
ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ಟೂರ್ನಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಲಿಷ್ಠ ಪಡೆಯನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಈ ಬಾರಿಯ ತಂಡದಲ್ಲಿ 17 ವರ್ಷದ ಯುವ ವಿಕೆಟ್ ಕೀಪರ್-ಬ್ಯಾಟರ್ ಜಿ. ಕಮಲಿನಿ ಅವರ ಸೇರ್ಪಡೆಯಾಗಿದ್ದಾರೆ. ಮಹಿಳಾ ಟಿ20 ವಿಶ್ವಕಪ್ ವೇಳೆ ಟೀಮ್ ಇಂಡಿಯಾದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ಅವರು ತಂಡದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಕಮಲಿನಿ ಆಯ್ಕೆಯಾಗಿದ್ದಾರೆ. ಅದರಂತೆ ಏಷ್ಯನ್ ಗೇಮ್ಸ್ಗೆ ಭಾರತ ತಂಡ ಈ ಕೆಳಗಿನಂತಿದೆ…
ಶ್ರೇಯಾಂಕಾ ಪಾಟೀಲ್ ಟಿ20 ವಿಶ್ವಕಪ್ ವೇಳೆ ಗಾಯಗೊಂಡಿದ್ದರು. ಇದಾಗ್ಯೂ ಅವರನ್ನು ಏಷ್ಯನ್ ಗೇಮ್ಸ್ಗೆ ಆಯ್ಕೆ ಮಾಡಲಾಗಿದೆ. ಆದರೆ ಈ ಟೂರ್ನಿಗೂ ಮುನ್ನ ಅವರು ಫಿಟ್‌ನೆಸ್ ಕ್ಲಿಯರೆನ್ಸ್ ಮಾಡಿಕೊಳ್ಳಬೇಕಿದೆ. ಒಂದು ವೇಳೆ ಶ್ರೇಯಾಂಕಾ ಏಷ್ಯನ್ ಗೇಮ್ಸ್ ವೇಳೆಗೆ ಫಿಟ್ ಆಗದಿದ್ದರೆ ಅವರ ಬದಲಿಗೆ ಬೇರೆಯವರನ್ನು ಆಯ್ಕೆ ಮಾಡಲಿದ್ದಾರೆ.
ಜಪಾನ್ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಗಳು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 3, 2026ರವರೆಗೆ ನಡೆಯಲಿದೆ. ಈ ಟೂರ್ನಿಯ ಎಲ್ಲಾ ಪಂದ್ಯಗಳು ಟಿ20ಸ್ವರೂಪದಲ್ಲಿ ಆಡಲಾಗುತ್ತದೆ.
ಇನ್ನು ಮಹಿಳಾ ಏಷ್ಯನ್ ಗೇಮ್ಸ್ ಕ್ರಿಕೆಟ್ ಟೂರ್ನಿಯಲ್ಲಿಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, ಭಾರತ ತಂಡವು ನೇರವಾಗಿ ಕ್ವಾರ್ಟರ್ ಫೈನಲ್‌ನಿಂದ ಕಣಕ್ಕಿಳಿಯಲಿದೆ.
ಇದನ್ನೂ ಓದಿ: FIFA World Cup 2026: ಪೆನಾಲ್ಟಿ ಶೂಟೌಟ್‌ನಲ್ಲಿ 2 ಬಲಿಷ್ಠ ತಂಡಗಳು ಕಿಕ್ ಔಟ್..!
ಮಹಿಳಾ ವಿಭಾಗದ ಪಂದ್ಯಗಳು ಸೆಪ್ಟೆಂಬರ್ 17, 2026 ರಂದು ಆರಂಭವಾಗಲಿದ್ದು, ಅಂದೇ ಭಾರತ ತಂಡವು ತನ್ನ ಕ್ವಾರ್ಟರ್ ಫೈನಲ್ ಪಂದ್ಯವನ್ನು ಆಡಲಿದೆ. ಬಿಸಿಸಿಐ ಮೂಲಗಳ ಪ್ರಕಾರ, ಕ್ವಾಲಿಫೈಯರ್ಸ್ ಹಂತದಿಂದ ಬಂದ ಕೆಳ ಶ್ರೇಯಾಂಕದ ತಂಡವೊಂದು (ಥಾಯ್ಲೆಂಡ್, ಮಲೇಷ್ಯಾ ಅಥವಾ ಚೀನಾ) ಕ್ವಾರ್ಟರ್ ಫೈನಲ್‌ನಲ್ಲಿ ಭಾರತಕ್ಕೆ ಎದುರಾಳಿಯಾಗುವ ಸಾಧ್ಯತೆ ಇದೆ.