ರಾಹುಲ್ ರಾಕೆಟ್ ಥ್ರೋ: ಟೀಮ್ ಇಂಡಿಯಾ ನಾಯಕನ ಅತ್ಯುತ್ತಮ ಫೀಲ್ಡಿಂಗ್ ವಿಡಿಯೋ ವೈರಲ್

India vs South Africa 3rd Odi: ಭಾರತದ ಪರ ಪ್ರಸಿದ್ಧ್ ಕೃಷ್ಣ 59ಕ್ಕೆ 3 ವಿಕೆಟ್ ಪಡೆದರೆ, ದೀಪಕ್ ಚಹರ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿದರು.

ರಾಹುಲ್ ರಾಕೆಟ್ ಥ್ರೋ: ಟೀಮ್ ಇಂಡಿಯಾ ನಾಯಕನ ಅತ್ಯುತ್ತಮ ಫೀಲ್ಡಿಂಗ್ ವಿಡಿಯೋ ವೈರಲ್
IND vs SA
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 23, 2022 | 7:31 PM

ಸರಣಿಯ ಮೂರನೇ ಮತ್ತು ಅಂತಿಮ ಏಕದಿನ (IND vs SA 3 ನೇ ODI) ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 287 ರನ್ ಗಳಿಸಿದೆ. ಇದೀಗ 288 ರನ್​ಗಳ ಟಾರ್ಗೆಟ್ ಪಡೆದಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಗೆಲ್ಲಲು ಶತಾಯಗತಾಯ ಪ್ರಯತ್ನ ಮಾಡಲಿದೆ. ಏಕೆಂದರೆ ಈಗಾಗಲೇ ಮೊದಲ ಎರಡು ಪಂದ್ಯಗಳಲ್ಲಿ ಸೋತಿರುವ ಭಾರತ ಸರಣಿ ಕೈಚೆಲ್ಲಿಕೊಂಡಿತು. ಇನ್ನು ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡರು. ಅಷ್ಟೇ ಅಲ್ಲದೆ ಅತ್ಯುತ್ತಮ ಫೀಲ್ಡಿಂಗ್ ಮೂಲಕ ಕೂಡ ರಾಹುಲ್ ಗಮನ ಸೆಳೆದರು.

ವೇಗಿ ದೀಪಕ್ ಚಹರ್ ಇನಿಂಗ್ಸ್‌ನ ಮೂರನೇ ಓವರ್‌ನ ಮೊದಲ ಎಸೆತದಲ್ಲಿ ಜಾನೆಮನ್ ಮಲನ್‌ ರಿಷಬ್ ಪಂತ್​ಗೆ ಕ್ಯಾಚ್ ನೀಡಿದರು. ಈ ವೇಳೆ ಕಣಕ್ಕಿಳಿದ ನಾಯಕ ಬವುಮಾ ಬ್ಯಾಟಿಂಗ್‌ಗೆ ಬೇಗನೆ ವಿಕೆಟ್ ಒಪ್ಪಿಸಬೇಕಾಯಿತು. ರಾಹುಲ್ ಮಾಡಿದ ಅತ್ಯುತ್ತಮ ಫೀಲ್ಡಿಂಗ್​ನಿಂದಾಗಿ ತೆಂಬಾ ಬಾವುಮಾ ರನ್ ಔಟ್ ಆಗಿ ಹೊರನಡೆದರು. ಇದೀಗ ಈ ಫೀಲ್ಡಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದಾಗ್ಯೂ ದಕ್ಷಿಣ ಆಫ್ರಿಕಾ ಕ್ವಿಂಟನ್ ಡಿ ಕಾಕ್ ಅವರ ಶತಕದ ನೆರವಿನಿಂದ 49.5 ಓವರ್‌ಗಳಲ್ಲಿ 287 ರನ್‌ಗಳಿಸಿತು. ಭಾರತದ ಪರ ಪ್ರಸಿದ್ಧ್ ಕೃಷ್ಣ 59ಕ್ಕೆ 3 ವಿಕೆಟ್ ಪಡೆದರೆ, ದೀಪಕ್ ಚಹರ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿದರು. ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೂಡ 1 ವಿಕೆಟ್ ಪಡೆದರು.

ಇದನ್ನೂ ಓದಿ: Ind vs SA: ಭರ್ಜರಿ ಶತಕ ಸಿಡಿಸಿ ಸಚಿನ್, ಸೆಹ್ವಾಗ್ ದಾಖಲೆ ಮುರಿದ ಕ್ವಿಂಟನ್ ಡಿಕಾಕ್

ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

(Indian captain KL Rahul’s rocket throw dismisses South African skipper Temba Bavuma in 3rd ODI)