T20 World Cup 2022: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ಬೆಸ್ಟ್ ಪ್ಲೇಯಿಂಗ್ ಇಲೆವೆನ್

T20 World Cup 2022: ಮೊದಲ ಸೀಸನ್​ನಲ್ಲೇ ಚಾಂಪಿಯನ್​ಗಳಾಗಿ ಹೊರಹೊಮ್ಮಿದ ಟೀಂ ಇಂಡಿಯಾ ಮಾತ್ರ ಆ ಬಳಿಕ ಚಾಂಪಿಯನ್ ಆಗುವ ಕನಸ್ಸನ್ನು ಕೈಬಿಟ್ಟಿದೆ ಎಂದು ತೋರುತ್ತದೆ.

T20 World Cup 2022: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ಬೆಸ್ಟ್ ಪ್ಲೇಯಿಂಗ್ ಇಲೆವೆನ್
team india
Follow us
TV9 Web
| Updated By: ಪೃಥ್ವಿಶಂಕರ

Updated on:Oct 20, 2022 | 11:34 AM

ಟಿ20 ವಿಶ್ವಕಪ್ (T20 World Cup) ಆರಂಭವಾಗಿ ಇಲ್ಲಿಗೆ 7 ಆವೃತ್ತಿಗಳು ಮುಗಿದಿವೆ. 8ನೇ ಆವೃತ್ತಿ ಕಾಂಗರೂಗಳ ನಾಡಲ್ಲಿ ಈಗಾಗಲೇ ಅರ್ಹತಾ ಸುತ್ತಿನ ಪಂದ್ಯಗಳೊಂದಿಗೆ ಆರಂಭವಾಗಿದೆ. ಆದರೆ ಮೊದಲ ಸೀಸನ್​ನಲ್ಲೇ ಚಾಂಪಿಯನ್​ಗಳಾಗಿ ಹೊರಹೊಮ್ಮಿದ ಟೀಂ ಇಂಡಿಯಾ ಮಾತ್ರ ಆ ಬಳಿಕ ಚಾಂಪಿಯನ್ ಆಗುವ ಕನಸ್ಸನ್ನು ಕೈಬಿಟ್ಟಿದೆ ಎಂದು ತೋರುತ್ತದೆ. ಆದರೆ ಈ ಬಾರಿ ಮಾತ್ರ ಶತಾಯಗತಾಯ ಕಪ್ ಎತ್ತಿಹಿಡಿಯುವ ತವಕದಲ್ಲಿರುವ ರೋಹಿತ್ (Rohit Sharma) ಪಡೆಯಲ್ಲಿ ಅಂತಹ ಮ್ಯಾಚ್ ವಿನ್ನರ್​ಗಳ ದಂಡೆ ಇದೆ. ಇದಕ್ಕಾಗಿ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿದ್ದು, ಈ ಬಾರಿಯ ವಿಶ್ವಕಪ್‌ನಲ್ಲಿ (T20 World Cup 2022) ಟೀಂ ಇಂಡಿಯಾದ ಪ್ಲೇಯಿಂಗ್-11 ಹೇಗಿರಬಹುದು ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅಂತಹ ಕುತೂಹಲಕ್ಕೆ ಇಲ್ಲಿದೆ ಉತ್ತರ.

ಎಲ್ಲರಿಗೂ ಮುಂಚಿತವಾಗಿಯೇ ಆಸೀಸ್ ತಲುಪಿದ್ದ ರೋಹಿತ್ ಪಡೆ ಮೊದಲು ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ಎರಡು ಅಭ್ಯಾಸ ಪಂದ್ಯಗಳನ್ನು ಆಡಿತ್ತು. ಒಂದರಲ್ಲಿ ಗೆಲುವು ಸಾಧಿಸಿದರೆ, ಮತ್ತೊಂದರಲ್ಲಿ ಸೋಲನುಭವಿಸಿತ್ತು. ಇದರ ನಂತರ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಆಡಿದ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸಿದರೆ, ನ್ಯೂಜಿಲೆಂಡ್ ವಿರುದ್ಧದ ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾಯಿತು.

ಬ್ಯಾಟಿಂಗ್ ಕ್ರಮಾಂಕ ಫಿಕ್ಸ್!

ಟೀಂ ಇಂಡಿಯಾದ ಬ್ಯಾಟಿಂಗ್ ವಿಚಾರಕ್ಕೆ ಬಂದರೆ, ಯಾರು ಯಾವ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಓಪನಿಂಗ್ ಮಾಡಲಿದ್ದಾರೆ. ಆದರೆ ನಾಯಕ ರೋಹಿತ್ ಫಾರ್ಮ್ ಮಾತ್ರ ಟೀಂ ಇಂಡಿಯಾಕ್ಕೆ ಆತಂಕ ತಂದಿದೆ. ಕಳೆದ 10 ಟಿ20 ಇನ್ನಿಂಗ್ಸ್​ನಲ್ಲಿ ರೋಹಿತ್ ಕೇವಲ 1 ಅರ್ಧಶತಕ ಮಾತ್ರ ಸಿಡಿಸಿದ್ದಾರೆ. ಇದು ಟೀಂ ಇಂಡಿಯಾದ ನಿದ್ದೆಗೆಡಿಸಿದೆ. ಹೀಗಾಗಿ ರೋಹಿತ್ ಬೇಗನೇ ಫಾರ್ಮ್​ ಕಂಡುಕೊಳ್ಳಲ್ಲಿ ಎಂಬುದು ಕೋಟ್ಯಾಂತರ ಅಭಿಮಾನಿಗಳ ಆಶಯವಾಗಿದೆ. ಇನ್ನೊಂದೆಡೆ ಉಪನಾಯಕ ಕೆಎಲ್ ರಾಹುಲ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಬ್ಯಾಟಿಂಗ್​ನಲ್ಲಿ ಕೊಂಚ ವೇಗ ಕಂಡುಕೊಳ್ಳಬೇಕಿದೆ. ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಆಡುವುದು ಖಚಿತವಾಗಿದೆ. ಹಾಗೆಯೇ ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವುದು ಫಿಕ್ಸ್ ಆಗಿದೆ.

ಐದನೇ ಕ್ರಮಾಂಕದಲ್ಲಿ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಕಣಕ್ಕಿಳಿದರೆ, ಆರನೇ ಕ್ರಮಾಂಕದಲ್ಲಿ ಗೇಮ್ ಫಿನಿಶರ್ ದಿನೇಶ್ ಕಾರ್ತಿಕ್ ಆಡಲಿದ್ದಾರೆ. ಇಬ್ಬರೂ ಫಿನಿಶರ್‌ಗಳ ಪಾತ್ರ ನಿರ್ವಹಿಸುತ್ತಿದ್ದು ಅವರಿಬ್ಬರ ಮೇಲೆ ತಂಡ ಬಹಳಷ್ಟು ಅವಲಂಬಿತವಾಗಿದೆ.

ಇದನ್ನೂ ಓದಿ: Virender Sehwag: 47 ಎಸೆತಗಳಲ್ಲಿ 198 ರನ್! ಕ್ರಿಕೆಟ್​ ಲೋಕದ ಸಿಡಲಮರಿ ವೀರೇಂದ್ರ ಸೆಹ್ವಾಗ್​ಗೆ ಇಂದು ಜನ್ಮದಿನ

ಸ್ಪಿನ್ ಆಲ್​ರೌಂಡರ್ಸ್ ​ 6ನೇ ಕ್ರಮಾಂಕದ ಬಳಿಕ ತಂಡದಲ್ಲಿ ಕೊಂಚ ಗೊಂದಲಗಳಿದ್ದು, ವೇಗದ ಪಿಚ್​ಗಳಿಗೆ ಹೆಸರುವಾಸಿಯಾಗಿರುವ ಆಸ್ಟ್ರೇಲಿಯದಲ್ಲಿ ಟೀಮ್ ಇಂಡಿಯಾ, ಇಬ್ಬರು ಸ್ಪಿನ್ನರ್‌ ಹಾಗೂ ಮೂವರು ವೇಗದ ಬೌಲರ್‌ಗಳೊಂದಿಗೆ ಕಣಕ್ಕಿಳಿಯುತ್ತದೆಯೇ ಅಥವಾ ಇಬ್ಬರು ಸ್ಪಿನ್ನರ್‌ಗಳ ಜೊತೆ ಒಬ್ಬ ಬ್ಯಾಟ್ಸ್‌ಮನ್‌ಗೆ ಅವಕಾಶ ನೀಡಲು ಬಯಸುತ್ತದೆಯೇ ಎಂಬುದು ಪ್ರಶ್ನೆಯಾಗಿದೆ. ಒಂದು ವೇಳೆ ಇಬ್ಬರು ಸ್ಪಿನ್ನರ್‌ ಹಾಗೂ 3 ವೇಗದ ಬೌಲರ್​ಗಳನ್ನು ಕಣಕ್ಕಿಳಿಸಿದರೆ, ತಂಡದಲ್ಲಿ ಒಟ್ಟಾರೆ ಆರು ಬೌಲರ್​ಗಳು ಆಡಿದ್ದಂತ್ತಾಗುತ್ತದೆ. ಏಕೆಂದರೆ ಪಾಂಡ್ಯ ಕೂಡ ಆಲ್​ರೌಂಡರ್ ಕೋಟಾದಲ್ಲಿದ್ದಾರೆ. ಆದರೆ ಇಬ್ಬರು ಸ್ಪಿನ್ನರ್‌, ಇಬ್ಬರು ವೇಗದ ಬೌಲರ್​ಗಳನ್ನು ಕಣಕ್ಕಿಳಿಸಲು ಯೋಚಿಸಿದರೆ ಆಗ ಮಾತ್ರ ಟೀಂ ಇಂಡಿಯಾದಲ್ಲಿ ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್, ಈ ಇಬ್ಬರಲ್ಲಿ ಒಬ್ಬರು ಸ್ಥಾನ ಪಡೆಯಲಿದ್ದಾರೆ. ಸ್ಪಿನ್ ಬೌಲಿಂಗ್ ಜೊತೆ ಈ ಇಬ್ಬರಿಗೆ ಬ್ಯಾಟಿಂಗ್ ಮಾಡುವ ಕ್ಷಮತೆಯೂ ಇದೆ.

ಯುಜುವೇಂದ್ರ ಚಹಾಲ್ ಮುಖ್ಯ ಸ್ಪಿನ್ನರ್ ಆಗಿ ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಅಂದಹಾಗೆ, ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುವುದು ಭಾರತಕ್ಕೆ ಪ್ರಯೋಜನಕಾರಿಯಾಗಲಿದೆ. ಏಕೆಂದರೆ ಆಸ್ಟ್ರೇಲಿಯಾದಲ್ಲಿರುವ ಕ್ರೀಡಾಂಗಣಗಳ ಮೈದಾನಗಳು ವಿಸ್ತೀರ್ಣದಲ್ಲಿ ದೊಡ್ಡದಾಗಿದ್ದು, ಒಂದು ವೇಳೆ ಬ್ಯಾಟ್ಸ್‌ಮನ್‌ಗಳು ಸ್ಪಿನ್ನರ್‌ಗಳ ಮೇಲೆ ಬಿಗ್ ಶಾಟ್ ಆಡಲು ಯತ್ನಿಸಿದರೆ ಆಗ ವಿಕೆಟ್‌ಗಳನ್ನು ಪಡೆಯುವ ಸಾಧ್ಯತೆಗಳು ಹೆಚ್ಚಿರುತ್ತವೆ.

ಮೂವರು ವೇಗದ ಬೌಲರ್‌ಗಳು ಯಾರು?

ಗಾಯದಿಂದ ಟಿ20 ವಿಶ್ವಕಪ್​ಗೆ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದು, ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ಬಂದಿದ್ದಾರೆ. ಮೊದಲ ಅಭ್ಯಾಸ ಪಂದ್ಯದಲ್ಲಿ ಶಮಿ ಕೇವಲ ಒಂದು ಓವರ್ ಬೌಲ್ ಮಾಡಿ ತಂಡದ ಗೆಲುವಿನ ಪ್ರಮುಖ ಕೊಡುಗೆ ನೀಡಿದ್ದರು. ಹೀಗಾಗಿ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಖಚಿತ. ಅವರ ಹೊರತಾಗಿ, ಅರ್ಷದೀಪ್ ಸಿಂಗ್ ಕೂಡ ತಂಡದಲ್ಲಿ ಅವಕಾಶ ಪಡೆಯಲ್ಲಿದ್ದಾರೆ. ಆದರೆ ಅಂತಿಮ ಓವರ್​ಗಳಲ್ಲಿ ದುಬಾರಿಯಾಗುತ್ತಿರುವ ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ನಡುವೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಸ್ಥಾನ ಪಡೆಯಲು ಫೈಪೋಟಿ ಎದುರಾಗಿದೆ. ಅನುಭವಕ್ಕೆ ಹೆಚ್ಚು ಮಣೆ ಹಾಕಿದರೆ ಭುವಿಗೆ ಅವಕಾಶ ಸಿಗುವುದು ಪಕ್ಕಾ ಆಗಿದೆ.

ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್-11

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:32 am, Thu, 20 October 22

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ