Team India: 2024 ರಲ್ಲಿ ಭಾರತ ಯಾರ ವಿರುದ್ಧ ಸರಣಿಯನ್ನು ಆಡಲಿದೆ?: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Team India Schedule 2024: ಜನವರಿಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಹಾಗೂ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್ ಜೊತೆಗೆ ಭಾರತ ತಂಡ ವಿವಿಧ ಸ್ವರೂಪಗಳಲ್ಲಿ ಸರಣಿಗಳನ್ನು ಆಡಲಿದೆ.

Team India: 2024 ರಲ್ಲಿ ಭಾರತ ಯಾರ ವಿರುದ್ಧ ಸರಣಿಯನ್ನು ಆಡಲಿದೆ?: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
Team India
Follow us
Vinay Bhat
|

Updated on:Dec 31, 2023 | 11:58 AM

ಭಾರತ ಕ್ರಿಕೆಟ್ ತಂಡಕ್ಕೆ 2023ನೇ ವರ್ಷ ಅದ್ಭುತ ಎಂದು ಹೇಳಲು ಸಾಧ್ಯವಿಲ್ಲ. ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದರೂ ಎರಡು ಬಾರಿ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಟೀಮ್ ಇಂಡಿಯಾ (Team India) ಕಳೆದುಕೊಂಡಿತ್ತು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು 2023 ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಕಂಡಿತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಕಾಣುವ ಮೂಲಕ 2023ನೇ ವರ್ಷವನ್ನು ಕೊನೆಗೊಳಿಸುತ್ತಿದೆ. ಹಾಗಾದರೆ 2024 ರಲ್ಲಿ ಭಾರತ ಕ್ರಿಕೆಟ್ ತಂಡ ಯಾವ ತಂಡದ ವಿರುದ್ಧ ಆಡಲಿದೆ?, ಹೇಗಿದೆ ವೇಳಾಪಟ್ಟಿ? ನೋಡೋಣ.

ಜನವರಿಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಹಾಗೂ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್ ಜೊತೆಗೆ ಭಾರತ ಕ್ರಿಕೆಟ್ ತಂಡ ಅಫ್ಘಾನಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ವಿವಿಧ ಸ್ವರೂಪಗಳಲ್ಲಿ ಸರಣಿಗಳನ್ನು ಆಡಲಿದೆ. ಇದರ ನಡುವೆ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024ರಲ್ಲಿ ಟೀಮ್ ಇಂಡಿಯಾ ಬ್ಯುಸಿಯಾಗಲಿದೆ. ಟಿ20 ವಿಶ್ವಕಪ್ 2024 ಕ್ಕಾಗಿ ಭಾರತ ವೆಸ್ಟ್ ಇಂಡೀಸ್ ಮತ್ತು USA ಗೆ ತೆರಳಲಿದೆ.

IPL 2024: RCB ತಂಡವನ್ನು ನಂಬಿ ಕೆಟ್ಟ ಯುವ ಸ್ಪೋಟಕ ಬ್ಯಾಟರ್..!

ಇದನ್ನೂ ಓದಿ
Image
ಅಭ್ಯಾಸಕ್ಕೆ ಮರಳಿದ ಟೀಮ್ ಇಂಡಿಯಾ ಪ್ಲೇಯರ್ಸ್: ಕೇಪ್ ಟೌನ್​ನಲ್ಲಿ ಕಠಿಣ ಪ್ರ್
Image
ಕೇಪ್​ ಟೌನ್ ಟೆಸ್ಟ್​ಗು ಮುನ್ನ ಟೀಮ್ ಇಂಡಿಯಾಕ್ಕೆ ಶುರುವಾಯಿತು ಆತಂಕ
Image
ಆಫ್ರಿಕಾದಲ್ಲಿ ಮಗಳ ಹುಟ್ಟುಹಬ್ಬವನ್ನು ಭರ್ಜರಿ ಆಗಿ ಆಚರಿಸಿದ ರೋಹಿತ್ ಶರ್ಮಾ
Image
ಭಾರತ-ಆಸೀಸ್ ODI ಪಂದ್ಯದಲ್ಲಿ ಭಾರೀ ಅವಘಡ: ಸ್ನೇಹ್ ರಾಣಗೆ ಮೈದಾನದಲ್ಲೇ ಅನಾ

ಟೀಮ್ ಇಂಡಿಯಾ 2024ರ ಸಂಪೂರ್ಣ ವೇಳಾಪಟ್ಟಿ:

  • ಜನವರಿ 3-7 ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್
  • ಜನವರಿ 11 ರಿಂದ 17 – ತವರಿನಲ್ಲಿ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ T20 ಸರಣಿ
  • ಜನವರಿ 25 ರಿಂದ ಮಾರ್ಚ್ 11 – ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ T20 ಸರಣಿ
  • ಮಾರ್ಚ್ ಅಂತ್ಯದಿಂದ ಮೇ ಅಂತ್ಯದವರೆಗೆ – ಐಪಿಎಲ್ 2024
  • ಜೂನ್ 4 ರಿಂದ ಜೂನ್ 30 – ಐಸಿಸಿ ಟಿ20 ವಿಶ್ವಕಪ್ 2024
  • ಜುಲೈ 2024- ಶ್ರೀಲಂಕಾದಲ್ಲಿ ಮೂರು ಪಂದ್ಯಗಳ ಏಕದಿನ ಮತ್ತು ಮೂರು ಪಂದ್ಯಗಳ ಟಿ20 ಸರಣಿ (ದಿನಾಂಕ ಪ್ರಕಟವಾಗಿಲ್ಲ)
  • ಸೆಪ್ಟೆಂಬರ್ 2024- ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಮೂರು T20ಗಳು ಮತ್ತು ಎರಡು ಟೆಸ್ಟ್ ಸರಣಿಗಳು (ದಿನಾಂಕ ಪ್ರಕಟವಾಗಿಲ್ಲ)
  • ಅಕ್ಟೋಬರ್ 2024 – ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ
  • ನವೆಂಬರ್-ಡಿಸೆಂಬರ್ 2024- ಆಸ್ಟ್ರೇಲಿಯಾದಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:56 am, Sun, 31 December 23

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​