AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS, Air Show: ವಿಶ್ವಕಪ್ ಸಮಾರೋಪ ಸಮಾರಂಭದಲ್ಲಿ ಸೂರ್ಯ ಕಿರಣ್ ತಂಡದಿಂದ ವೈಮಾನಿಕ ಪ್ರದರ್ಶನ

IND vs AUS, Air Show: ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ಧತೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ತಾರೆಯರು ಕಾರ್ಯಕ್ರಮ ನೀಡುವ ಸಾಧ್ಯತೆ ಇದೆ. ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡವು ತಮ್ಮ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಲಿದೆ ಎಂದು ವರದಿಯಾಗಿದೆ.

IND vs AUS, Air Show: ವಿಶ್ವಕಪ್ ಸಮಾರೋಪ ಸಮಾರಂಭದಲ್ಲಿ ಸೂರ್ಯ ಕಿರಣ್ ತಂಡದಿಂದ ವೈಮಾನಿಕ ಪ್ರದರ್ಶನ
ನರೇಂದ್ರ ಮೋದಿ ಮೈದಾನImage Credit source: insidesport
ಪೃಥ್ವಿಶಂಕರ
|

Updated on:Nov 17, 2023 | 11:52 AM

Share

ವಿಶ್ವಕಪ್ (ICC World Cup 2023) ಕ್ರಿಕೆಟ್‌ನ ಫೈನಲ್‌ಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಇಡೀ ದೇಶದಲ್ಲಿ ಈ ಬಾರಿಯ ವಿಶ್ವಕಪ್‌ ಫೈನಲ್‌ ಬಗ್ಗೆ ಸಂಭ್ರಮ ಮನೆ ಮಾಡಿದೆ. ಏಕೆಂದರೆ ಟೀಂ ಇಂಡಿಯಾ ಅಬ್ಬರದಿಂದ ಫೈನಲ್ ಪ್ರವೇಶಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium in Ahmedabad) ಫೈನಲ್ ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ಹಾಗೂ ಸಾಂಪ್ರದಾಯಿಕ ಎದುರಾಳಿ ಆಸ್ಟ್ರೇಲಿಯಾ (India Vs Australia) ನಡುವೆ ಫೈನಲ್ ಪಂದ್ಯ ನಡೆಯಲಿದೆ. ಈ ಮಹಾ ಸಂಗ್ರಾಮವನ್ನು ಇನ್ನಷ್ಟು ವಿಶೇಷಗೊಳಿಸುವ ನಿಟ್ಟಿನಲ್ಲಿ ಬಿಸಿಸಿಐ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ ಈ ವಿಚಾರದ ಬಗ್ಗೆ ಐಸಿಸಿ ಆಗಲಿ ಅಥವಾ ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆದರೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಮಾರೋಪ ಸಮಾರಂಭಕ್ಕೆ (Cosing Ceremony) ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ಧತೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ತಾರೆಯರು ಕಾರ್ಯಕ್ರಮ ನೀಡುವ ಸಾಧ್ಯತೆ ಇದೆ. ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡವು ತಮ್ಮ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಲಿದೆ ಎಂದು ವರದಿಯಾಗಿದೆ.

ICC World Cup 2023: ವಿಶ್ವಕಪ್ ಫೈನಲ್ ಪಂದ್ಯಕ್ಕೆ ಪ್ರಧಾನಿ ಮೋದಿ ಉಪಸ್ಥಿತಿ ಸಾಧ್ಯತೆ

ವೈಮಾನಿಕ ಪ್ರದರ್ಶನ

ನವೆಂಬರ್ 19 ರಂದು ಫೈನಲ್ ಪಂದ್ಯ ಪ್ರಾರಂಭವಾಗುವ ಮೊದಲು ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು 10 ನಿಮಿಷಗಳ ವೈಮಾನಿಕ ಪ್ರದರ್ಶನವನ್ನು ನಡೆಸಲಿದೆ ಎಂದು ವರದಿಯಾಗಿದೆ. ಅದಕ್ಕೆ ಪೂರಕವಾಗಿ ಶುಕ್ರವಾರ ಮತ್ತು ಶನಿವಾರ ಈ ತಂಡ ಅಭ್ಯಾಸ ನಡೆಸಲಿದೆ ಎಂದು ವರದಿಯಾಗಿದ್ದು, ಸ್ಥಳೀಯ ನೃತ್ಯ ಗುಂಪುಗಳು ಸಹ ಫೈನಲ್​ಗೂ ಮುನ್ನ ಪ್ರದರ್ಶನ ನೀಡುವ ಸಲುವಾಗಿ ಕ್ರೀಡಾಂಗಣದಲ್ಲಿ ನೃತ್ಯಾಭ್ಯಾಸ ಮಾಡುತ್ತಿವೆ ಎಂದು ವರದಿಯಾಗಿದೆ.

ವಿಡಿಯೋ ವೈರಲ್

ವಾಸ್ತವವಾಗಿ ಈ ಬಾರಿಯ ವಿಶ್ವಕಪ್​ ಉದ್ಘಾಟನಾ ಪಂದ್ಯ ಕೂಡ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲೇ ನಡೆದಿತ್ತು. ಆದರೆ ಅಂದು ಉದ್ಘಾಟನಾ ಸಮಾರಂಭ ನಡೆದಿರಲಿಲ್ಲ. ಬದಲಿಗೆ, ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ ಪಂದ್ಯದ ಸಂದರ್ಭದಲ್ಲಿ ಪೂರ್ವ ಪಂದ್ಯ ಮತ್ತು ಪಂದ್ಯದ ಮಧ್ಯಭಾಗದಲ್ಲಿ ಮನರಂಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಇದೀಗ ಸಮಾರೋಪ ಸಮಾರಂಭದ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ತುಣುಕುಗಳು ಈ ಸುದ್ದಿಗೆ ಪುಷ್ಠಿ ನೀಡುತ್ತಿವೆ. ಇದಕ್ಕೆ ಪೂರಕವೆಂಬಂತೆ ವೈರಲ್ ಆಗಿರುವ ವಿಡಿಯೋದಲ್ಲಿ ಎರಡು ಜೆಟ್ ವಿಮಾನಗಳು ಹಾರಾಟ ನಡೆಸುತ್ತಿರುವುದನ್ನು ಕಾಣಬಹುದಾಗಿದೆ.

ಭಾರತ- ಆಸೀಸ್ ಫೈನಲ್ ಫೈಟ್

ಮೇಲೆ ಹೇಳಿದಂತೆ ಟೀಂ ಇಂಡಿಯಾ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಮೂಲಕ 20 ವರ್ಷಗಳ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲ್ಲಿದೆ. ವಾಸ್ತವವಾಗಿ 2003ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ವಿಶ್ವಕಪ್‌ ನಡೆದಿತ್ತು. ಆ ವೇಳೆ ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಇದೀಗ ಆ ಸೋಲಿಗೆ ಸೇಡು ತೀರಿಸಕೊಳ್ಳುವುದರೊಂದಿಗೆ ವಿಶ್ವಕಪ್ ಎತ್ತಿ ಹಿಡಿಯುವ ಅವಕಾಶ ಟೀಂ ಇಂಡಿಯಾಕ್ಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:52 am, Fri, 17 November 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?