Womens Beat England Womens: 292 ರನ್​ಗಳ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ (33) ಹಾಗೂ ಸ್ಮೃತಿ ಮಂಧಾನ (26) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಕಣಕ್ಕಿಳಿದ ಜೆಮಿಮಾ 27 ರನ್​ಗಳ ಕೊಡುಗೆ ನೀಡಿದರೆ, ನಾಯಕಿ ಹರ್ಮನ್​ಪ್ರೀತ್ ಕೌರ್ ಅಜೇಯ 44 ರನ್​ ಬಾರಿಸಿದರು.

IND W vs ENG W: ಇಂಗ್ಲೆಂಡ್​ ವಿರುದ್ಧ ಭಾರತಕ್ಕೆ ಅಮೋಘ ಜಯ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 16, 2023 | 11:59 AM

ಮುಂಬೈನ ಡಿವೈ ಪಾಟೀಲ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ಮಹಿಳಾ (England Women’s) ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ (India Women’s)  ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ (Team India) ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 47 ರನ್​ಗಳಿಗೆ 2 ವಿಕೆಟ್​ ಕಳೆದುಕೊಂಡಿದ್ದ ಭಾರತ ತಂಡಕ್ಕೆ ಆ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಆಸರೆಯಾಗಿ ನಿಂತಿದ್ದರು.

ಚೊಚ್ಚಲ ಪಂದ್ಯವಾಡಿದ್ದ ಶುಭಾ ಸತೀಶ್ (69), ಜೆಮಿಮಾ ರೊಡ್ರಿಗಾಸ್ (68) ಅರ್ಧಶತಕಗಳ ಕಾಣಿಕೆ ನೀಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರೆ, ಆ ಬಳಿಕ ಯಾಸ್ತಿಕಾ ಭಾಟಿಯಾ (66) ಹಾಗೂ ದೀಪ್ತಿ ಶರ್ಮಾ (67) ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 428 ರನ್​ ಕಲೆಹಾಕಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಟೀಮ್ ಇಂಡಿಯಾ ಬೌಲರ್​ಗಳ ನಿಖರ ದಾಳಿಯಿಂದಾಗಿ ತತ್ತರಿಸಿತು. ಅದರಲ್ಲೂ ಸ್ಪಿನ್ನರ್ ದೀಪ್ತಿ ಶರ್ಮಾ ಅವರ ಎಸೆತಗಳನ್ನು ಎದುರಿಸಲು ತಡಕಾಡಿದ ಇಂಗ್ಲೆಂಡ್ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು.

ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್​ ಕೇವಲ 136 ರನ್​ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ದೀಪ್ತಿ ಶರ್ಮಾ 7 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಸ್ನೇಹ್ ರಾಣ 2 ವಿಕೆಟ್ ಪಡೆದು ಮಿಂಚಿದರು.

292 ರನ್​ಗಳ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ (33) ಹಾಗೂ ಸ್ಮೃತಿ ಮಂಧಾನ (26) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಕಣಕ್ಕಿಳಿದ ಜೆಮಿಮಾ 27 ರನ್​ಗಳ ಕೊಡುಗೆ ನೀಡಿದರೆ, ನಾಯಕಿ ಹರ್ಮನ್​ಪ್ರೀತ್ ಕೌರ್ ಅಜೇಯ 44 ರನ್​ ಬಾರಿಸಿದರು.

ಈ ಮೂಲಕ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 186 ರನ್​ಗಳಿಸಿ 2ನೇ ದಿನದಾಟ ಅಂತ್ಯಗೊಳಿಸಿತ್ತು. ಆದರೆ ಮೂರನೇ ದಿನದಾಟದ ಆರಂಭಕ್ಕೂ ಮುನ್ನ ಡಿಕ್ಲೇರ್ ಘೋಷಿಸಿ ಇಂಗ್ಲೆಂಡ್ ತಂಡವನ್ನು ದ್ವಿತೀಯ ಇನಿಂಗ್ಸ್​ಗೆ ಆಹ್ವಾನಿಸಿತು.

479 ರನ್​ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಯಶಸ್ವಿಯಾದರು. ಟ್ಯಾಮಿ (17)ಯನ್ನು ಕ್ಲೀನ್ ಬೌಲ್ಡ್​ ಮಾಡುವ ಮೂಲಕ ರೇಣುಕಾ ಸಿಂಗ್ ಮೊದಲ ಯಶಸ್ಸು ತಂದುಕೊಟ್ಟರೆ, ಇದರ ಬೆನ್ನಲ್ಲೇ ಪೂಜಾ ವಸ್ತ್ರಾಕರ್ ಸೋಫಿಯಾ ಡಂಕ್ಲಿ (15), ನ್ಯಾಟ್ ಸ್ಕಿವರ್-ಬ್ರಂಟ್ (0) ಹಾಗೂ ಹೀದರ್ ನೈಟ್ (21) ವಿಕೆಟ್ ಪಡೆದರು.

ಮತ್ತೊಂದೆಡೆ ಡೇನಿಯಲ್ ವ್ಯಾಟ್ (12) ಹಾಗೂ ಆಮಿ ಜೋನ್ಸ್​ (5) ಗೆ ಪೆವಿಲಿಯನ್ ಹಾದಿ ತೋರಿಸುವಲ್ಲಿ ದೀಪ್ತಿ ಶರ್ಮಾ ಯಶಸ್ವಿಯಾದರು. ಆ ಬಳಿಕ ಸೋಫಿ ಎಕ್ಲೆಸ್ಟೋನ್ (10) ರಾಜೇಶ್ವರಿ ಗಾಯಕ್ವಾಡ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಅಂತಿಮವಾಗಿ ಇಂಗ್ಲೆಂಡ್ ತಂಡವನ್ನು ಕೇವಲ 131 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ 347 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ್ದ ದೀಪ್ತಿ ಶರ್ಮಾ ದ್ವಿತೀಯ ಇನಿಂಗ್ಸ್​ನಲ್ಲೂ 4 ವಿಕೆಟ್ ಉರುಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡರು.

ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಭಾರತ ಪ್ಲೇಯಿಂಗ್ XI: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ ರಾಣಾ, ಶುಭಾ ಸತೀಶ್, ಪೂಜಾ ವಸ್ತ್ರಾಕರ್, ರೇಣುಕಾ ಠಾಕೂರ್ ಸಿಂಗ್, ರಾಜೇಶ್ವರಿ ಗಾಯಕ್ವಾಡ್.

ಇದನ್ನೂ ಓದಿ: IPL 2024: ಐಪಿಎಲ್​ಗಾಗಿ ಕೆಎಲ್ ರಾಹುಲ್ ಮಾಸ್ಟರ್ ಪ್ಲ್ಯಾನ್

ಇಂಗ್ಲೆಂಡ್ ಪ್ಲೇಯಿಂಗ್ XI: ಟಮ್ಮಿ ಬ್ಯೂಮಾಂಟ್, ಸೋಫಿಯಾ ಡಂಕ್ಲಿ, ಹೀದರ್ ನೈಟ್ (ನಾಯಕಿ), ನ್ಯಾಟ್ ಸ್ಕೈವರ್-ಬ್ರಂಟ್, ಡೇನಿಯಲ್ ವ್ಯಾಟ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಸೋಫಿ ಎಕ್ಲೆಸ್ಟೋನ್, ಷಾರ್ಲೆಟ್ ಡೀನ್, ಕೇಟ್ ಕ್ರಾಸ್, ಲಾರೆನ್ ಫೈಲರ್, ಲಾರೆನ್ ಬೆಲ್.

Published On - 11:42 am, Sat, 16 December 23

ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!