AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ವರ್ಷಗಳ ಹಳೆಯ ಲೆಕ್ಕ ಚುಕ್ತಾ ಮಾಡಿದ ಟೀಮ್ ಇಂಡಿಯಾ

New Zealand vs India: ಚಾಂಪಿಯನ್ಸ್ ಟ್ರೋಫಿಯ 12ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ ಜಯಭೇರಿ ಬಾರಿಸಿದೆ. ಈ ಮೂಲಕ ಟೀಮ್ ಇಂಡಿಯಾ ಕಿವೀಸ್ ಪಡೆ ವಿರುದ್ಧ 25 ವರ್ಷಗಳ ಹಳೆಯ ಲೆಕ್ಕವನ್ನು ಚುಕ್ತಾ ಮಾಡಿದ್ದಾರೆ. ಅಂದರೆ 2000ರ ಬಳಿಕ ಇದು ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಝಿಲೆಂಡ್ ವಿರುದ್ಧದ ಭಾರತದ ಮೊದಲ ಗೆಲುವು ಎಂಬುದು ವಿಶೇಷ.

25 ವರ್ಷಗಳ ಹಳೆಯ ಲೆಕ್ಕ ಚುಕ್ತಾ ಮಾಡಿದ ಟೀಮ್ ಇಂಡಿಯಾ
Team India Image Credit source: PTI
ಝಾಹಿರ್ ಯೂಸುಫ್
|

Updated on: Mar 03, 2025 | 7:12 AM

Share

ಐಸಿಸಿ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಪಾಲಿಗೆ ಕಿವೀಸ್ ಪಡೆ ಹಲವು ಬಾರಿ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ. ಅದು 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಆಗಿರಬಹುದು. ಇಲ್ಲ 2021ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಆಗಿರಬಹುದು. ಹೀಗೆ ಐಸಿಸಿ ಟೂರ್ನಿಗಳಲ್ಲಿ ಭಾರತದ ವಿರುದ್ಧ ನ್ಯೂಝಿಲೆಂಡ್ ಪಾರುಪತ್ಯ ಮೆರೆದ ಹಲವು ನಿದರ್ಶನಗಳಿವೆ. ಆದರೆ ಈ ಬಾರಿ ಹಾಗೆ ಆಗಲಿಲ್ಲ.

ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್​ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಭಾರತ ಬಗ್ಗು ಬಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಶ್ರೇಯಸ್ ಅಯ್ಯರ್ 77 ರನ್​ಗಳ ಕೊಡುಗೆ ನೀಡಿದರು. ಇನ್ನು ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ 45 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 249 ರನ್ ಬಾರಿಸಿದರು.

250 ರನ್​ಗಳ ಸಾಧಾರಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡವು ಈ ಬಾರಿ ಕೂಡ ಭಾರತಕ್ಕೆ ಸೋಲುಣಿಸಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಟೀಮ್ ಇಂಡಿಯಾದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

10 ಓವರ್​ಗಳಲ್ಲಿ ಕೇವಲ 42 ರನ್ ನೀಡಿದ ವರುಣ್ ಚಕ್ರವರ್ತಿ 5 ಪ್ರಮುಖ ವಿಕೆಟ್ ಕಬಳಿಸಿದರು. ಪರಿಣಾಮ 45.3 ಓವರ್​ಗಳಲ್ಲಿ 205 ರನ್​ಗಳಿಸಿ ನ್ಯೂಝಿಲೆಂಡ್ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ 44 ರನ್​ಗಳ ಭರ್ಜರಿ ಜಯ ಸಾಧಿಸಿದೆ.

25 ವರ್ಷಗಳ ಹಳೆಯ ಲೆಕ್ಕ ಚುಕ್ತಾ:

ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಝಿಲೆಂಡ್ ತಂಡಕ್ಕೆ ಸೋಲುಣಿಸಿದೆ. 2000 ರಲ್ಲಿ ಉಭಯ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಿದ್ದವು. ಈ ವೇಳೆ ಭಾರತ ತಂಡಕ್ಕೆ 4 ವಿಕೆಟ್​ಗಳ ಸೋಲುಣಿಸಿ ನ್ಯೂಝಿಲೆಂಡ್ ಟ್ರೋಫಿ ಎತ್ತಿ ಹಿಡಿದಿತ್ತು.

ಇದಾದ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ಪಡೆಯನ್ನು ಸೋಲಿಸಲು ಟೀಮ್ ಇಂಡಿಯಾಗೆ ಸಾಧ್ಯವಾಗಿರಲಿಲ್ಲ. ಇದೀಗ ಬರೋಬ್ಬರಿ 25 ವರ್ಷಗಳ ಬಳಿಕ ಭಾರತೀಯ ಪಡೆ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದಿದೆ. ಈ ಮೂಲಕ 2 ದಶಕಗಳ ಹಳೆಯ ಲೆಕ್ಕವನ್ನು ಟೀಮ್ ಇಂಡಿಯಾ ಚುಕ್ತಾ ಮಾಡಿದೆ.

ಇದನ್ನೂ ಓದಿ: ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು

ಇನ್ನು ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡ ಮುಖಾಮುಖಿಯಾದರೆ, ಮಾರ್ಚ್ 5 ರಂದು ಜರುಗಲಿರುವ ಎರಡನೇ ಸೆಮಿಫೈನಲ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಲಿದೆ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ