2022ರಲ್ಲಿ ಬರೋಬ್ಬರಿ 20 ಪಂದ್ಯಗಳಲ್ಲಿ ಭಾರತಕ್ಕೆ ಸೋಲು! ಮರುಕಳಿಸುತ್ತಾ 2015ರ ಇತಿಹಾಸ..?

Team India: ಈ ವರ್ಷ ಇಲ್ಲಿಯವರೆಗೆ ಭಾರತ ತಂಡ 3 ಟೆಸ್ಟ್‌, 7 ಏಕದಿನ ಹಾಗೂ 10 ಟಿ200 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಸೋತಿದೆ. ಹಿಂದಿನ ನ್ಯೂಜಿಲೆಂಡ್ ಪ್ರವಾಸದಲ್ಲೂ ಏಕದಿನ ಸರಣಿಯನ್ನು ಸೋತಿದ್ದ ಭಾರತ, ಬಾಂಗ್ಲಾ ಪ್ರವಾಸವನ್ನು ಸೋಲಿನೊಂದಿಗೆ ಆರಂಭಿಸಿದೆ.

2022ರಲ್ಲಿ ಬರೋಬ್ಬರಿ 20 ಪಂದ್ಯಗಳಲ್ಲಿ ಭಾರತಕ್ಕೆ ಸೋಲು! ಮರುಕಳಿಸುತ್ತಾ 2015ರ ಇತಿಹಾಸ..?
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on:Dec 05, 2022 | 12:15 PM

ಭಾರತ ಮತ್ತು ಬಾಂಗ್ಲಾದೇಶ (India Vs Bangladesh) ನಡುವೆ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಸೋಲು ಅನುಭವಿಸಿದೆ. ಸೋಲಿನೊಂದಿಗೆ ಸರಣಿ ಆರಂಭಿಸಿರುವ ರೋಹಿತ್ (Rohit Sharma) ಪಡೆ ಇದೀಗ ಮುಂದಿನ ಪಂದ್ಯದಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂಬ ಪಣ ತೊಟ್ಟಿದೆ. ಈ ಪಂದ್ಯದ ಸೋಲಿನೊಂದಿಗೆ ಟೀಂ ಇಂಡಿಯಾ ಈ ವರ್ಷ ಆಡಿರುವ ಪಂದ್ಯಗಳಲ್ಲಿ ಬರೋಬ್ಬರಿ 20 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಈ ವರ್ಷ ಇಲ್ಲಿಯವರೆಗೆ ಭಾರತ ತಂಡ 3 ಟೆಸ್ಟ್‌, 7 ಏಕದಿನ ಹಾಗೂ 10 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಸೋತಿದೆ. ಹಿಂದಿನ ನ್ಯೂಜಿಲೆಂಡ್ ಪ್ರವಾಸದಲ್ಲೂ ಏಕದಿನ ಸರಣಿಯನ್ನು ಸೋತಿದ್ದ ಭಾರತ, ಬಾಂಗ್ಲಾ ಪ್ರವಾಸವನ್ನು ಸೋಲಿನೊಂದಿಗೆ ಆರಂಭಿಸಿದೆ.

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲೂ ಸೋಲು

ಇತ್ತೀಚೆಗೆ ಆಡಿದ ಟಿ20 ವಿಶ್ವಕಪ್ 2022ರ ಸೆಮಿಫೈನಲ್‌ನಲ್ಲೂ ಭಾರತ ತಂಡ ಸೋಲನುಭವಿಸಬೇಕಾಯಿತು. ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡ ಸೆಮಿಫೈನಲ್‌ಗೆ ತಲುಪಿತ್ತು. ಆದರೆ, ಸೆಮಿಸ್​ನಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್​ಗಳಿಂದ ಹೀನಾಯ ಸೋಲು ಅನುಭವಿಸಬೇಕಾಯಿತು. ಆದರೆ ಇಡೀ ವಿಶ್ವಕಪ್‌ನಲ್ಲಿ ಸೆಮಿಫೈನಲ್​ಗೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧ ಮಾತ್ರ ಸೋತಿದ್ದ ಟೀಂ ಇಂಡಿಯಾ ಮಿಕ್ಕ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಿತ್ತು. ಆದರೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಸೋತಿದ್ದ ರೋಹಿತ್ ಪಡೆ ಟೂರ್ನಿಯಿಂದಲೇ ಹೊರಬಿದ್ದಿತ್ತು.

ಇದನ್ನೂ ಓದಿ: IND vs BAN: ಆಡಿರುವ 30 ಇನ್ನಿಂಗ್ಸ್​ಗಳ ಪೈಕಿ 23 ಇನ್ನಿಂಗ್ಸ್​ ಗಳಲ್ಲಿ ಖಾತೆಯನ್ನೇ ತೆರೆದಿಲ್ಲ ಈ ಬಾಂಗ್ಲಾ ಆಟಗಾರ..!

ಏಷ್ಯಾಕಪ್‌ನಲ್ಲೂ ಸೋಲು

ಟಿ20 ವಿಶ್ವಕಪ್‌ಗೂ ಮುನ್ನ ನಡೆದ ಏಷ್ಯಾಕಪ್​ನಲ್ಲೂ ಭಾರತ ತಂಡಕ್ಕೆ ಸೂಪರ್-4ರ ಘಟ್ಟ ದಾಟಲು ಸಾಧ್ಯವಾಗಲಿಲ್ಲ. ಇಲ್ಲಿ ಭಾರತ ತಂಡ ಒಟ್ಟು ಐದು ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3ರಲ್ಲಿ ಗೆದ್ದು 2ರಲ್ಲಿ ಸೋತಿತ್ತು. ಇದರಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ವಿರುದ್ಧ ರೋಹಿತ್ ಬಳಗ ಸೋಲನುಭವಿಸಿತ್ತು.

2015ರಲ್ಲಿ ಬಾಂಗ್ಲಾ ವಿರುದ್ಧ ಸರಣಿ ಸೋತಿದ್ದ ಭಾರತ

ಇದಕ್ಕೂ ಮೊದಲು ಅಂದರೆ 2015ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಏಕದಿನ ಸರಣಿ ಸೋಲಿನ ಆಘಾತ ಎದುರಿಸಿತ್ತು. ಈ ಸರಣಿಯೂ ಸೇರಿದಂತೆ ಉಭಯ ತಂಡಗಳ ನಡುವಿನ ಐದನೇ ಸರಣಿ ಇದಾಗಿದ್ದು, ಇದುವರೆಗೆ ಆಡಿರುವ 4 ಸರಣಿಗಳಲ್ಲಿ 3 ಸರಣಿಗಳನ್ನು ಗೆದ್ದಿರುವ ಟೀಂ ಇಂಡಿಯಾ ಒಂದು ಸರಣಿಯನ್ನು ಮಾತ್ರ ಕಳೆದುಕೊಂಡಿತ್ತು. ಈಗ ಸೋಲಿನೊಂದಿಗೆ ಸರಣಿ ಆರಂಭಿಸಿರುವ ಟೀಂ ಇಂಡಿಯಾ ಈ ಸರಣಿಯನ್ನು ಗೆಲ್ಲುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Mon, 5 December 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ