Rohit Sharma: ಟೀಂ ಇಂಡಿಯಾದ ಭವಿಷ್ಯದ ನಾಯಕ ಯಾರು? ಈ ಮೂವರ ಹೆಸರು ಸೂಚಿಸಿದ ರೋಹಿತ್

Rohit Sharma: ಬುಮ್ರಾ, ರಾಹುಲ್ ಮತ್ತು ಪಂತ್ ಟೀಮ್ ಇಂಡಿಯಾದ ಭವಿಷ್ಯದ ನಾಯಕರಾಗುವ ಸಾಧ್ಯತೆಯಿದೆ. ಬುಮ್ರಾ ಈಗಾಗಲೇ ಶ್ರೀಲಂಕಾ ಟಿ20 ಮತ್ತು ಟೆಸ್ಟ್ ಸರಣಿಗೆ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ನಾಯಕನಾಗುವುದಕ್ಕೆ ಬ್ಯಾಟ್ಸ್‌ಮನ್ ಅಥವಾ ಬೌಲರ್ ಎಂಬುದು ಮುಖ್ಯವಲ್ಲ.

Rohit Sharma: ಟೀಂ ಇಂಡಿಯಾದ ಭವಿಷ್ಯದ ನಾಯಕ ಯಾರು? ಈ ಮೂವರ ಹೆಸರು ಸೂಚಿಸಿದ ರೋಹಿತ್
ರೋಹಿತ್ ಶರ್ಮಾ
Follow us
TV9 Web
| Updated By: ಪೃಥ್ವಿಶಂಕರ

Updated on: Feb 23, 2022 | 5:41 PM

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಟಿ20 ಸರಣಿ ಫೆಬ್ರವರಿ 24 ರಂದು ಆರಂಭವಾಗಲಿದ್ದು, ಇದಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಇದರಲ್ಲಿ ಟೀಂ ಇಂಡಿಯಾದ ಭವಿಷ್ಯದ ನಾಯಕನ ಬಗ್ಗೆ ಪ್ರಶ್ನೆಗಳನ್ನು ಕೇಳಲಾಯಿತು. ಇದಕ್ಕೆ ರೋಹಿತ್ ಉತ್ತಮ ಉತ್ತರವನ್ನು ನೀಡಿದರು. ಜಸ್ಪ್ರೀತ್ ಬುಮ್ರಾ (Jaspreet Bumra), ಕೆಎಲ್ ರಾಹುಲ್ (KL Rahul)ಮತ್ತು ರಿಷಬ್ ಪಂತ್ (Rishabh Pant)ಮುಂದಿನ ದಿನಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂಬ ಉತ್ತರವನ್ನು ರೋಹಿತ್ ನೀಡಿದರು.

ಎಲ್ಲಾ ಮೂರು ಮಾದರಿಗಳ ನಾಯಕರಾಗಿರುವ ಕಾರಣ ರೋಹಿತ್ ಶರ್ಮಾ ಟೆಸ್ಟ್ ತಂಡದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಶ್ರೀಲಂಕಾ ಸರಣಿಯ ನಂತರ ಅವರು ಮೊದಲ ಬಾರಿಗೆ ಟೆಸ್ಟ್ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಎಲ್ಲಾ ಮೂರು ಸ್ವರೂಪಗಳಿಗೆ ನಾಯಕನಾಗಿ ಆಯ್ಕೆಯಾದ ನಂತರ, ಹಿಟ್‌ಮ್ಯಾನ್ ಮಾತನಾಡಿ, ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತಕ್ಕೆ ನಾಯಕನಾಗಿರುವುದು ದೊಡ್ಡ ಗೌರವ. ಇದೀಗ ನಮ್ಮ ಮುಂದೆ ಹಲವು ಸವಾಲುಗಳಿವೆ. ಟೆಸ್ಟ್ ಮುನ್ನಡೆಸುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯಾಯಿತು.

ಬುಮ್ರಾ, ರಾಹುಲ್ ಮತ್ತು ಪಂತ್ ಟೀಮ್ ಇಂಡಿಯಾದ ಭವಿಷ್ಯದ ನಾಯಕರಾಗುವ ಸಾಧ್ಯತೆಯಿದೆ. ಬುಮ್ರಾ ಈಗಾಗಲೇ ಶ್ರೀಲಂಕಾ ಟಿ20 ಮತ್ತು ಟೆಸ್ಟ್ ಸರಣಿಗೆ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ನಾಯಕನಾಗುವುದಕ್ಕೆ ಬ್ಯಾಟ್ಸ್‌ಮನ್ ಅಥವಾ ಬೌಲರ್ ಎಂಬುದು ಮುಖ್ಯವಲ್ಲ. ಕ್ರಿಕೆಟ್ ಮನಸ್ಸಿನಿಂದ ಆಡುವ ಆಟ. ಬುಮ್ರಾ ಉತ್ತಮ ಮನಸ್ಸುಳ್ಳವರು ಅವರನ್ನು ನಾನು ಚೆನ್ನಾಗಿ ಬಲ್ಲೆ ಎಂದಿದ್ದಾರೆ. ಬುಮ್ರಾ, ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ಅವರ ಬಗ್ಗೆ ಮಾತನಾಡುವುದಾದರೆ, ಈ 3 ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್‌ನಲ್ಲಿ ಪ್ರಮುಖ ಪಾತ್ರ ವಹಿಸಬೇಕಾಗುತ್ತದೆ, ಈ ಮೂವರು ಆಟಗಾರರು ನಾಯಕತ್ವ ವಿಚಾರದಲ್ಲಿ ಪ್ರಮುಖ ಸ್ಪರ್ಧಿಗಳಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

ಭಾರತ ತಂಡದ ಮಧ್ಯಮ ಕ್ರಮಾಂಕದ ಬಗ್ಗೆ ರೋಹಿತ್ ಶರ್ಮಾ ಅವರನ್ನು ಕೇಳಿದಾಗ, ಮಧ್ಯಮ ಕ್ರಮಾಂಕ ಹೇಗಿದೆ ಎಂದು ಟೀಂ ಇಂಡಿಯಾ ವಿವರಿಸಿದೆ. ‘ನಾನು ಈಗ ಅದರ ಬಗ್ಗೆ ಯೋಚಿಸುತ್ತಿಲ್ಲ. ಟಿ20 ವಿಶ್ವಕಪ್‌ಗೂ ಮುನ್ನ ನಾವು ಸಾಕಷ್ಟು ಪಂದ್ಯಗಳನ್ನು ಆಡಬೇಕಿದೆ. ಸದ್ಯ ನಮ್ಮ ಗಮನ ಪ್ರಸ್ತುತ ಸರಣಿಯ ಮೇಲಿದೆ ಎಂದಿದ್ದಾರೆ.

ಸೂರ್ಯನ ಗಾಯದ ಬಗ್ಗೆ ಕಳವಳ..

ಇಂಜುರಿಯಿಂದ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ಸರಣಿಯಿಂದ ಹೊರಗುಳಿದಿದ್ದಾರೆ. ಅವರು ಸರಣಿಯಿಂದ ನಿರ್ಗಮಿಸಿರುವುದು ತಂಡಕ್ಕೆ ದೊಡ್ಡ ಹೊಡೆತವಾಗಿದೆ. ಸೂರ್ಯನನ್ನು ನೋಡಿ ಬೇಸರವಾಯಿತು. ಆದರೆ, ಇವುಗಳನ್ನು ನಿಯಂತ್ರಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಅವರು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಆದರೆ, ಹಲವು ಆಟಗಾರರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಅವರಿಗೂ ಇದೊಂದು ಉತ್ತಮ ಅವಕಾಶವಾಗಲಿದೆ ಎಂದಿದ್ದಾರೆ.

ಯುವಕರ ಪ್ರದರ್ಶನವನ್ನು ನೋಡಲು ತುಂಬಾ ಸಂತೋಷವಾಯಿತು. ಆದರೆ, ನಮ್ಮ ಹಿರಿಯ ಆಟಗಾರರಿಗೆ ಇಂಜುರಿಯಾಗುವುದನ್ನು ನಾನು ಎಂದಿಗೂ ಬಯಸುವುದಿಲ್ಲ. ಒಮ್ಮೆ ತಂಡದಿಂದ ಹೊರಗುಳಿದರೆ ಮತ್ತೆ ತಂಡಕ್ಕೆ ಹಿಂತಿರುಗುವುದು ಅಷ್ಟು ಸುಲಭವಲ್ಲ ಎಂದು ನಾನು ಹೇಳಬಲ್ಲೆ. ಆದಾಗ್ಯೂ ಈ ಬಾರಿ ಇನ್ನಷ್ಟು ಯುವ ಆಟಗಾರರನ್ನು ಪರೀಕ್ಷಿಸಲು ನಮಗೆ ಅವಕಾಶವಿದೆ ಎಂದರು.

ಯುವ ಆಟಗಾರರಿಗೆ ಹಿಟ್‌ಮ್ಯಾನ್ ಸಲಹೆ..

ಹಲವು ಯುವ ಆಟಗಾರರು ರಣಜಿ ಟ್ರೋಫಿಯಲ್ಲಿ ತಮ್ಮ ಪ್ರದರ್ಶನದಿಂದ ಎಲ್ಲರನ್ನೂ ಮೆಚ್ಚಿಸಿದ್ದಾರೆ. ಆಟಗಾರರಲ್ಲಿ ಅಂಡರ್-19 ವಿಜೇತ ನಾಯಕ ಯಶ್ ಧೂಲ್ ಕೂಡ ಸೇರಿದ್ದಾರೆ. ಅವರು ದೆಹಲಿ ಪರ ಆಡುವಾಗ ತಮಿಳುನಾಡು ವಿರುದ್ಧ ಪ್ರಥಮ ದರ್ಜೆಯ ಚೊಚ್ಚಲ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದರು.

ಅವರು ಉತ್ತಮ ಆಟವನ್ನು ಮುಂದುವರಿಸಬೇಕು. ಇದರಿಂದ ಶೀಘ್ರದಲ್ಲೇ ಅವರಿಗೆ ಅವಕಾಶ ಸಿಗುತ್ತದೆ ಎಂದು ನಾನು ಅವನಿಗೆ ಹೇಳಲು ಬಯಸುತ್ತೇನೆ. ಶ್ರೇಯಸ್ ಅಯ್ಯರ್, ಹನುಮ ವಿಹಾರಿ ಮತ್ತು ಗಿಲ್ ಅವರಂತಹ ಆಟಗಾರರು ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮವಾಗಿ ಆಡಿದ್ದರಿಂದ ಅವಕಾಶ ಪಡೆದರು. ಅದೇ ರೀತಿ ಉಳಿದವರೂ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಅವರು ರನ್ ಗಳಿಸುತ್ತಲೇ ಇರಬೇಕೆಂದು ನಾನು ಬಯಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:ಮುಟ್ಟಿನ ಸಮಯದಲ್ಲಿ ಕ್ರಿಕೆಟ್ ಆಡುವುದು ಸುಲಭವಲ್ಲ! ಬಟ್ಟೆ ಮೇಲೆ ಕಲೆ ಬೀಳುವ ಭಯ; ಭಾರತದ ಮಹಿಳಾ ಕ್ರಿಕೆಟರ್ ಅಳಲು

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ