India vs West Indies: ಗೆದ್ದ ಖಷಿಯಲ್ಲಿ ಭಾರತದ ಆಟಗಾರರು ಡ್ರೆಸ್ಸಿಂಗ್ ರೂಮ್​ನಲ್ಲಿ ಏನು ಮಾಡಿದ್ರು ಗೊತ್ತೇ?

IND vs WI 2nd ODI: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ಜೊತೆಗೆ ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ ಪಾಳಯದಲ್ಲಿ ಖುಷಿಗೆ ಪಾರವೇ ಇರಲಿಲ್ಲ. ಡ್ರೆಸ್ಸಿಂಗ್ ರೂಮ್​ನಲ್ಲಿ ಆಟಗಾರರು ಸಂಭ್ರಮಿಸಿದರು.

India vs West Indies: ಗೆದ್ದ ಖಷಿಯಲ್ಲಿ ಭಾರತದ ಆಟಗಾರರು ಡ್ರೆಸ್ಸಿಂಗ್ ರೂಮ್​ನಲ್ಲಿ ಏನು ಮಾಡಿದ್ರು ಗೊತ್ತೇ?
India vs West Indies 2nd ODI
Follow us
TV9 Web
| Updated By: Vinay Bhat

Updated on: Jul 25, 2022 | 10:39 AM

ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ದ್ವಿತೀಯ ಏಕದಿನ ಪಂದ್ಯ ಕೂಡ ರಣ ರೋಚಕವಾಗಿತ್ತು. ಮೊದಲ ಪಂದ್ಯದಂತೆ ಎರಡನೇ ಏಕದಿನ ಕೂಡ ಕೊನೆಯ ಓವರ್​ ವರೆಗೂ ತುದಿಗಾಲಿನಲ್ಲಿ ನಿಲ್ಲಿಸಿತ್ತು. ಅಂತಿಮ 50ನೇ ಓವರ್​ನ ಕೊನೆಯ 6 ಎಸೆದಲ್ಲಿ ಭಾರತದ ಗೆಲುವಿಗೆ 8 ರನ್​ಗಳ ಅವಶ್ಯಕತೆಯಿತ್ತು. ಅರ್ಧಶತಕ ಸಿಡಿಸಿ ಸೆಟ್ ಆಗಿದ್ದ ಆಲ್ರೌಂಡರ್ ಅಕ್ಷರ್ ಪಟೇಲ್ (Axar Patel) ಕ್ರೀಸ್​ನಲ್ಲಿದ್ದರು. ಮೊದಲ ಎಸೆತ ಡಾಟ್ ಆದರೆ, ನಂತರದ ಎರಡು ಎಸೆತಗಳಲ್ಲಿ ತಲಾ ಒಂದೊಂದು ರನ್ ಮೂಡಿ ಬಂತು. ಹೀಗಾಗಿ ಕೊನೆಯ 3 ಎಸೆತಗಳಲ್ಲಿ ಟೀಮ್ ಇಂಡಿಯಾಕ್ಕೆ (Team India) 6 ರನ್ ಬೇಕಾಗಿತ್ತು. ಖೈಲ್ ಮೇಯರ್ಸ್ ಅವರ 4ನೇ ಲೋ ಫುಲ್​ಟಾಸ್ ಎಸೆತವನ್ನು ಅಕ್ಷರ್ ಲಾಂಗ್ ಆಫ್ ಕಡೆ ಅಟ್ಟಿದರು. ಚೆಂಡು ನೇರವಾಗಿ ಬೌಂಡರಿ ಗೆರೆ ದಾಟಿ ಸಿಕ್ಸ್​ಗೆ ಹೋಯಿತು. 35 ಎಸೆತಗಳಲ್ಲಿ ಅಜೇಯ 64 ರನ್ ಚಚ್ಚಿದ ಅಕ್ಷರ್ ಪಟೇಲ್ ಹೀರೋ ಆಗಿ ಮಿಂಚಿದರು.

ಇತ್ತ ಗೆಲ್ಲುವ ಜೊತೆಗೆ ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ ಪಾಳಯದಲ್ಲಿ ಖುಷಿಗೆ ಪಾರವೇ ಇರಲಿಲ್ಲ. ಹೌದು, ರೋಚಕ ಕದನದಲ್ಲಿ ಗೆಲ್ಲುತ್ತಿದ್ದಂತೆ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ಆಟಗಾರರು ಸಂಭ್ರಮಿಸಿದರು. ಪಂದ್ಯ ಮುಗಿದ ಬಳಿಕ ಆಟಗಾರರು ಸೆಲೆಬ್ರೆಟ್ ಮಾಡುತ್ತಿರುವ ವಿಡಿಯೋವನ್ನು ನಾಯಕ ಶಿಖರ್ ಧವನ್ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ಇದರಲ್ಲಿ ಇಶಾನ್ ಕಿಶನ್, ಅಕ್ಷರ್, ಚಹಲ್, ಠಾಕೂರ್ ಸೇರಿದಂತೆ ಭಾರತದ ಬಹತೇಕ ಆಟಗಾರರು ಸಖತ್ ಆಗಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ
Image
Axar Patel: ಧೋನಿ ರೆಕಾರ್ಡ್ ಪುಡಿಗಟ್ಟಿದ ಅಕ್ಷರ್: ಪಂದ್ಯ ಮುಗಿದ ಬಳಿಕ ಏನು ಹೇಳಿದ್ರು ನೋಡಿ
Image
Axar Patel: 35 ಎಸೆತ, 3 ಫೋರ್, 5 ಸಿಕ್ಸರ್: ಅಕ್ಷರ್ ಪಟೇಲ್ ಸ್ಫೋಟಕ ಆಟದ ವಿಡಿಯೋ ಇಲ್ಲಿದೆ ನೋಡಿ
Image
Axar Patel: ಕೊನೆಯ ಓವರ್ ವರೆಗೂ ರೋಚಕ ಕಾದಾಟ: ಸಿಕ್ಸ್ ಸಿಡಿಸಿ ಗೆಲುವು ತಂದುಕೊಟ್ಟ ಅಕ್ಷರ್ ಪಟೇಲ್
Image
CWG 2022: ಸ್ಕ್ವಾಷ್‌ ಸ್ಪರ್ಧೆಯಲ್ಲಿ ಭಾರತದ ಪರ ಪದಕ್ಕಾಗಿ ಸೆಣಸಲಿರುವ 9 ಆಟಗಾರರಿವರು!

ಪಂದ್ಯ ಮುಗದಿ ಬಳಿಕ ಮಾತನಾಡಿದ ನಾಯಕ ಶಿಖರ್ ಧವನ್, “ನಮ್ಮ ತಂಡದ ಇಂದು ಅದ್ಭುತ ಪ್ರದರ್ಶನ ನೀಡಿದೆ. ನಮ್ಮ ಆಟಗಾರರು ಎಲ್ಲೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಲಿಲ್ಲ. ಅಯ್ಯರ್, ಸಂಜು, ಅಕ್ಷರ್ ಎಲ್ಲರೂ ಅಮೋಘ ಪ್ರದರ್ಶನ ನೀಡಿದ್ದಾರೆ. ಆವೇಶ್ ಖಾನ್ ಕೂಡ ತಮ್ಮ ಚೊಚ್ಚಲ ಪಂದ್ಯದಲ್ಲೇ 11 ರನ್ ಗಳಿಸಿ ಮುಖ್ಯ ಕಾಣಿಕೆ ನೀಡಿದರು. ಐಪಿಎಲ್​ಗೆ ಧನ್ಯವಾದ. ಅಲ್ಲಿ ಈ ರೀತಿಯ ಪರಿಸ್ಥಿತಿ ಬಂದಾಗ ಹೇಗೆ ಆಡಬೇಕು ಎಂದು ಕಲಿತಿದ್ದಾರೆ. ವಿಂಡೀಸ್ ಪರ ಹೋಪ್ ಮತ್ತು ಪೂರನ್ ಚೆನ್ನಾಗಿ ಬ್ಯಾಟಿಂಗ್ ಮಾಡಿದರು. ನಮ್ಮ ಬ್ಯಾಟಿಂಗ್ ಆರಂಭ ಕೊಂಚ ನಿಧಾನವಾಗಿತ್ತು. ಅಯ್ಯರ್–ಸ್ಯಾಮ್ಸನ್ ಜೊತೆಯಾಟ ಮುಖ್ಯ ಪಾತ್ರ ವಹಿಸಿತು,” ಎಂದು ಹೇಳಿದ್ದಾರೆ.

ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ವೆಸ್ಟ್ ಇಂಡೀಸ್ ತಂಡಕ್ಕೆ ಶಾಯ್​ ಹೋಪ್​ ಮತ್ತು ಕೈಲ್​ ಮೇಯರ್ಸ್​ ಚುರುಕಿನ ಆರಂಭ ನೀಡಿದರು. ಮೊದಲ ವಿಕೆಟ್​ಗೆ ಇವರಿಬ್ಬರು 65 ರನ್​ ಗಳಿಸಿದರು. ಬಳಿಕ ನಾಯಕ ನಿಕೋಲಸ್​ ಪೂರನ್​ (74) ಅವರು ಹೋಪ್ (115) ಜೊತೆಗೂಡಿ ಭಾರತೀಯ ಬೌಲರ್​ಗಳನ್ನು ದಂಡಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ನಿಗದಿತ 50 ಓವರ್​ಗಳಲ್ಲಿ 311 ರನ್​ ಗಳಿಸಿತು.

ವಿಂಡೀಸ್ ನೀಡಿದ್ದ 312 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡವು 49.4 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಶ್ರೇಯಸ್ ಅಯ್ಯರ್(63), ಸಂಜು ಸಾಮ್ಸನ್(54) ಹಾಗೂ ಅಕ್ಷರ್ ಪಟೇಲ್ ಅರ್ಧಶತಕ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದಿಟ್ಟರು.

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ