ಭಾರತ ಕ್ರಿಕೆಟ್ ತಂಡಕ್ಕೆ 2023ನೇ ವರ್ಷ ಅದ್ಭುತ ಎಂದು ಹೇಳಲು ಸಾಧ್ಯವಿಲ್ಲ. ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದರೂ ಎರಡು ಬಾರಿ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಟೀಮ್ ಇಂಡಿಯಾ (Team India) ಕಳೆದುಕೊಂಡಿತ್ತು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು 2023 ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಕಂಡಿತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಕಾಣುವ ಮೂಲಕ 2023ನೇ ವರ್ಷವನ್ನು ಕೊನೆಗೊಳಿಸುತ್ತಿದೆ. ಹಾಗಾದರೆ 2024 ರಲ್ಲಿ ಭಾರತ ಕ್ರಿಕೆಟ್ ತಂಡ ಯಾವ ತಂಡದ ವಿರುದ್ಧ ಆಡಲಿದೆ?, ಹೇಗಿದೆ ವೇಳಾಪಟ್ಟಿ? ನೋಡೋಣ.
ಜನವರಿಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಹಾಗೂ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್ ಜೊತೆಗೆ ಭಾರತ ಕ್ರಿಕೆಟ್ ತಂಡ ಅಫ್ಘಾನಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ವಿವಿಧ ಸ್ವರೂಪಗಳಲ್ಲಿ ಸರಣಿಗಳನ್ನು ಆಡಲಿದೆ. ಇದರ ನಡುವೆ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024ರಲ್ಲಿ ಟೀಮ್ ಇಂಡಿಯಾ ಬ್ಯುಸಿಯಾಗಲಿದೆ. ಟಿ20 ವಿಶ್ವಕಪ್ 2024 ಕ್ಕಾಗಿ ಭಾರತ ವೆಸ್ಟ್ ಇಂಡೀಸ್ ಮತ್ತು USA ಗೆ ತೆರಳಲಿದೆ.
IPL 2024: RCB ತಂಡವನ್ನು ನಂಬಿ ಕೆಟ್ಟ ಯುವ ಸ್ಪೋಟಕ ಬ್ಯಾಟರ್..!
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:56 am, Sun, 31 December 23