ಸ್ವಾತಂತ್ರ್ಯ ದಿನದಂದೇ ಐರ್ಲೆಂಡ್​ಗೆ ತೆರಳಿದ ಜಸ್​ಪ್ರಿತ್ ಬುಮ್ರಾ ನೇತೃತ್ವದ ಭಾರತ ತಂಡ

Team India jet off to Dublin for IND vs IRE T20s: ಐರ್ಲೆಂಡ್ ವಿರುದ್ಧ ಭಾರತ ಒಟ್ಟು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದೀಗ ಈ ಸರಣಿಗಾಗಿ ಜಸ್​ಪ್ರಿತ್ ಬುಮ್ರಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಐರ್ಲೆಂಡ್ ನಾಡಿಗೆ ಪ್ರಯಾಣ ಬೆಳೆಸಿದೆ. ಬಿಸಿಸಿಐ ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಮಾನದ ಮೂಲಕ ಪ್ರಯಾಣಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದೆ.

ಸ್ವಾತಂತ್ರ್ಯ ದಿನದಂದೇ ಐರ್ಲೆಂಡ್​ಗೆ ತೆರಳಿದ ಜಸ್​ಪ್ರಿತ್ ಬುಮ್ರಾ ನೇತೃತ್ವದ ಭಾರತ ತಂಡ
Team India Players
Follow us
Vinay Bhat
|

Updated on: Aug 15, 2023 | 11:30 AM

ಭಾರತ ಕ್ರಿಕೆಟ್ ತಂಡದ ವೆಸ್ಟ್ ಇಂಡೀಸ್ ಪ್ರವಾಸ ಮುಕ್ತಾಯಗೊಂಡಿದೆ. ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದ್ದ ಟೀಮ್ ಇಂಡಿಯಾ ಟಿ20 ಸರಣಿಯಲ್ಲಿ ಎಡವಿತು. ಭಾರತದ ಯುವ ಪಡೆ ಟಿ20 ಸರಣಿ ಸೋಲಿನಿಂದ ಕೆಲ ವಿಷಯಗಳನ್ನು ಕಲಿತು ಕೆರಿಬಿಯನ್ ಪ್ರವಾಸವನ್ನು ಪೂರ್ಣಗೊಳಿಸಿದೆ. ಇದೀಗ ಮತ್ತೊಂದು ಸರಣಿಗೆ ಭಾರತ ಕ್ರಿಕೆಟ್ ತಂಡ ಸಜ್ಜಾಗಿದೆ. ಆಗಸ್ಟ್ 18 ರಿಂದ ಭಾರತ ಹಾಗೂ ಐರ್ಲೆಂಡ್ (India vs Ireland) ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದೀಗ ಈ ಸರಣಿಗಾಗಿ ಟೀಮ್ ಇಂಡಿಯಾ ಸ್ವಾತಂತ್ರ್ಯ ದಿನದಂದೇ ಐರ್ಲೆಂಡ್ ನಾಡಿಗೆ ತೆರಳಿದೆ.

ಜಸ್​ಪ್ರಿತ್ ಬುಮ್ರಾ ನೇತೃತ್ವದ ಭಾರತ ತಂಡ ಐರಿಷ್ ನಾಡಿಗೆ ಪ್ರಯಾಣ ಬೆಳೆಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಮಾನದ ಮೂಲಕ ಭಾರತೀಯ ಆಟಗಾರರು ಪ್ರಯಾಣಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಬುಮ್ರಾ, ಪ್ರಸಿದ್ಧ್ ಕೃಷ್ಣ, ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್ ಸೇರಿದಂತೆ ಕೆಲ ಆಟಗಾರರಿದ್ದಾರೆ.

ಇದನ್ನೂ ಓದಿ
Image
Independence Day 2023: 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಟೀಮ್ ಇಂಡಿಯಾ ಆಟಗಾರರು
Image
ಮುಂಬೈನಲ್ಲಿ ಜಿಮ್​ಗೆ ಬಂದ ವಿರಾಟ್ ಕೊಹ್ಲಿ: ಏಷ್ಯಾಕಪ್​ಗೆ ತಯಾರಿ ಆರಂಭ
Image
ಸಿಎಸ್​ಕೆ ಆಟಗಾರನಿಂದ ಮ್ಯಾಚ್ ಫಿಕ್ಸಿಂಗ್ ಆರೋಪ: ವಿದೇಶ ಪ್ರವಾಸಕ್ಕೆ ನಿಷೇಧ
Image
ಟೀಮ್ ಇಂಡಿಯಾ ಸೇರಲು ರಾಹುಲ್-ಅಯ್ಯರ್ ಹರಸಾಹಸ: ಇಂದು ನಿರ್ಧಾರವಾಗುತ್ತಾ ಇವರ ಭವಿಷ್ಯ?

ಐರ್ಲೆಂಡ್​ಗೆ ತೆರಳಿದ ಟೀಮ್ ಇಂಡಿಯಾ ಆಟಗಾರರ ಫೋಟೋ:

ಈಗಾಗಲೇ ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಕೂಡ ಪ್ರಕಟವಾಗಿದೆ. ವೇಗಿ ಜಸ್​ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ ಆಗಿ ನಾಯಕನ ಜವಾಬ್ದಾರಿ ಹೊತ್ತಿದ್ದಾರೆ. ಇದು ಕೆಲವೇ ದಿನಗಳ ಪಂದ್ಯಾವಳಿ ಆಗಿರುವ ಕಾರಣ ಭಾರತದ ಯುವ ಆಟಗಾರರ ಜೊತೆ ಕೋಚಿಂಗ್ ಸಿಬ್ಬಂದಿಗಳು ತೆರಳಿಲ್ಲ. ಈ ಪ್ರವಾಸದಿಂದ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಕೆಲ ಸಿಬ್ಬಂದಿಗಳಿಗೆ ವಿಶ್ರಾಂತಿ ನೀಡಲಾಗಿದೆ.

ಇಂಗ್ಲೆಂಡ್ ತಂಡಕ್ಕೆ ‘ಬೆನ್​’ಬಲ: ನಿವೃತ್ತಿ ಹಿಂಪಡೆದ ಸ್ಟೋಕ್ಸ್​..!

ಐರ್ಲೆಂಡ್ ವಿರುದ್ಧ ಭಾರತ ಒಟ್ಟು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದು ಆಗಸ್ಟ್ 18 ರಿಂದ ಪ್ರಾರಂಭವಾಲಿದೆ. 2ನೇ ಪಂದ್ಯವು ಆಗಸ್ಟ್ 20 ರಂದು ಜರುಗಲಿದೆ. ಅಂತೆಯೆ ಅಂತಿಮ 3ನೇ ಟಿ20 ಪಂದ್ಯ ಆಗಸ್ಟ್ 22 ರಂದು ಆಯೋಜಿಸಲಾಗಿದೆ. ಈ ಎಲ್ಲಾ ಪಂದ್ಯಗಳು ಡಬ್ಲಿನ್​ನ ಮಲಾಹೈಡ್ ಕ್ರಿಕೆಟ್ ಸ್ಟೇಡಿಯಂ ನಡೆಯಲಿದೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಹೆಚ್ಚು ಯುವ ಆಟಗಾರರನ್ನೇ ಆಯ್ಕೆ ಮಾಡಿದ್ದು, ರುತುರಾಜ್ ಗಾಯಕ್ವಾಡ್​ಗೆ ಉಪ ನಾಯಕನ ಪಟ್ಟ ನೀಡಲಾಗಿದೆ. ಪ್ರಸಿದ್ಧ್ ಕೃಷ್ಣ, ಶಿವಂ ದುಬೆ, ರಿಂಕು ಸಿಂಗ್, ಜಿತೇಶ್ ಶರ್ಮಾ ತಂಡದಲ್ಲಿದ್ದಾರೆ. ಈ ಸರಣಿಯಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಭಾರತ ಟಿ20 ತಂಡ: ಜಸ್​ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ತಿಲಕ್ ವರ್ಮಾ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್