Team India: ದ್ವಿತೀಯ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದು ಅನಾನುಭವಿಗಳ ಭಾರತ ತಂಡ

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಫೆಬ್ರವರಿ 2 ರಿಂದ ಶುರುವಾಗಲಿದೆ. ಆಂಧ್ರ ಪ್ರದೇಶದ ವಿಶಾಖ ಪಟ್ಟಣದಲ್ಲಿರುವ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಅಂದರೆ ಮೊದಲ ಪಂದ್ಯದಲ್ಲಿ ಸೋತಿರುವ ಭಾರತ ತಂಡ ಈ ಪಂದ್ಯದಲ್ಲಿ ಗೆದ್ದರೆ ಐದು ಪಂದ್ಯಗಳ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಬಹುದು.

Team India: ದ್ವಿತೀಯ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದು ಅನಾನುಭವಿಗಳ ಭಾರತ ತಂಡ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 01, 2024 | 9:28 AM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಶುಕ್ರವಾರದಿಂದ (ಫೆ.2) ಆರಂಭವಾಗಲಿರುವ ಈ ಪಂದ್ಯವು ವಿಶಾಖಪಟ್ಟಣದ ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅನಾನುಭವಿ ಆಟಗಾರರೊಂದಿಗೆ ಕಣಕ್ಕಿಳಿಯಬೇಕಾದ ಅನಿವಾರ್ತೆ ಎದುರಾಗಿದೆ.

ಏಕೆಂದರೆ ತಂಡದಲ್ಲಿದ್ದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೈಯುಕ್ತಿಕ ಕಾರಣಗಳಿಂದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇನ್ನು ಕೆಎಲ್ ರಾಹುಲ್ ತೊಡೆ ಸಂಧು ನೋವಿನ ಸಮಸ್ಯೆಯ ಕಾರಣ ಅಲಭ್ಯರಾಗಿದ್ದಾರೆ. ಹಾಗೆಯೇ ಮಂಡಿರಜ್ಜು ಗಾಯಕ್ಕೆ ತುತ್ತಾಗಿರುವ ರವೀಂದ್ರ ಜಡೇಜಾ ಕೂಡ ಈ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಮತ್ತೋರ್ವ ಅನುಭವಿ ವೇಗಿ ಮೊಹಮ್ಮದ್ ಶಮಿ ಪಾದದ ನೋವಿನ ಕಾರಣ ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

ಈ ನಾಲ್ವರು ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಟೀಮ್ ಇಂಡಿಯಾ ಯುವ ಬಳಗವನ್ನು ಒಳಗೊಂಡ ತಂಡವನ್ನು ರೂಪಿಸಿದೆ. ಆದರೆ ಇಲ್ಲಿ ಬ್ಯಾಟರ್​ಗಳ ಪಟ್ಟಿಯಲ್ಲಿ ಬಹುತೇಕ ಆಟಗಾರರು ಟೆಸ್ಟ್​ ಕ್ರಿಕೆಟ್​​ನಲ್ಲಿ ಅನಾನುಭವಿಗಳು ಎಂಬುದು ಗಮನಿಸಬೇಕಾದ ಸಂಗತಿ.

ಏಕೆಂದರೆ ರೋಹಿತ್ ಶರ್ಮಾ ಅವರನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಟೆಸ್ಟ್​ನಲ್ಲಿ 50 ಪಂದ್ಯಗಳನ್ನಾಡಿಲ್ಲ. ಇಲ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಯಶಸ್ವಿ ಜೈಸ್ವಾಲ್ ಕೇವಲ 5 ಟೆಸ್ಟ್ ಪಂದ್ಯಗಳ ಅನುಭವ ಹೊಂದಿದ್ದಾರೆ.

ಇನ್ನು ಶುಭ್​ಮನ್ ಗಿಲ್ ಇದುವರೆಗೆ ಆಡಿರುವುದು ಕೇವಲ 21 ಟೆಸ್ಟ್​ ಪಂದ್ಯಗಳನ್ನು ಮಾತ್ರ. ಹಾಗೆಯೇ ಶ್ರೇಯಸ್ ಅಯ್ಯರ್​ ಕೇವಲ 13 ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ಕೆಎಸ್ ಭರತ್ ಖಾತೆಯಲ್ಲಿರುವುದು ಕೇವಲ 6 ಟೆಸ್ಟ್ ಪಂದ್ಯಗಳ ಸಂಖ್ಯೆ.

ಅಂದರೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಬ್ಯಾಟರ್​ಗಳ ಪಟ್ಟಿಯಲ್ಲಿ ಯಾರೂ ಕೂಡ ಅನುಭವಿ ಬ್ಯಾಟರ್​ಗಳಿಲ್ಲ ಎಂಬುದೇ ಸತ್ಯ. ಅದರಲ್ಲೂ 100 ಟೆಸ್ಟ್​ ಪಂದ್ಯಗಳನ್ನಾಡಿರುವ ಒಬ್ಬರೇ ಒಬ್ಬರು ತಂಡದಲ್ಲಿಲ್ಲ.

ಹಾಗೆಯೇ ತಂಡದಲ್ಲಿರುವ ರಜತ್ ಪಾಟಿದಾರ್, ಸರ್ಫರಾಝ್ ಖಾನ್ ಮತ್ತು ಧ್ರುವ್ ಜುರೇಲ್ ಇನ್ನೂ ಕೂಡ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿಲ್ಲ. ಹೀಗಾಗಿ ಈ ಮೂವರು ಬ್ಯಾಟರ್​ಗಳು ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ಸಂಗತಿ ಎಂದರೆ ಟೀಮ್ ಇಂಡಿಯಾದ ಎಲ್ಲಾ ಆಟಗಾರರ ಟೆಸ್ಟ್ ರನ್​ಗಳನ್ನು ಜೊತೆಗೂಡಿಸಿದರೂ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್​ಗಿಂತ ಹಿಂದಿದ್ದಾರೆ. ಅಂದರೆ 136 ಟೆಸ್ಟ್ ಪಂದ್ಯಗಳನ್ನಾಡಿರುವ ಜೋ ರೂಟ್ ಇದುವರೆಗೆ 11447 ರನ್ ಕಲೆಹಾಕಿದ್ದಾರೆ. ಇದರಲ್ಲಿ 5 ದ್ವಿಶತಕಗಳು, 30 ಶತಕಗಳು ಹಾಗೂ 60 ಅರ್ಧಶತಕಗಳು ಸೇರಿವೆ.

ಆದರೆ ಮತ್ತೊಂದೆಡೆ ಎರಡನೇ ಪಂದ್ಯಕ್ಕೆ ಆಯ್ಕೆಯಾಗಿರುವ ಭಾರತ ತಂಡದ ಎಲ್ಲಾ ಆಟಗಾರರು ಜೊತೆಗೂಡಿ ಟೆಸ್ಟ್​ನಲ್ಲಿ ಕಲೆಹಾಕಿರುವ ಒಟ್ಟು ರನ್​ 10726. ಅಂದರೆ ಪ್ರಸ್ತುತ ಭಾರತ ತಂಡದಲ್ಲಿರುವ ಯಾವುದೇ ಬ್ಯಾಟರ್ 5 ಸಾವಿರಕ್ಕಿಂತ ಹೆಚ್ಚು ರನ್ ಕಲೆಹಾಕಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿಯೇ ಬಲಿಷ್ಠ ಇಂಗ್ಲೆಂಡ್ ವಿರುದ್ಧ ಅನಾನುಭವಿ ಭಾರತ ತಂಡ ಹೇಗೆ ಪ್ರದರ್ಶನ ನೀಡಲಿದೆ ಎಂಬುದೇ ಈಗ ಕುತೂಹಲ.

ಇದನ್ನೂ ಓದಿ: IND vs ENG: ಭಾರತದಲ್ಲೇ ಭರ್ಜರಿ ದಾಖಲೆ ಬರೆದ ಇಂಗ್ಲೆಂಡ್

ಭಾರತ ತಂಡದ ಬ್ಯಾಟರ್​ಗಳ ಟೆಸ್ಟ್ ಅನುಭವ:

  • ರೋಹಿತ್ ಶರ್ಮಾ – 55 ಟೆಸ್ಟ್​​
  • ಯಶಸ್ವಿ ಜೈಸ್ವಾಲ್ – 5 ಟೆಸ್ಟ್​​
  • ಶುಭ್​ಮನ್​ ಗಿಲ್ – 21 ಟೆಸ್ಟ್​​
  • ಶ್ರೇಯಸ್ ಅಯ್ಯರ್ – 13 ಟೆಸ್ಟ್​​
  • ಕೆಎಸ್ ಭರತ್ – 6 ಟೆಸ್ಟ್​​
  • ರಜತ್ ಪಾಟಿದಾರ್ – 0
  • ಸರ್ಫರಾಝ್ ಖಾನ್ – 0
  • ಧ್ರುವ್ ಜುರೇಲ್ – 0

ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಝ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್, ಅವೇಶ್ ಖಾನ್.

Published On - 7:20 am, Thu, 1 February 24

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ