Team India Champion Trophy: ಎರಡು ಬಾರಿ ಚಾಂಪಿಯನ್-ಒಮ್ಮೆ ರನ್ನರ್ ಅಪ್: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪ್ರದರ್ಶನ ಹೇಗಿದೆ?
ಐಸಿಸಿ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇಲ್ಲಿಯವರೆಗೆ ಭಾರತ ತಂಡ ಮತ್ತು ಆಸ್ಟ್ರೇಲಿಯಾ 2-2 ಬಾರಿ ಪ್ರಶಸ್ತಿಯನ್ನು ಗೆದ್ದಿವೆ. 2002 ರಲ್ಲಿ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಆಡಿದ ಮೂರನೇ ಋತುವನ್ನು ಭಾರತ ತಂಡ ಮತ್ತು ಶ್ರೀಲಂಕಾ ಜಂಟಿಯಾಗಿ ಗೆದ್ದವು. ಆದರೆ 2013 ರ ಋತುವಿನಲ್ಲಿ, ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ ಪ್ರಶಸ್ತಿಯನ್ನು ಗೆದ್ದು ಬೀಗಿತು.

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಪಂದ್ಯಾವಳಿಗೆ ಪಾಕಿಸ್ತಾನ ಆತಿಥ್ಯ ವಹಿಸುತ್ತಿದೆ. ಚಾಂಪಿಯನ್ಸ್ ಟ್ರೋಫಿ ಬುಧವಾರ (ಫೆಬ್ರವರಿ 19) ಆರಂಭವಾಗಲಿದ್ದು, ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಭಾರತ ತಂಡದ ಪ್ರದರ್ಶನ ನೋಡುವುದಾದರೆ ಉತ್ತಮವಾಗಿದೆ. ಈ ಬಾರಿ ಚಾಂಪಿಯನ್ಸ್ ಟ್ರೋಫಿಯ 9 ನೇ ಸೀಸನ್ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಯನ್ನು ಮೊದಲ ಬಾರಿಗೆ 1998 ರಲ್ಲಿ ಆಡಲಾಯಿತು. ಇದರಲ್ಲಿ ಮೊಹಮ್ಮದ್ ಅಜರುದ್ದೀನ್ ನೇತೃತ್ವದ ಭಾರತ ತಂಡವು ಸೆಮಿಫೈನಲ್ ವರೆಗೆ ಮಾತ್ರ ತಲುಪಲು ಸಾಧ್ಯವಾಯಿತು.
ಇಲ್ಲಿಯವರೆಗೆ ಭಾರತ ತಂಡ ಮತ್ತು ಆಸ್ಟ್ರೇಲಿಯಾ 2-2 ಬಾರಿ ಪ್ರಶಸ್ತಿಯನ್ನು ಗೆದ್ದಿವೆ. 2002 ರಲ್ಲಿ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಆಡಿದ ಮೂರನೇ ಋತುವನ್ನು ಭಾರತ ತಂಡ ಮತ್ತು ಶ್ರೀಲಂಕಾ ಜಂಟಿಯಾಗಿ ಗೆದ್ದವು. ಆದರೆ 2013 ರ ಋತುವಿನಲ್ಲಿ, ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ ಪ್ರಶಸ್ತಿಯನ್ನು ಗೆದ್ದು ಬೀಗಿತು.
2013 ರ ನಂತರ, 2017 ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಇಂಗ್ಲೆಂಡ್‌ನಲ್ಲಿ ನಡೆಸಲಾಯಿತು. ಆ ಸಂದರ್ಭ ಮೊದಲ ಬಾರಿಗೆ ಪಾಕಿಸ್ತಾನ ಟ್ರೋಫಿ ಗೆದ್ದಿತು. ಇದಾದ ನಂತರ ಪಂದ್ಯಾವಳಿ 2021 ರಲ್ಲಿ ನಡೆಯಬೇಕಿತ್ತು, ಆದರೆ ಕೊರೋನಾದಿಂದಾಗಿ ಅದನ್ನು ಮುಂದೂಡಲಾಯಿತು. ಈಗ ಸುಮಾರು 8 ವರ್ಷಗಳ ನಂತರ ಈ ಪಂದ್ಯಾವಳಿಯನ್ನು ಮತ್ತೆ ಆಯೋಜಿಸಲಾಗುತ್ತಿದೆ.
ಈ 5 ತಂಡಕ್ಕೆ ಭಾರತ ತಂಡವನ್ನು ಸೋಲಿಸಲು ಸಾಧ್ಯವಾಗಲಿಲ್ಲ:
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ದಾಖಲೆ ಅತ್ಯುತ್ತಮವಾಗಿದೆ. ತಂಡವು ಇಲ್ಲಿಯವರೆಗೆ ಟೂರ್ನಿಯಲ್ಲಿ ಒಟ್ಟು 29 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 18 ಪಂದ್ಯಗಳಲ್ಲಿ ಜಯಗಳಿಸಿದೆ. 8 ಪಂದ್ಯಗಳಲ್ಲಿ ಮಾತ್ರ ಸೋತದೆ ಮತ್ತು 3 ಪಂದ್ಯಗಳು ಅನಿರ್ದಿಷ್ಟವಾಗಿದ್ದವು. ಚಾಂಪಿಯನ್ಸ್ ಟ್ರೋಫಿಯಲ್ಲಿ ಗರಿಷ್ಠ ಪಂದ್ಯಗಳನ್ನು ಗೆದ್ದ ತಂಡದಲ್ಲಿ ಭಾರತ ಅಗ್ರಸ್ಥಾನದಲ್ಲಿದೆ.
ಚಾಂಪಿಯನ್ಸ್ ಟ್ರೋಫಿ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸಿರುವುದು ಹೇಗೆ?
ಪಂದ್ಯಾವಳಿಯ ಇತಿಹಾಸದಲ್ಲಿ ಇತರ ತಂಡಗಳ ವಿರುದ್ಧ ಭಾರತ ತಂಡದ ದಾಖಲೆಯನ್ನು ನೋಡಿದರೆ, ಅದು ಕೂಡ ಅತ್ಯುತ್ತಮವಾಗಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಈ 5 ತಂಡಗಳು ವಿರುದ್ಧ ಇದುವರೆಗೆ ಟೀಮ್ ಇಂಡಿಯಾ ಸೋಲು ಕಂಡಿಲ್ಲ. ಆ ಐದು ತಂಡಗಳು ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಬಾಂಗ್ಲಾದೇಶ, ಜಿಂಬಾಬ್ವೆ ಮತ್ತು ಕೀನ್ಯಾ.
ಭಾರತ ಮತ್ತು ಪಾಕಿಸ್ತಾನ ನಡುವಿನ ದಾಖಲೆ:
ಇದೆಲ್ಲದರ ನಡುವೆ, ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಇದುವರೆಗೆ ಸೋಲಿಸಲು ಸಾಧ್ಯವಾಗದ ಒಂದು ತಂಡವಿದೆ. ಈ ಏಕೈಕ ತಂಡ ನ್ಯೂಜಿಲೆಂಡ್. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಕೇವಲ ಒಂದು ಪಂದ್ಯ ಮಾತ್ರ ನಡೆದಿದ್ದು, ಅದರಲ್ಲಿ ಕಿವೀಸ್ ತಂಡ ಗೆದ್ದಿದೆ. ಪಾಕಿಸ್ತಾನ ವಿರುದ್ಧದ ಪಂದ್ಯಗಳ ಬಗ್ಗೆ ಮಾತನಾಡಿದರೆ, ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಇಲ್ಲಿಯವರೆಗೆ ಒಟ್ಟು 5 ಪಂದ್ಯಗಳು ನಡೆದಿವೆ. ಇದರಲ್ಲಿ ಟೀಮ್ ಇಂಡಿಯಾ ಎರಡು ಪಂದ್ಯಗಳನ್ನು ಗೆದ್ದರೆ, ಪಾಕಿಸ್ತಾನ ಮೂರರಲ್ಲಿ ಮೇಲುಗೈ ಸಾಧಿಸಿದೆ.
8 ತಂಡಗಳ ನಡುವೆ ಒಟ್ಟು 15 ಪಂದ್ಯಗಳು:
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ 8 ತಂಡಗಳ ನಡುವೆ ಒಟ್ಟು 15 ಪಂದ್ಯಗಳು ನಡೆಯಲಿವೆ. ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗ್ರೂಪ್-ಎ ನಲ್ಲಿವೆ. ಅವರೊಂದಿಗೆ ಇರುವ ಇತರ ಎರಡು ತಂಡಗಳು ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ. ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ.
ಚಾಂಪಿಯನ್ಸ್ ಟ್ರೋಫಿಯ ಈ ಎಲ್ಲಾ 15 ಪಂದ್ಯಗಳು 4 ಸ್ಥಳಗಳಲ್ಲಿ ನಡೆಯಲಿವೆ. ಪಾಕಿಸ್ತಾನದಲ್ಲಿ 3 ಸ್ಥಳಗಳು ಇರಲಿವೆ. ಒಂದು ಸ್ಥಳ ದುಬೈ ಆಗಿರುತ್ತದೆ. ಭಾರತ ತಂಡವು ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಮಾತ್ರ ಆಡಲಿದೆ. ಭಾರತ ತಂಡ ಅರ್ಹತೆ ಪಡೆದರೆ, ಫೈನಲ್ ಕೂಡ ದುಬೈನಲ್ಲಿ ನಡೆಯಲಿದೆ. ಇಲ್ಲದಿದ್ದರೆ ಪ್ರಶಸ್ತಿ ಪಂದ್ಯ ಮಾರ್ಚ್ 9 ರಂದು ಲಾಹೋರ್‌ನಲ್ಲಿ ಆಯೋಜಿಸಲಾಗಿದೆ.
ಫೆಬ್ರವರಿ 20 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ. ಈ ಮ್ಯಾಚ್ನಲ್ಲಿ ಟೀಮ್ ಇಂಡಿಯಾದ ಎದುರಾಳಿ ಬಾಂಗ್ಲಾದೇಶ ತಂಡ. ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಭಾರತ ತಂಡದ 2ನೇ ಎದುರಾಳಿ ಪಾಕಿಸ್ತಾನ. ಹೈವೋಲ್ಟೇಜ್ ಪೈಪೋಟಿಗೆ ಸಾಕ್ಷಿಯಾಗಲಿರುವ ಈ ಪಂದ್ಯವು ಫೆಬ್ರವರಿ 23 ರಂದು ನಡೆಯಲಿದೆ. ಈ ಪಂದ್ಯ ಕೂಡ ದುಬೈ ಅಂತಾರಾಷ್ಟ್ಟೀಯ ಸ್ಟೇಡಿಯಂನಲ್ಲೇ ಜರುಗಲಿದೆ. ಟೀಮ್ ಇಂಡಿಯಾ ತನ್ನ ಕೊನೆಯ ಲೀಗ್ ಮ್ಯಾಚ್ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 2 ರಂದು ದುಬೈನಲ್ಲೇ ನಡೆಯಲಿದೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ