India Test Squad: ಭಾರತ ಟೆಸ್ಟ್ ತಂಡ ಪ್ರಕಟ
India vs Australia: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಣ ಸರಣಿ ಫೆಬ್ರವರಿ 15 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಪಂದ್ಯಗಳ ಟಿ20 ಸಿರೀಸ್ ಜರುಗಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಹಾಗೆಯೇ ಮಾರ್ಚ್ 6 ರಿಂದ ಏಕೈಕ ಟೆಸ್ಟ್ ಪಂದ್ಯ ಶುರುವಾಗಲಿದೆ.

ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಈ ತಂಡದಲ್ಲಿ ಪ್ರತೀಕಾ ರಾವಲ್ ಕೂಡ ಕಾಣಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್ನ ಅಂತಿಮ ಪಂದ್ಯಗಳ ವೇಳೆ ಗಾಯಗೊಂಡಿದ್ದ ಪ್ರತೀಕಾ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಹೀಗಾಗಿ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಈ ಬಾರಿ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪತ್ರೀಕಾ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.
ಮತ್ತೊಂದೆಡೆ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಕೂಡ ತಂಡದಲ್ಲಿದ್ದಾರೆ. ಹೀಗಾಗಿ ಶಫಾಲಿಯನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಿ ಪ್ರಯೋಗ ನಡೆಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಹಾಗೆಯೇ ಜೆಮಿಮಾ ರೊಡ್ರಿಗಸ್, ಅಮನ್ಜೋತ್ ಕೌರ್, ಹರ್ಲೀನ್ ಡಿಯೋಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇವರೊಂದಿಗೆ ವಿಕೆಟ್ ಕೀಪರ್ಗಳಾಗಿ ಆಯ್ಕೆಯಾಗಿರುವುದು ರಿಚಾ ಘೋಷ್ ಹಾಗೂ ಉಮಾ ಚೆಟ್ರಿ.
ಇನ್ನು ವೇಗದ ಬೌಲರ್ಗಳಾಗಿ ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್ ಟೀಮ್ ಇಂಡಿಯಾದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅದರಂತೆ ಭಾರತ ಮಹಿಳಾ ಟೆಸ್ಟ್ ತಂಡ ಈ ಕೆಳಗಿನಂತಿದೆ.
ಭಾರತ ಮಹಿಳಾ ಟೆಸ್ಟ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್ , ಅಮನ್ಜೋತ್ ಕೌರ್, ರಿಚಾ ಘೋಷ್ ( ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರೇಣುಕಾ ಸಿಂಗ್ ಠಾಕೂರ್, ಸ್ನೇಹ್ ರಾಣಾ, ಕ್ರಾಂತಿ ಗೌಡ್, ವೈಷ್ಣವಿ ಶರ್ಮಾ, ಸಯಾಲಿ ಸತ್ಘರೆ.
ಇದನ್ನೂ ಓದಿ: ಇದು ಟೀಮ್ ಇಂಡಿಯಾ, ಟಿ20 ವಿಶ್ವಕಪ್ಗೂ ಮುನ್ನ ಇತರೆ ತಂಡಗಳಿಗೆ ಎಚ್ಚರಿಕೆ!
ಭಾರತ ಮಹಿಳಾ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ,ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಕಾಶ್ವೀ ಗೌತಮ್, ಅಮನ್ಜೋತ್ ಕೌರ್, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್.
ಭಾರತ ಮಹಿಳಾ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಅಮನ್ಜೋತ್ ಕೌರ್, ಜೆಮಿಮಾ ರೊಡ್ರಿಗಸ್, ಭಾರ್ತಿ ಫುಲ್ಮಾಲಿ, ಶ್ರೇಯಾಂಕಾ ಪಾಟೀಲ್.
