ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ

BCCI Central Contracts 2026: ಟಿ20 ವಿಶ್ವಕಪ್ ನಡುವೆ ಬಿಸಿಸಿಐ ಪುರುಷ ಹಾಗೂ ಮಹಿಳಾ ತಂಡಗಳಿಗೆ ಹೊಸ ಕೇಂದ್ರ ಒಪ್ಪಂದ ಪ್ರಕಟಿಸಿದೆ. ಈ ಬಾರಿ A+ ಗ್ರೇಡ್ ರದ್ದುಗೊಳಿಸಲಾಗಿದ್ದು, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ‘ಬಿ’ ಗ್ರೇಡ್‌ಗೆ ಡಿಮೋಟ್ ಮಾಡಲಾಗಿದೆ. ಶುಭ್​ಮನ್ ಗಿಲ್, ಜಸ್ಪ್ರಿತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ‘ಎ’ ಗ್ರೇಡ್‌ನಲ್ಲಿದ್ದಾರೆ. ಒಟ್ಟು 30 ಪುರುಷ ಹಾಗೂ 21 ಮಹಿಳಾ ಆಟಗಾರರು ಹೊಸ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ
Team India

Updated on: Feb 09, 2026 | 9:40 PM

ಟಿ20 ವಿಶ್ವಕಪ್ ನಡುವೆ ಬಿಸಿಸಿಐ (BCCI), ಪುರುಷ ಹಾಗೂ ಮಹಿಳಾ ತಂಡಗಳ ನೂತನ ಕೇಂದ್ರ ಒಪ್ಪಂದ ಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಪುರುಷರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ ಒಟ್ಟು 30 ಆಟಗಾರರು ಸೇರಿದ್ದರೆ, ಮಹಿಳೆಯರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ 21 ಆಟಗಾರ್ತಿಯರು ಸೇರಿದ್ದಾರೆ. ಆದರೆ ಈ ಬಾರಿ ಗ್ರೇಡ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಬಿಸಿಸಿಐ, A+ ಗ್ರೇಡ್ ಅನ್ನು ರದ್ದುಗೊಳಿಸಿದೆ. ಉಳಿದಂತೆ A,B,C ಗ್ರೇಡ್​ನಲ್ಲಿ 30 ಆಟಗಾರರಿಗೆ ಸ್ಥಾನ ನೀಡಲಾಗಿದೆ. ಅದರಂತೆ ಎ ಗ್ರೇಡ್​ನಲ್ಲಿ ಮೂವರು ಆಟಗಾರರು ಸೇರಿದ್ದರೆ, ಬಿ ಗ್ರೇಡ್‌ನಲ್ಲಿ 11 ಆಟಗಾರರು ಮತ್ತು ಸಿ ಗ್ರೇಡ್‌ನಲ್ಲಿ 16 ಆಟಗಾರರು ಸೇರಿದ್ದಾರೆ.

ಈ 3 ಆಟಗಾರರಿಗೆ ಎ ಗ್ರೇಡ್

ಎ ಗ್ರೇಡ್‌ನಲ್ಲಿ ಏಕದಿನ ಮತ್ತು ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್, ಸ್ಟಾರ್ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಮತ್ತು ಆಲ್​ರೌಂಡರ್ ರವೀಂದ್ರ ಜಡೇಜಾ ಸೇರಿದ್ದಾರೆ. ಅದರಂತೆ ಈ ಮೂವರು ಆಟಗಾರರು ಅತ್ಯಧಿಕ ಸಂಭಾವನೆ ಪಡೆಯಲಿದ್ದಾರೆ. ಬಿ ಗ್ರೇಡ್‌ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಕುಲ್ದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಮೊಹಮ್ಮದ್ ಸಿರಾಜ್ ಮತ್ತು ಶ್ರೇಯಸ್ ಅಯ್ಯರ್ ಸೇರಿದ್ದಾರೆ.

ರೋಹಿತ್, ಕೊಹ್ಲಿಗೆ ಹಿಂಬಡ್ತಿ

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಈ ಹಿಂದೆ ಎ+ ಗ್ರೇಡ್‌ನಲ್ಲಿದ್ದರು. ಆದಾಗ್ಯೂ, ಇಬ್ಬರೂ ಆಟಗಾರರು ಟಿ20 ಮತ್ತು ಟೆಸ್ಟ್ ಸ್ವರೂಪಗಳಿಂದ ನಿವೃತ್ತರಾಗಿದ್ದು, ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದಾರೆ. ಇದರ ಪರಿಣಾಮವಾಗಿ ಈ ಇಬ್ಬರಿಗೆ ಹಿಂಬಡ್ತಿ ನೀಡಲಾಗಿದೆ.

ಪುರುಷರ ಕೇಂದ್ರ ಒಪ್ಪಂದ ಪಟ್ಟಿ

ಗ್ರೇಡ್ ಎ: ಶುಭ್​ಮನ್ ಗಿಲ್, ಜಸ್ಪ್ರಿತ್ ಬುಮ್ರಾ, ರವೀಂದ್ರ ಜಡೇಜಾ

ಗ್ರೇಡ್ ಬಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಕುಲ್ದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಮೊಹಮ್ಮದ್ ಸಿರಾಜ್ ಮತ್ತು ಶ್ರೇಯಸ್ ಅಯ್ಯರ್.

ಗ್ರೇಡ್ ಸಿ: ತಿಲಕ್ ವರ್ಮಾ, ಅಕ್ಸರ್ ಪಟೇಲ್, ಶಿವಂ ದುಬೆ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಆಕಾಶ್ ದೀಪ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಧ್ರುವ್ ಜುರೈಲ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ರುತುರಾಜ್ ಗಾಯಕ್ವಾಡ್, ರವಿ ಬಿಷ್ಣೋಯ್, ಮತ್ತು ಸಾಯಿ ಸುದರ್ಶನ್

ಮಹಿಳಾ ತಂಡದ ಹೊಸ ಕೇಂದ್ರ ಗುತ್ತಿಗೆ ಪಟ್ಟಿ

ಗ್ರೇಡ್-ಎ: ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ.

ಗ್ರೇಡ್-ಬಿ: ರೇಣುಕಾ ಠಾಕೂರ್, ಶೆಫಾಲಿ ವರ್ಮಾ, ರಿಚಾ ಘೋಷ್, ಸ್ನೇಹ ರಾಣಾ.

ಗ್ರೇಡ್-ಸಿ: ರಾಧಾ ಯಾದವ್, ಅಮಂಜೋತ್ ಕೌರ್, ಪ್ರತೀಕಾ ರಾವಲ್, ಕ್ರಾಂತಿ ಗೌಡ್, ಉಮಾ ಛೆಟ್ರಿ, ಅರುಂಧತಿ ರೆಡ್ಡಿ, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ಹರ್ಲೀನ್ ಡಿಯೋಲ್, ಕಶ್ವಿ ಗೌತಮ್, ಜಿ ಕಮಲಿನಿ, ವೈಷ್ಣವಿ ಶರ್ಮಾ, ತೇಜಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 pm, Mon, 9 February 26

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us