Asia Cup 2023: ಪಾಕ್ ಪ್ರವಾಸ ಕೈಗೊಳ್ಳದಿರಲು ಟೀಮ್ ಇಂಡಿಯಾ ನಿರ್ಧಾರ..!

India vs Pakistan: ಭಾರತ ಕೊನೆಯದಾಗಿ 2005-06ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ದ್ವಿಪಕ್ಷೀಯ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು.

Asia Cup 2023: ಪಾಕ್ ಪ್ರವಾಸ ಕೈಗೊಳ್ಳದಿರಲು ಟೀಮ್ ಇಂಡಿಯಾ ನಿರ್ಧಾರ..!
India vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 18, 2022 | 3:23 PM

2023ರ ಏಷ್ಯಾಕಪ್‌ಗಾಗಿ (Asia Cup 2023) ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಮುಂಬೈನಲ್ಲಿ ನಡೆದ 91ನೇ ಬಿಸಿಸಿಐ (BCCI) ವಾರ್ಷಿಕ ಸಾಮಾನ್ಯ ಸಭೆಯ (AGM) ಬಳಿಕ ಮಾತನಾಡಿದ ಜಯ್​ ಶಾ, ಮುಂದಿನ ಏಷ್ಯಾಕಪ್​ಗಾಗಿ ಭಾರತ ತಂಡವು  ಪಾಕಿಸ್ತಾನ್ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ತಿಳಿಸಿದರು. 2023ರ ಏಷ್ಯಾ ಕಪ್  ಟೂರ್ನಿಯನ್ನು ಪಾಕಿಸ್ತಾನವು ಆಯೋಜಿಸಲಿದೆ. ಆದರೆ ಪಂದ್ಯಾವಳಿಯಲ್ಲಿ ಭಾಗವಹಿಸಲು ಟೀಮ್ ಇಂಡಿಯಾವನ್ನು ಕಳುಹಿಸುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಅಷ್ಟೇ ಅಲ್ಲದೆ ಏಷ್ಯಾಕಪ್ 2023 ಅನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವಂತೆ ಮನವಿ ಮಾಡಲಾಗಿದೆ.

ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಯೋಜಿಸಿದರೆ ಭಾರತ ತಂಡವು ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ. ಬದಲಾಗಿ ಪಾಕ್ ಕ್ರಿಕೆಟ್ ಮಂಡಳಿ ಬೇರೆ ದೇಶದಲ್ಲಿ ಟೂರ್ನಿಯನ್ನು ಆಯೋಜಿಸಿದರೆ ಮಾತ್ರ ಟೀಮ್ ಇಂಡಿಯಾ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಪಿಸಿಬಿ ಇನ್ನೂ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದಾಗ್ಯೂ ಈ ಸಂಬಂಧ ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ.

ಭಾರತ ಕೊನೆಯದಾಗಿ 2005-06ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ದ್ವಿಪಕ್ಷೀಯ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು. ಇನ್ನು ಪಾಕಿಸ್ತಾನ್ ತಂಡವು 2012-13ರಲ್ಲಿ ಕೊನೆಯ ಬಾರಿ ಭಾರತದಲ್ಲಿ ಸರಣಿ ಆಡಿತ್ತು. ಇದಾದ ಬಳಿಕ ಉಭಯ ದೇಶಗಳು ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನು ಆಡಿಲ್ಲ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಇದಾಗ್ಯೂ ಏಷ್ಯಾಕಪ್ ಹಾಗೂ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿತ್ತು. ಆದರೆ ಮುಂದಿನ ವರ್ಷ ಪಾಕಿಸ್ತಾನದಲ್ಲಿ ಏಷ್ಯಾಕಪ್​ ನಡೆಯಲಿದ್ದು, ಆದರೆ ಅದಕ್ಕೂ ಮುನ್ನ ಭಾರತ ತಂಡವು ಟೂರ್ನಿಯಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದೆ.

ಹೀಗಾಗಿ ಪಾಕ್ ಕ್ರಿಕೆಟ್ ಬೋರ್ಡ್ ಟೂರ್ನಿಯನ್ನು ಯುಎಇ ನಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಏಕೆಂದರೆ ಈ ಬಾರಿ ಏಷ್ಯಾಕಪ್​ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ರಾಜಕೀಯ ಅರಾಜಕತೆಯ ಕಾರಣ ಟೂರ್ನಿಯನ್ನು ಯುಎಇ ಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಭಾರತ-ಪಾಕಿಸ್ತಾನ್ ನಡುವೆ ಯಾವುದೇ ರಾಜತಾಂತ್ರಿಕ ಸಂಬಂಧಗಳು ಸುಧಾರಣೆಯಾಗಿಲ್ಲ. ಅಷ್ಟೇ ಅಲ್ಲದೆ ಆಟಗಾರರ ಭದ್ರತೆಯ ಹಿತಾದೃಷ್ಟಿಯಿಂದ ಟೀಮ್ ಇಂಡಿಯಾ ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದೆ.

ಇತ್ತ ಏಷ್ಯಾದ ಬಲಿಷ್ಠ ತಂಡವಾಗಿರುವ ಟೀಮ್ ಇಂಡಿಯಾ ಹೊರಗುಳಿದರೆ ವೀಕ್ಷಕರ ಕೊರತೆ ಎದುರಿಸಲಿದೆ. ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತಟಸ್ಥ ಸ್ಥಳದಲ್ಲಿ ಟೂರ್ನಿಯನ್ನು ಆಯೋಜಿಸಲು ಮುಂದಾಗಲಿದೆಯಾ ಕಾದು ನೋಡಬೇಕಿದೆ.

Published On - 2:41 pm, Tue, 18 October 22

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?