Ravindra Jadeja: ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ಭರ್ತಿ 15 ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ರವೀಂದ್ರ ಜಡೇಜಾ

Ravindra Jadeja: ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ​ ಕಾಲಿಟ್ಟು 15 ತುಂಬಿದೆ. 2009ರಲ್ಲಿ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದೊಂದಿಗೆ ಭಾರತ ಏಕದಿನ ಕ್ರಿಕೆಟ್‌ಗೆ ಜಡೇಜಾ ಪಾದಾರ್ಪಣೆ ಮಾಡಿದ್ದರು. ಅಂದಿನಿಂದ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಜಡೇಜಾ ಪ್ರಸ್ತುತ ಭಾರತ ಸ್ಪಿನ್ ಆಲ್‌ರೌಂಡರ್ ವಿಭಾಗದ ಜೀವಾಳವಾಗಿದ್ದಾರೆ.

Ravindra Jadeja: ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ಭರ್ತಿ 15 ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ  ರವೀಂದ್ರ ಜಡೇಜಾ
ರವೀಂದ್ರ ಜಡೇಜಾ
Follow us
ಪೃಥ್ವಿಶಂಕರ
|

Updated on:Feb 08, 2024 | 7:16 PM

ಪ್ರಸ್ತುತ ಗಾಯಗೊಂಡು ಟೀಂ ಇಂಡಿಯಾದಿಂದ (Team India) ಹೊರಗುಳಿದಿರುವ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾಗೆ (Ravindra Jadeja) ಇಂದು ಅಂದರೆ ಫೆಬ್ರವರಿ 8 ಬಹಳ ವಿಶೇಷವಾದ ದಿನ. ಏಕೆಂದರೆ ಇದೇ ಜಡ್ಡು ಬರೋಬ್ಬರಿ 15 ವರ್ಷಗಳ ಹಿಂದೆ ರಾಷ್ಟ್ರೀಯ ತಂಡದ ಜೆರ್ಸಿ ಧರಿಸಿ ಮೊದಲ ಬಾರಿಗೆ ಆಡುವ ಅವಕಾಶ ಪಡೆದಿದ್ದರು. ಅಂದರೆ ರವೀಂದ್ರ ಜಡೇಜಾ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ (International Cricket)​ ಬದುಕಿಗೆ ಭರ್ತಿ 15. 2009ರಲ್ಲಿ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದೊಂದಿಗೆ ಭಾರತ ಏಕದಿನ ಕ್ರಿಕೆಟ್‌ಗೆ ಜಡೇಜಾ ಪಾದಾರ್ಪಣೆ ಮಾಡಿದ್ದರು. ಆ ಪಂದ್ಯದಲ್ಲಿ 6 ಓವರ್‌ ಬೌಲ್ ಮಾಡಿದ್ದ ಜಡೇಜಾ ಯಾವುದೇ ವಿಕೆಟ್ ಪಡೆಯಲಿಲ್ಲ. ಆದರೆ ಬ್ಯಾಟಿಂಗ್​ನಲ್ಲಿ ಮ್ಯಾಜಿಕ್ ಮಾಡಿದ್ದ ಜಡೇಜಾ 60 ರನ್‌ಗಳ ಅಜೇಯ ಇನ್ನಿಂಗ್ಸ್‌ ನೀಡಿದರು. ಅಂದಿನಿಂದ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಜಡೇಜಾ ಪ್ರಸ್ತುತ ಭಾರತ ಸ್ಪಿನ್ ಆಲ್‌ರೌಂಡರ್ ವಿಭಾಗದ ಜೀವಾಳವಾಗಿದ್ದಾರೆ.

ಆರಂಭ ಹೇಗಿತ್ತು?

ಅದಾಗ್ಯೂ ಜಡೇಜಾ ಅವರ ವೃತ್ತಿಜೀವನಕ್ಕೆ ಶುಭಾರಂಭ ಸಿಗಲಿಲ್ಲ. ಏಕೆಂದರೆ ಜಡೇಜಾ ಪದಾರ್ಪಣೆ ಮಾಡಿದ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿತ್ತು. ಆ ಪಂದ್ಯವನ್ನು ಶ್ರೀಲಂಕಾ 68 ರನ್‌ಗಳಿಂದ ಗೆದ್ದುಕೊಂಡಿತು. ಆದರೆ ಆ ದಿನ ಜಡೇಜಾಗೆ ಸ್ಮರಣೀಯ ದಿನವಾಗಿತ್ತು. ಅಂದಿನಿಂದ ಇಂದಿನವರೆಗೆ ಟೀಂ ಇಂಡಿಯಾಗೆ ಏಕಾಂಗಿಯಾಗಿ ಅದೇಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷಗಳನ್ನು ಪೂರೈಸಿದ್ದಾರೆ. ಈ ವಿಚಾರವನ್ನು ಸ್ವತಃ ಜಡೇಜಾ ಅವರೇ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

IND vs ENG: ಎನ್​ಸಿಎಗೆ ರವೀಂದ್ರ ಜಡೇಜಾ; ಟೆಸ್ಟ್ ಸರಣಿಯಿಂದ ಔಟ್?

ವಿಶೇಷ ವಿಡಿಯೋ ಹಂಚಿಕೊಂಡ ಜಡ್ಡು

ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಟೀಂ ಇಂಡಿಯಾದಲ್ಲಿ ಆಡಿರುವ ಕೆಲವು ಹಳೆಯ ಚಿತ್ರಗಳ ವೀಡಿಯೊವನ್ನು ಹಂಚಿಕೊಂಡಿರುವ ಜಡೇಜಾ, ’15 ವರ್ಷಗಳ ನನ್ನ ಕನಸನ್ನು ನನಸಾಗಿಸಿದೆ – ಪ್ರತಿ ಕ್ಷಣಕ್ಕೂ ಕೃತಜ್ಞನಾಗಿದ್ದೇನೆ!’ ಎಂದು ಬರೆದುಕೊಂಡಿದ್ದಾರೆ.

2009 ರಲ್ಲಿ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಜಡೇಜಾ ಅದೇ ವರ್ಷ ಅಂದರೆ 2009 ರಂದೇ ಟಿ20 ಸ್ವರೂಪದಲ್ಲೂ ಚೊಚ್ಚಲ ಪಂದ್ಯವನ್ನಾಡಿದ್ದರು. ಒಂದೆರಡು ವರ್ಷಗಳ ನಂತರ, ಜಡೇಜಾ ಇಂಗ್ಲೆಂಡ್ ವಿರುದ್ಧ ನಾಗ್ಪುರದಲ್ಲಿ ನಡೆದ ಟೆಸ್ಟ್ ಪಂದ್ಯದ ಮೂಲಕ ಈ ಸ್ವರೂಪಕ್ಕೂ ಪಾದಾರ್ಪಣೆ ಮಾಡಿದರು. ಅಂದಿನಿಂದ, ಜಡೇಜಾ ಭಾರತ ತಂಡದ ಪ್ರಮುಖ ಸದಸ್ಯರಲ್ಲಿ ಒಬ್ಬರಾಗಿದ್ದಾರೆ.

ಪ್ರಸ್ತುತ ಗಾಯಗೊಂಡಿರುವ ಜಡೇಜಾ

ಸದ್ಯ ರವೀಂದ್ರ ಜಡೇಜಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತದ ಆಲ್ ರೌಂಡರ್ ಜಡೇಜಾ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು. ಅದಕ್ಕಾಗಿಯೇ ಅವರು ಎರಡನೇ ಟೆಸ್ಟ್‌ನಲ್ಲಿ ಆಡಲಿಲ್ಲ. ಆದರೀಗ ಚೇತರಿಸಿಕೊಂಡಿರುವ ಜಡೇಜಾ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆಗಳಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Thu, 8 February 24

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ