Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs AUSW: ಭಾರತ ವನಿತಾ ಪಡೆಗೆ ಹೀನಾಯ ಸೋಲು; ಏಕದಿನ ಸರಣಿ ಆಸೀಸ್ ಕೈವಶ

INDW vs AUSW: ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವು ಭಾರತವನ್ನು 122 ರನ್‌ಗಳ ಅಂತರದಿಂದ ಸೋಲಿಸಿದೆ. ಆಸ್ಟ್ರೇಲಿಯಾ ನೀಡಿದ 372 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಭಾರತ ಕೇವಲ 249 ರನ್‌ಗಳಿಗೆ ಆಲೌಟ್ ಆಯಿತು.

INDW vs AUSW: ಭಾರತ ವನಿತಾ ಪಡೆಗೆ ಹೀನಾಯ ಸೋಲು; ಏಕದಿನ ಸರಣಿ ಆಸೀಸ್ ಕೈವಶ
ಭಾರತ- ಆಸ್ಟ್ರೇಲಿಯಾ ವನಿತಾ ಪಡೆ
Follow us
ಪೃಥ್ವಿಶಂಕರ
|

Updated on:Dec 08, 2024 | 2:37 PM

ಒಂದೆಡೆ ಭಾರತ ಹಾಗೂ ಆಸ್ಟ್ರೇಲಿಯಾ ಪುರುಷ ತಂಡಗಳ ನಡುವೆ ನಡೆದ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದ್ದರೆ, ಮತ್ತೊಂದೆಡೆ ಬ್ರಿಸ್ಬೇನ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಆಸ್ಟ್ರೇಲಿಯಾ ತಂಡದ ವಿರುದ್ಧ ಸತತ ಎರಡನೇ ಸೋಲು ಕಂಡಿದೆ. ಆಸ್ಟ್ರೇಲಿಯಾ ನೀಡಿದ 372 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಕೇವಲ 249 ರನ್​ಗಳಿಗೆ ಆಲೌಟ್ ಆಗುವ ಮೂಲಕ ಬರೋಬ್ಬರಿ 122 ರನ್​ಗಳ ಅಂತರದಿಂದ ಹೀನಾಯ ಸೋಲುಕಂಡಿದೆ. ಈ ಮೂಲಕ ಹರ್ಮನ್​ಪ್ರೀತ್ ಕೌರ್ ಪಡೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯನ್ನು ಕಳೆದುಕೊಂಡಿದೆ.

ಆಸೀಸ್ ಆಟಗಾರ್ತಿಯರ ಸ್ಫೋಟಕ ಬ್ಯಾಟಿಂಗ್

ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 371 ರನ್​ಗಳ ಬೃಹತ್ ಗುರಿ ನೀಡಿತು. ಆಸ್ಟ್ರೇಲಿಯಾ ಪರ, ಜಾರ್ಜಿಯಾ ವೋಲ್ ಮತ್ತು ಎಲಿಸ್ ಪೆರ್ರಿ ಅದ್ಭುತ ಶತಕ ಸಿಡಿಸಿ ತಂಡವನ್ನು ಬಲಿಷ್ಠ ಸ್ಥಿತಿಯಲ್ಲಿ ಇರಿಸಿದರು. ಇದಕ್ಕೆ ಉತ್ತರವಾಗಿ ಭಾರತ ತಂಡ 249 ರನ್‌ಗಳಿಗೆ ಆಲೌಟ್ ಆಯಿತು.

ಆಸೀಸ್ ಪರ ತಮ್ಮ ಎರಡನೇ ಏಕದಿನ ಪಂದ್ಯವನ್ನು ಆಡಿದ ಯುವ ಬ್ಯಾಟರ್ ಜಾರ್ಜಿಯಾ ವೋಲ್ ಕೇವಲ 87 ಎಸೆತಗಳಲ್ಲಿ 101 ರನ್‌ ಕಲೆಹಾಕುವುದರೊಂದಿಗೆ ತಮ್ಮ ವೃತ್ತಿಜೀವನದ ಮೊದಲ ಶತಕ ಗಳಿಸುವಲ್ಲಿ ಯಶಸ್ವಿಯಾದರು. ಇತ್ತ ಪೆರ್ರಿ ಕೂಡ 75 ಎಸೆತಗಳಲ್ಲಿ ಆರು ಸಿಕ್ಸರ್ ಮತ್ತು 7 ಸಹಾಯದಿಂದ 105 ರನ್ ಗಳಿಸುವ ಮೂಲಕ ಟೀಂ ಇಂಡಿಯಾವನ್ನು ಆರಂಭದಲ್ಲೇ ಪಂದ್ಯದಿಂದ ಹೊರಹಾಕಿದರು.

ಭಾರತಕ್ಕೆ 122 ರನ್​ಗಳ ಸೋಲು

ಆಸ್ಟ್ರೇಲಿಯಾ ನೀಡಿದ ಈ ಬೃಹತ್ ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭದಲ್ಲೇ ಆಘಾತ ಎದುರಿಸಿತು. ಅನುಭವಿ ಬ್ಯಾಟರ್ ಸ್ಮೃತಿ ಮಂದಾನ 9 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆದರೆ ಸ್ಮೃತಿ ಜೊತೆ ಇನಿಂಗ್ಸ್ ಆರಂಭಿಸಿದ್ದ ರಿಚಾ ಘೋಷ್ 72 ಎಸೆತಗಳಲ್ಲಿ 54 ರನ್​ ಗಳಿಸಿ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರಾಡ್ರಿಗಸ್ 43 ರನ್ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ 38 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಮಿನ್ನು ಮಣಿ ಕೊನೆಯ ಓವರ್‌ಗಳಲ್ಲಿ 45 ಎಸೆತಗಳಲ್ಲಿ ಅಜೇಯ 46 ರನ್ ಗಳಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಪುರುಷರ ತಂಡಕ್ಕೂ ಸೋಲು

ಮೇಲೆ ಹೇಳಿದಂತೆ 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸೀಸ್ ಪ್ರವಾಸದಲ್ಲಿರುವ ಭಾರತ ಪುರುಷರ ತಂಡ ಕೂಡ ಆತಿಥೇಯ ತಂಡದ ವಿರುದ್ಧ ಸೋಲು ಅನುಭವಿಸಬೇಕಾಯಿತು. ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ್ದ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‌ಗಳ ಸೋಲು ಅನುಭವಿಸಿದೆ. ಅಷ್ಟೇ ಅಲ್ಲ ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಭಾರತ ಕೂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಆಸ್ಟ್ರೇಲಿಯ ಈಗ ನಂಬರ್ ಒನ್ ಸ್ಥಾನ ತಲುಪಿದ್ದರೆ, ಟೀಂ ಇಂಡಿಯಾ ನೇರವಾಗಿ ಮೂರನೇ ಸ್ಥಾನಕ್ಕೆ ಕುಸಿದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Sun, 8 December 24

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ