
ಹರಾರೆಯಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ, ಜಿಂಬಾಬ್ವೆಯನ್ನು (India vs Zimbabwe) 35 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 192 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಜಿಂಬಾಬ್ವೆ 20 ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 157 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ, ಜಿಂಬಾಬ್ವೆಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು. ಈ ಮೂಲಕ ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದಲ್ಲಿ ಭಾರತ ಮೊದಲ ಟಿ20 ಸರಣಿ ಗೆದ್ದ ಸಾಧನೆಯನ್ನೂ ಮಾಡಿತು. ಇದಕ್ಕೂ ಮೊದಲು ಶ್ರೇಯಸ್ ನಾಯಕತ್ವದಲ್ಲಿ ಭಾರತ, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು.
ಈ ಪಂದ್ಯದಲ್ಲೂ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಅಭಿಷೇಕ್ ಶರ್ಮಾ ಕೇವಲ 2 ರನ್ ಗಳಿಸಿ ಔಟಾದರು. ನಂತರ ಜೊತೆಯಾದ ವೈಭವ್ ಸೂರ್ಯವಂಶಿ ಮತ್ತು ಇಶಾನ್ ಕಿಶನ್ ಜೋಡಿ ಎರಡನೇ ವಿಕೆಟ್‌ಗೆ 75 ರನ್‌ಗಳ ಜೊತೆಯಾಟವಾಡಿದರು. ಇಶಾನ್ 29 ರನ್ ಗಳಿಸಿದ ನಂತರ ಔಟಾದರು. ಅದರ ನಂತರ, ವೈಭವ್ ಮತ್ತು ಶ್ರೇಯಸ್ ಅಯ್ಯರ್ ಇನ್ನಿಂಗ್ಸ್ ಅನ್ನು ಮುಂದಕ್ಕೆ ಕೊಂಡೊಯ್ದರು. ಒಟ್ಟಿಗೆ, ಇಬ್ಬರೂ 50 ರನ್‌ಗಳನ್ನು ಸೇರಿಸಿದರು. ಇದೇ ವೇಳೆ ವೈಭವ್ ತಮ್ಮ ಅರ್ಧಶತಕವನ್ನೂ ಪೂರೈಸಿದರು.
ಆ ಬಳಿಕವೂ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ ವೈಭವ್ ಸೂರ್ಯವಂಶಿ 49 ಎಸೆತಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 81 ರನ್ ಗಳಿಸಿ ಔಟಾದರು. ಶ್ರೇಯಸ್ ಅಯ್ಯರ್ ಅವರ ಇನ್ನಿಂಗ್ಸ್ ಕೂಡ 27 ರನ್‌ಗಳಿಗೆ ಕೊನೆಗೊಂಡಿತು. ರಿಂಕು ಸಿಂಗ್ 14 ಎಸೆತಗಳಲ್ಲಿ 25 ರನ್ ಗಳಿಸಿ ಔಟಾದರು. ತಿಲಕ್ ವರ್ಮಾ 9 ಎಸೆತಗಳಲ್ಲಿ 11 ರನ್ ಗಳಿಸಿ ಅಜೇಯರಾಗಿ ಉಳಿದರು.
ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆಗೆ ಮಾಯಾಂಕ್ ಯಾದವ್ ಮೊದಲ ಓವರ್ನಲ್ಲೇ ಆಘಾತ ನೀಡಿದರು. ಮಯಾಂಕ್ ಮೊದಲ ಎಸೆತದಲ್ಲೇ ಬ್ರಿಯಾನ್ ಬೆನೆಟ್ ಅವರ ವಿಕೆಟ್ ಪಡೆದರು. ಆದಾದ ಬಳಿಕವೂ ಜಿಂಬಾಬ್ವೆಯ ಪೆವಿಲಿಯನ್ ಪರೇಡ್ ಮುಂದುವರೆಯಿತು. ಹೀಗಾಗಿ ಜಿಂಬಾಬ್ವೆ ಪವರ್‌ಪ್ಲೇನಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 53 ರನ್ ಗಳಿಸಿತು. ಬ್ರಿಯಾನ್ ಬೆನೆಟ್ ಶೂನ್ಯಕ್ಕೆ ಔಟಾದರೆ, ನಾಯಕ ಸಿಕಂದರ್ ರಜಾ ಕೂಡ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.
IND vs ZIM: ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ
ಬೆನ್ ಕರನ್ 20 ರನ್‌ಗಳ ಇನ್ನಿಂಗ್ಸ್ ಆಡಿದರೆ, ಡಿಯೋನ್ ಮೈಯರ್ಸ್ 19 ರನ್‌ಗಳ ಇನ್ನಿಂಗ್ಸ್ ಆಡಿದರು. ವೆಸ್ಲಿ ಮಾಧೇವೆರೆ 28 ರನ್‌ಗಳಿಸಿದರೆ, ದಿವಾನಾಶೆ ಮರುಮಾನಿ 1 ರನ್ ಗಳಿಸಿ ಔಟಾದರು. ರಯಾನ್ ಬರ್ಲ್ 42 ಎಸೆತಗಳಲ್ಲಿ ಅರ್ಧಶತಕ ಗಳಿಸಿ 54 ರನ್‌ಗಳೊಂದಿಗೆ ಅಜೇಯರಾಗಿ ಉಳಿದರು. ಭಾರತ ಪರ ಮಾಯಾಂಕ್ ಯಾದವ್ 3 ವಿಕೆಟ್ ಪಡೆದರೆ, ಯಶ್ ಠಾಕೂರ್ 2 ವಿಕೆಟ್ ಪಡೆದರು. ಅಶೋಕ್ ಶರ್ಮಾ ಮತ್ತು ರವಿ ಬಿಷ್ಣೋಯ್ ತಲಾ ಒಂದು ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:32 pm, Sun, 26 July 26