AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಆಸ್ಟ್ರೇಲಿಯಾದ 8 ವರ್ಷಗಳ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಭಾರತ

India Stuns Australia, Enters 2025 Women's World Cup Final: 2025ರ ಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಜೆಮಿಮಾ ರಾಡ್ರಿಗಸ್ ಅವರ ಅದ್ಭುತ ಆಟದಿಂದ 339 ರನ್‌ಗಳ ಬೃಹತ್ ಗುರಿ ಬೆನ್ನತ್ತಿ, ಮೂರನೇ ಬಾರಿಗೆ ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಪ್ರಶಸ್ತಿಗಾಗಿ ಭಾರತ ಕಾದಾಟ ನಡೆಸಲಿದೆ. ಇದು 8 ವರ್ಷಗಳ ಬಳಿಕ ಆಸ್ಟ್ರೇಲಿಯಾಕ್ಕೆ ಮೊದಲ ಸೋಲು.

World Cup 2025: ಆಸ್ಟ್ರೇಲಿಯಾದ 8 ವರ್ಷಗಳ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಭಾರತ
India Vs Australia
ಪೃಥ್ವಿಶಂಕರ
|

Updated on: Oct 30, 2025 | 11:40 PM

Share

2025 ರ ಮಹಿಳಾ ವಿಶ್ವಕಪ್‌ನಲ್ಲಿ (Women’s World Cup 2025) ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಇಡೀ ವಿಶ್ವ ಕ್ರಿಕೆಟ್ ನಿರೀಕ್ಷಿಸದ ಪವಾಡವನ್ನು ಸೃಷ್ಟಿಸಿದೆ. ಮಹಿಳಾ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ ತಂಡ (India vs Australia) ಮೂರನೇ ಬಾರಿಗೆ ವಿಶ್ವಕಪ್ ಫೈನಲ್​ಗೇರಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ 89 ರನ್‌ಗಳ ಇನ್ನಿಂಗ್ಸ್ ಮತ್ತು ಜೆಮಿಮಾ ರೊಡ್ರಿಗಸ್ ಅವರ ಶತಕದಿಂದಾಗಿ ಭಾರತ 339 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು. ಭಾರತಕ್ಕೆ ಈ ಗೆಲುವು ಸ್ಮರಣೀಯವಾಗಿದ್ದು, ಬರೋಬ್ಬರಿ 8 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡ ವಿಶ್ವಕಪ್ ಪಂದ್ಯವನ್ನು ಸೋತ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. ಇತ್ತ ಮೊದಲ ಬಾರಿಗೆ ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಇಷ್ಟು ದೊಡ್ಡ ರನ್ ಚೇಸ್ ಮಾಡಿದ ವಿಶ್ವ ದಾಖಲೆಯನ್ನು ಹರ್ಮನ್​ ಪಡೆ ಸೃಷ್ಟಿಸಿದೆ.

8 ವರ್ಷಗಳ ಅಜೇಯ ಓಟಕ್ಕೆ ಬ್ರೇಕ್

ಮೇಲೆ ಹೇಳಿದಂತೆ ಈ ಗೆಲುವಿನೊಂದಿಗೆ ಭಾರತವು ಮಹಿಳಾ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಎಂಟು ವರ್ಷಗಳ ಅಜೇಯ ಓಟಕ್ಕೆ ಬ್ರೇಕ್ ಹಾಕಿದೆ . ಆಸ್ಟ್ರೇಲಿಯಾ ತಂಡವು ಈ ಹಿಂದೆ 2017 ರಲ್ಲಿ ನಡೆದ ಮಹಿಳಾ ವಿಶ್ವಕಪ್‌ನಲ್ಲಿ ಸೋತಿತ್ತು. ಅಂದಿನಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ. ಅಚ್ಚರಿಯ ಸಂಗತಿಯೆಂದರೆ 2017 ರಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ್ದು, ಇದೇ ಭಾರತ ಮಹಿಳಾ ತಂಡ.

ಭಾರತ- ಆಫ್ರಿಕಾ ನಡುವೆ ಪ್ರಶಸ್ತಿ ಫೈಟ್

ಇದೀಗ 2025 ರ ಮಹಿಳಾ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿರುವ ಟೀಂ ಇಂಡಿಯಾ ನವೆಂಬರ್ 2, 2025 ರಂದು ನಡೆಯಲಿರುವ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪೈನಲ್ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಜಗತ್ತಿಗೆ ಹೊಸ ವಿಶ್ವ ಚಾಂಪಿಯನ್ ಸಿಗಲಿದೆ. ಫೈನಲ್ ಪಂದ್ಯ ಕೂಡ ಇದೇ ನವಿ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯಲಿದೆ.

World Cup 2025: ಆಸ್ಟ್ರೇಲಿಯಾದ ಗರ್ವಭಂಗ; ವಿಶ್ವಕಪ್ ಫೈನಲ್​ಗೇರಿದ ಟೀಂ ಇಂಡಿಯಾ

3ನೇ ಬಾರಿಗೆ ಫೈನಲ್ ಆಡಲಿದೆ ಭಾರತ

ಭಾರತ ತಂಡವು ಮೂರನೇ ಬಾರಿಗೆ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ಗೆ ಅರ್ಹತೆ ಪಡೆದಿದೆ. ಇದಕ್ಕೂ ಮೊದಲು, ಭಾರತ ತಂಡವು 2005 ಮತ್ತು 2017 ರಲ್ಲಿ ರನ್ನರ್-ಅಪ್ ಸ್ಥಾನ ಗಳಿಸಿತ್ತು. ಹಾಗೆಯೇ ಈ ಪಂದ್ಯದಲ್ಲಿ 338 ರನ್ ಗುರಿ ಬೆನ್ನಟ್ಟುವ ಮೂಲಕ ಟೀಂ ಇಂಡಿಯಾ ಏಕದಿನ ವಿಶ್ವಕಪ್ ನಾಕೌಟ್‌ನಲ್ಲಿ (ಪುರುಷ ಅಥವಾ ಮಹಿಳಾ) 300 ಕ್ಕಿಂತ ಹೆಚ್ಚು ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಮೊದಲ ತಂಡ ಎನಿಸಿಕೊಂಡಿದೆ. 2015 ರ ಪುರುಷರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ವಿರುದ್ಧ 298 ರನ್ ಗುರಿ ಬೆನ್ನಟ್ಟಿದ್ದು, ಇದುವರೆಗಿನ ಅತ್ಯಧಿಕ ಚೇಸ್ ಆಗಿತ್ತು.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!