AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಆತಿಥೇಯ ಇಂಗ್ಲೆಂಡ್‌ ವಿರುದ್ಧ 97 ರನ್​ಗಳ ಜಯ ಸಾಧಿಸಿದ ಟೀಂ ಇಂಡಿಯಾ

India Women's Cricket Team Wins by 97 Runs Against England: ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಬರೋಬ್ಬರಿ 97 ರನ್​ಗಳಿಂದ ಜಯಗಳಿಸಿದೆ. ಸ್ಮೃತಿ ಮಂಧಾನ ಅವರ ಶತಕ ಮತ್ತು ಶ್ರೀ ಚರಣಿ ಅವರ 4 ವಿಕೆಟ್‌ಗಳು ಭಾರತದ ಗೆಲುವಿಗೆ ಪ್ರಮುಖ ಕಾರಣವಾದವು. ಭಾರತ ನೀಡಿದ 210 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 113 ರನ್​ಗಳಿಗೆ ಆಲೌಟ್ ಆಯಿತು. ಈ ಜಯದೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

IND vs ENG: ಆತಿಥೇಯ ಇಂಗ್ಲೆಂಡ್‌ ವಿರುದ್ಧ 97 ರನ್​ಗಳ ಜಯ ಸಾಧಿಸಿದ ಟೀಂ ಇಂಡಿಯಾ
Ind Vs Eng
ಪೃಥ್ವಿಶಂಕರ
|

Updated on:Jun 28, 2025 | 10:36 PM

Share

ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸ್ಮೃತಿ ಮಂಧಾನ (Smriti Mandhana) ನಾಯಕತ್ವದ ಭಾರತ ಮಹಿಳಾ ತಂಡ ಬರೋಬ್ಬರಿ 97 ರನ್​ಗಳ ದಾಖಲೆಯ ಗೆಲುವು ದಾಖಲಿಸಿದೆ. ಭಾರತ ನೀಡಿದ 210 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ವನಿತಾ ಪಡೆ, ಸ್ಮೃತಿ ಪಡೆಯ ಮಾರಕ ದಾಳಿಗೆ ತತ್ತರಿಸಿ ಪೂರ್ಣ 20 ಓವರ್​ಗಳನ್ನು ಆಡಲು ಸಾಧ್ಯವಾಗದೆ ಕೇವಲ 113 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ನಾಯಕಿ ನ್ಯಾಟ್ ಸಿವರ್-ಬ್ರಂಟ್ ಏಕಾಂಗಿ ಹೋರಾಟ ನೀಡಿ 66 ರನ್ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲಾಗಲಿಲ್ಲ. ಇತ್ತ ಭಾರತದ ಪರ ನಾಯಕಿ ಸ್ಮೃತಿ ಮಂಧಾನ ಸ್ಫೋಟಕ ಶತಕ ಸಿಡಿಸಿದರೆ, ಭಾರತದ ಪರ ಚೊಚ್ಚಲ ಪಂದ್ಯವನ್ನಾಡಿದ ಶ್ರೀ ಚರಣಿ (Nallapureddy Charani) 4 ವಿಕೆಟ್ ಕಬಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಭಾರತಕ್ಕೆ ಉತ್ತಮ ಆರಂಭ

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಲಭಿಸಿತು. ನಾಯಕಿ ಸ್ಮೃತಿ ಮಂಧಾನ ಹಾಗೂ ಯುವ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಮೊದಲ ವಿಕೆಟ್​ಗೆ 77 ರನ್‌ಗಳ ಸ್ಫೋಟಕ ಜೊತೆಯಾಟ ಹಂಚಿಕೊಂಡರು. ಆದಾಗ್ಯೂ, 8 ತಿಂಗಳ ನಂತರ ತಂಡಕ್ಕೆ ಮರಳಿದ ಶೆಫಾಲಿ ಈ ಬಾರಿಯೂ ತಮ್ಮ ಬ್ಯಾಟಿಂಗ್‌ನಿಂದ ಅದ್ಭುತಗಳನ್ನು ಮಾಡಲು ಸಾಧ್ಯವಾಗದೆ 22 ಎಸೆತಗಳಲ್ಲಿ ಕೇವಲ 20 ರನ್‌ ಗಳಿಸಿ ಔಟಾದರು. ಆದರೆ ಶೆಫಾಲಿ ವಿಕೆಟ್ ಪತನದ ಬಳಿಕ ಬಂದ ಹರ್ಲೀನ್ ಡಿಯೋಲ್, ಮಂಧಾನಗೆ ಉತ್ತಮ ಸಾಥ್ ನೀಡಿದರು. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸುಮಾರು 200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ 94 ರನ್‌ ಕಲೆಹಾಕಿದರು.

ಅತ್ಯಧಿಕ ಟಿ20 ಸ್ಕೋರ್ ದಾಖಲು

ಇದೇ ವೇಳೆ ನಾಯಕಿ ಮಂಧಾನ ಕೇವಲ 51 ಎಸೆತಗಳಲ್ಲಿ ತಮ್ಮ ಮೊದಲ ಟಿ20 ಅಂತರರಾಷ್ಟ್ರೀಯ ಶತಕ ಪೂರೈಸಿದರು. ಇದರೊಂದಿಗೆ ಈ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅರ್ಧಶತಕದಂಚಿನಲ್ಲಿ ಎಡವಿದ ಹರ್ಲೀನ್ ಡಿಯೋಲ್ 43 ರನ್ ಗಳಿಸಿ ಔಟಾದರು. ಡಿಯೋಲ್ ವಿಕೆಟ್ ಪತನದ ಬಳಿಕ ಬಂದ ಕೆಳ ಕ್ರಮಾಂಕದ ಬ್ಯಾಟರ್​ಗಳಿಗೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. ಆದಾಗ್ಯೂ ಸ್ಮೃತಿ ಅವರ ಸ್ಫೋಟಕ ಶತಕದಿಂದಾಗಿ ಭಾರತ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್‌ಗಳಿಗೆ 210 ರನ್ ಗಳಿಸಿ ಇಂಗ್ಲೆಂಡ್ ವಿರುದ್ಧ ಎರಡನೇ ಅತ್ಯಧಿಕ ಮತ್ತು ಅತ್ಯಧಿಕ ಟಿ20 ಸ್ಕೋರ್ ದಾಖಲಿಸಿತು. ಇಂಗ್ಲೆಂಡ್ ಪರ, ವೇಗಿ ಲಾರೆನ್ ಬೆಲ್ 27 ರನ್‌ಗಳಿಗೆ 3 ವಿಕೆಟ್ ಪಡೆದರು.

ಇಂಗ್ಲೆಂಡ್​ಗೆ ಆರಂಭಿಕ ಆಘಾತ

ಭಾರತ ನೀಡಿದ 210 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್​ಗೆ ಉತ್ತಮ ಆರಂಭ ಸಿಗಲಿಲ್ಲ. ಯುವ ಬೌಲರ್ ಅಮನ್‌ಜೋತ್ ಕೌರ್, ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಸೋಫಿಯಾ ಡಂಕ್ಲಿ ಅವರ ವಿಕೆಟ್ ಪಡೆದು ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿದರು. ಆ ನಂತರ ದೀಪ್ತಿ ಶರ್ಮಾ ಮುಂದಿನ ಓವರ್‌ನಲ್ಲಿ ಎರಡನೇ ಆರಂಭಿಕ ಆಟಗಾರ್ತಿ ಡೇನಿಯಲ್ ವ್ಯಾಟ್-ಹಾಡ್ಜ್ ಅವರನ್ನು ಸಹ ಔಟ್ ಮಾಡಿದರು. ಇದಾದ ನಂತರವೂ ಇಂಗ್ಲೆಂಡ್ ತಂಡದ ವಿಕೆಟ್‌ಗಳು ನಿಗದಿತ ಅಂತರದಲ್ಲಿ ಬೀಳುತ್ತಲೇ ಇದ್ದವು.

IND vs ENG: ಇಂಗ್ಲೆಂಡ್‌ ವಿರುದ್ಧದ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಸ್ಮೃತಿ ಮಂಧಾನ

ಚೊಚ್ಚಲ ಪಂದ್ಯದಲ್ಲಿ 4 ವಿಕೆಟ್ ಪಡೆದ ಚರಣಿ

ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನೀಡಿದ ನಾಯಕಿ ಸಿವರ್-ಬ್ರಂಟ್ 66 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಆದರೆ 13 ನೇ ಓವರ್‌ನಲ್ಲಿ ಚರಣಿ ಅವರ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸುವ ಮೂಲಕ ಸಿವರ್-ಬ್ರಂಟ್ ಭಾರತದ ಗೆಲುವನ್ನು ಖಚಿತಪಡಿಸಿದರು. ಚರಣಿ ಒಂದೇ ಓವರ್‌ನಲ್ಲಿ ಕೊನೆಯ 2 ವಿಕೆಟ್‌ಗಳನ್ನು ಪಡೆದು ಇಂಗ್ಲೆಂಡ್‌ ಆಟವನ್ನು ಕೊನೆಗೊಳಿಸಿದರು. ಭಾರತದ ಪರ ಚೊಚ್ಚಲ ಪಂದ್ಯವನ್ನಾಡಿದ 20 ವರ್ಷದ ಯುವ ಸ್ಪಿನ್ನರ್ ಶ್ರೀ ಚರಣಿ 3.5 ಓವರ್‌ಗಳಲ್ಲಿ ಕೇವಲ 20 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆದರು. ಅಂತಿಮವಾಗಿ 113 ರನ್​ಗಳಿಗೆ ಆಲೌಟ್ ಆದ ಇಂಗ್ಲೆಂಡ್ ತಂಡ ಈ ಸೋಲಿನೊಂದಿಗೆ ಸತತ 11 ಟಿ20 ಪಂದ್ಯಗಳ ಗೆಲುವಿನ ಸರಣಿಗೆ ಅಂತ್ಯ ಹಾಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Sat, 28 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ