AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games 2023: ಭಾರತ- ಶ್ರೀಲಂಕಾ ನಡುವೆ ಫೈನಲ್; ಪಂದ್ಯ ಎಷ್ಟು ಗಂಟೆಗೆ ಆರಂಭ ಗೊತ್ತಾ?

Asian Games 2023: ಸೋಮವಾರ ಚಿನ್ನದ ಪದಕ ಹಾಗೂ ಕಂಚಿನ ಪದಕದ ಪಂದ್ಯಗಳು ನಡೆಯಲಿವೆ. ಚಿನ್ನದ ಪದಕದ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿದ್ದು, ಕಂಚಿನ ಪದಕಕ್ಕಾಗಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳು ಸೆಣಸಲಿವೆ. ಅಂದರೆ ಏಷ್ಯನ್ ಗೇಮ್ಸ್​ನಲ್ಲಿ ಕ್ರಿಕೆಟ್​ನಿಂದ ಭಾರತಕ್ಕೆ ಪದಕ ಖಚಿತವಾಗಿದ್ದು, ಫೈನಲ್​ನಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು ಸೋಲಿಸಿ ಚಿನ್ನದ ಪದಕ ಗೆಲ್ಲುವ ನಿರೀಕ್ಷೆ ಇದೆ.

Asian Games 2023: ಭಾರತ- ಶ್ರೀಲಂಕಾ ನಡುವೆ ಫೈನಲ್; ಪಂದ್ಯ ಎಷ್ಟು ಗಂಟೆಗೆ ಆರಂಭ ಗೊತ್ತಾ?
ಭಾರತ- ಶ್ರೀಲಂಕಾ
ಪೃಥ್ವಿಶಂಕರ
|

Updated on: Sep 25, 2023 | 6:45 AM

Share

ಏಷ್ಯನ್ ಗೇಮ್ಸ್​ನಲ್ಲಿ (Asian Games 2023) ಭಾರತ ಮಹಿಳಾ ಕ್ರಿಕೆಟ್ ತಂಡ (India women’s cricket team) ಫೈನಲ್ ಆಡುವುದು ಕನ್ಫರ್ಮ್ ಆಗಿದ್ದು, ಇದೀಗ ಚಿನ್ನದ ಪದಕದ ಪಂದ್ಯದಲ್ಲಿ ಯಾವ ತಂಡವನ್ನು ಎದುರಿಸಲಿದೆ ಎಂಬುದು ಕೂಡ ನಿರ್ಧರವಾಗಿದೆ. ಮಹಿಳಾ ಕ್ರಿಕೆಟ್‌ನ ಎರಡನೇ ಸೆಮಿಫೈನಲ್‌ನಲ್ಲಿ ಶ್ರೀಲಂಕಾ, ಪಾಕಿಸ್ತಾನವನ್ನು (Sri lanka vs Pakistan) ಸೋಲಿಸಿ ಫೈನಲ್‌ಗೆ ಟಿಕೆಟ್ ಖಚಿತ ಪಡಿಸಿಕೊಂಡಿದೆ. ಇದೀಗ ಸೋಮವಾರ ಭಾರತ ಮತ್ತು ಶ್ರೀಲಂಕಾ ನಡುವೆ ಚಿನ್ನದ ಪದಕದ ಪಂದ್ಯ ನಡೆಯಲಿದೆ.ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡ ಕೇವಲ 75 ರನ್ ಗಳಿಸಲಷ್ಟೇ ಶಕ್ತವಾಗಿದ್ದು, ಶ್ರೀಲಂಕಾ ಈ ಗುರಿಯನ್ನು ಸುಲಭವಾಗಿ ಸಾಧಿಸಿತು. ಈ 20 ಓವರ್‌ಗಳ ಪಂದ್ಯದಲ್ಲಿ ಶ್ರೀಲಂಕಾ 6 ವಿಕೆಟ್‌ಗಳಿಂದ ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟಿತು.

75 ರನ್​ಗಳಿಗೆ ಕುಸಿದ ಪಾಕಿಸ್ತಾನ

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ ಕೇವಲ 75 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ಶಾವಲ್ ಜುಲ್ಫಿಕರ್ ಗರಿಷ್ಠ 16 ರನ್ ಗಳಿಸಿದರೆ, ಕೇವಲ 3 ಆಟಗಾರ್ತಿಯರು ಮಾತ್ರ ಎರಡಂಕಿ ದಾಟಿದರು. ಇನ್ನು ಈ ಗುರಿ ಬೆನ್ನಟ್ಟಿದ ಶ್ರೀಲಂಕಾ 17ನೇ ಓವರ್​ನಲ್ಲಿಯೇ ಗುರಿ ತಲುಪಿ ಪದಕ ಭದ್ರಪಡಿಸಿಕೊಂಡಿತು.

ಏಷ್ಯನ್ ಗೇಮ್ಸ್​ನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ: 8 ವಿಕೆಟ್​ಗಳ ಜಯ

ಪದಕ ಖಚಿತ

ಇದೀಗ ಸೋಮವಾರ ಚಿನ್ನದ ಪದಕ ಹಾಗೂ ಕಂಚಿನ ಪದಕದ ಪಂದ್ಯಗಳು ನಡೆಯಲಿವೆ. ಚಿನ್ನದ ಪದಕದ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿದ್ದು, ಕಂಚಿನ ಪದಕಕ್ಕಾಗಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳು ಸೆಣಸಲಿವೆ. ಅಂದರೆ ಏಷ್ಯನ್ ಗೇಮ್ಸ್​ನಲ್ಲಿ ಕ್ರಿಕೆಟ್​ನಿಂದ ಭಾರತಕ್ಕೆ ಪದಕ ಖಚಿತವಾಗಿದ್ದು, ಫೈನಲ್​ನಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು ಸೋಲಿಸಿ ಚಿನ್ನದ ಪದಕ ಗೆಲ್ಲುವ ನಿರೀಕ್ಷೆ ಇದೆ.

ಫೈನಲ್ ಪಂದ್ಯದ ವಿವರ ಹೀಗಿದೆ

ಏಷ್ಯನ್ ಗೇಮ್ಸ್ 2022 ರ ಮಹಿಳಾ ಕ್ರಿಕೆಟ್ ಇವೆಂಟ್‌ನಲ್ಲಿ ಭಾರತ ಒಂದು ಪಂದ್ಯವನ್ನು ಗೆದ್ದು ಫೈನಲ್‌ಗೆ ನೇರ ಸ್ಥಾನವನ್ನು ಪಡೆದುಕೊಂಡಿದೆ. ಟೀಂ ಇಂಡಿಯಾ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು ಎದುರಿಸಿತ್ತು. ಆದರೆ ಮಳೆಯಿಂದಾಗಿ ಆ ಪಂದ್ಯ ನಡೆಯಲಿಲ್ಲ. ಹೀಗಾಗಿ ಭಾರತ ಸೆಮಿಫೈನಲ್‌ ಪ್ರವೇಶಿಸಿತ್ತು. ಇಲ್ಲಿ ಬಾಂಗ್ಲಾದೇಶ ತಂಡವನ್ನು ಬಹಳ ಸುಲಭವಾಗಿ ಸೋಲಿಸಿದ ಭಾರತ ಇದೀಗ ಫೈನಲ್​ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸೋಮವಾರ ಬೆಳಗ್ಗೆ 11.30ಕ್ಕೆ ಆರಂಭವಾಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!