ವಿಶ್ವಕಪ್ (ICC World Cup 2023) ಕ್ರಿಕೆಟ್‌ನ ಫೈನಲ್‌ಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಇಡೀ ದೇಶದಲ್ಲಿ ಈ ಬಾರಿಯ ವಿಶ್ವಕಪ್ ಫೈನಲ್ ಬಗ್ಗೆ ಸಂಭ್ರಮ ಮನೆ ಮಾಡಿದೆ. ಏಕೆಂದರೆ ಟೀಂ ಇಂಡಿಯಾ ಅಬ್ಬರದಿಂದ ಫೈನಲ್ ಪ್ರವೇಶಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium in Ahmedabad) ಫೈನಲ್ ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ಹಾಗೂ ಸಾಂಪ್ರದಾಯಿಕ ಎದುರಾಳಿ ಆಸ್ಟ್ರೇಲಿಯಾ (India Vs Australia) ನಡುವೆ ಫೈನಲ್ ಪಂದ್ಯ ನಡೆಯಲಿದೆ. ಈ ಮಹಾ ಸಂಗ್ರಾಮವನ್ನು ಇನ್ನಷ್ಟು ವಿಶೇಷಗೊಳಿಸುವ ನಿಟ್ಟಿನಲ್ಲಿ ಬಿಸಿಸಿಐ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ ಈ ವಿಚಾರದ ಬಗ್ಗೆ ಐಸಿಸಿ ಆಗಲಿ ಅಥವಾ ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆದರೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಮಾರೋಪ ಸಮಾರಂಭಕ್ಕೆ (Cosing Ceremony) ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.
ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ಧತೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ತಾರೆಯರು ಕಾರ್ಯಕ್ರಮ ನೀಡುವ ಸಾಧ್ಯತೆ ಇದೆ. ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡವು ತಮ್ಮ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಲಿದೆ ಎಂದು ವರದಿಯಾಗಿದೆ.
ICC World Cup 2023: ವಿಶ್ವಕಪ್ ಫೈನಲ್ ಪಂದ್ಯಕ್ಕೆ ಪ್ರಧಾನಿ ಮೋದಿ ಉಪಸ್ಥಿತಿ ಸಾಧ್ಯತೆ
ನವೆಂಬರ್ 19 ರಂದು ಫೈನಲ್ ಪಂದ್ಯ ಪ್ರಾರಂಭವಾಗುವ ಮೊದಲು ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು 10 ನಿಮಿಷಗಳ ವೈಮಾನಿಕ ಪ್ರದರ್ಶನವನ್ನು ನಡೆಸಲಿದೆ ಎಂದು ವರದಿಯಾಗಿದೆ. ಅದಕ್ಕೆ ಪೂರಕವಾಗಿ ಶುಕ್ರವಾರ ಮತ್ತು ಶನಿವಾರ ಈ ತಂಡ ಅಭ್ಯಾಸ ನಡೆಸಲಿದೆ ಎಂದು ವರದಿಯಾಗಿದ್ದು, ಸ್ಥಳೀಯ ನೃತ್ಯ ಗುಂಪುಗಳು ಸಹ ಫೈನಲ್ಗೂ ಮುನ್ನ ಪ್ರದರ್ಶನ ನೀಡುವ ಸಲುವಾಗಿ ಕ್ರೀಡಾಂಗಣದಲ್ಲಿ ನೃತ್ಯಾಭ್ಯಾಸ ಮಾಡುತ್ತಿವೆ ಎಂದು ವರದಿಯಾಗಿದೆ.
More exclusive footages from Narendra Modi Stadium, Ahmedabad.
Something is cooking for #CWC23 Finals 🤩✨#SAvsAUS #CricketTwitter #ViratKohli pic.twitter.com/evP4LFXMy0
— Ishan Joshi (@ishanjoshii) November 16, 2023
ವಾಸ್ತವವಾಗಿ ಈ ಬಾರಿಯ ವಿಶ್ವಕಪ್ ಉದ್ಘಾಟನಾ ಪಂದ್ಯ ಕೂಡ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲೇ ನಡೆದಿತ್ತು. ಆದರೆ ಅಂದು ಉದ್ಘಾಟನಾ ಸಮಾರಂಭ ನಡೆದಿರಲಿಲ್ಲ. ಬದಲಿಗೆ, ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ ಪಂದ್ಯದ ಸಂದರ್ಭದಲ್ಲಿ ಪೂರ್ವ ಪಂದ್ಯ ಮತ್ತು ಪಂದ್ಯದ ಮಧ್ಯಭಾಗದಲ್ಲಿ ಮನರಂಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಇದೀಗ ಸಮಾರೋಪ ಸಮಾರಂಭದ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ತುಣುಕುಗಳು ಈ ಸುದ್ದಿಗೆ ಪುಷ್ಠಿ ನೀಡುತ್ತಿವೆ. ಇದಕ್ಕೆ ಪೂರಕವೆಂಬಂತೆ ವೈರಲ್ ಆಗಿರುವ ವಿಡಿಯೋದಲ್ಲಿ ಎರಡು ಜೆಟ್ ವಿಮಾನಗಳು ಹಾರಾಟ ನಡೆಸುತ್ತಿರುವುದನ್ನು ಕಾಣಬಹುದಾಗಿದೆ.
Something is cooking at Narendra Modi Stadium, Ahmedabad ahead of Cricket World Cup 2023 Final.
Seems like staging company doing a work for the Closing Ceremony.
(Yet to Confirm but samething was happen like this during IPL 2023 Closing Ceremony) pic.twitter.com/8dGEHoqbty— Baljeet Singh (@ImTheBaljeet) November 16, 2023
ಮೇಲೆ ಹೇಳಿದಂತೆ ಟೀಂ ಇಂಡಿಯಾ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಮೂಲಕ 20 ವರ್ಷಗಳ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲ್ಲಿದೆ. ವಾಸ್ತವವಾಗಿ 2003ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ವಿಶ್ವಕಪ್ ನಡೆದಿತ್ತು. ಆ ವೇಳೆ ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಇದೀಗ ಆ ಸೋಲಿಗೆ ಸೇಡು ತೀರಿಸಕೊಳ್ಳುವುದರೊಂದಿಗೆ ವಿಶ್ವಕಪ್ ಎತ್ತಿ ಹಿಡಿಯುವ ಅವಕಾಶ ಟೀಂ ಇಂಡಿಯಾಕ್ಕಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:52 am, Fri, 17 November 23