ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಕನ್ನಡಿಗನಿಗೆ ನಾಯಕತ್ವ ಪಟ್ಟ

ದಕ್ಷಿಣ ಆಫ್ರಿಕಾ ವಿರುದ್ದದ ಮೂರು ಏಕದಿನ ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಒಟ್ಟು 15 ಜನರ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಕತ್ತು ನೋವಿನಿಂದ ಬಳಲುತ್ತಿರುವ ಶುಭ್‌ಮನ್‌ ಗಿಲ್‌ ಸರಣಿಯಿಂದ ಹೊರಬಿದ್ದಿದ್ದಾರೆ ಇನ್ನು ಗಿಲ್‌ ಅನುಪಸ್ಥಿತಿಯಲ್ಲಿ ಕನ್ನಡಿಗನಿಗೆ ನಾಯಕತ್ವ ಪಟ್ಟ ಒಲಿದಿದೆ. ಹಾಗಾದ್ರೆ, ಮೂರು ಏಕದಿನ ಸರಣಿಗೆ ಯಾರಿಗೆಲ್ಲಾ ಸ್ಥಾನ ನೀಡಲಾಗಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಕನ್ನಡಿಗನಿಗೆ ನಾಯಕತ್ವ ಪಟ್ಟ
Kl Rahul

Updated on: Nov 23, 2025 | 7:30 PM

ಪ್ರವಾಸಿ ದಕ್ಷಿಣ ಆಫ್ರಿಕಾ (South Africa)  ವಿರುದ್ದದ ಏಕದಿನ ಕ್ರಿಕೆಟ್​​ ಸರಣಿಗೆ ಭಾರತ ತಂಡ (Team India) ಪ್ರಕಟಿಸಲಾಗಿದೆ. ನಾಯಕ ಶುಭಮನ್‌ ಗಿಲ್‌ (Shubman Gill) ಮತ್ತು ಉಪನಾಯಕ ಶ್ರೇಯಸ್‌ ಅಯ್ಯರ್ ಗಾಯಗೊಂಡಿರುವ ಕಾರಣ, ಅವರ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆಎಲ್‌ ರಾಹುಲ್‌ (KL Rahul) ನಾಯಕರಾಗಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಶುಭ್​​ಮನ್ ಗಿಲ್ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದರು. ಈ ಹಿನ್ನೆಲೆಯಲ್ಲಿ ಗಿಲ್‌ ಮತ್ತು ಅಯ್ಯರ್‌ ಅನುಪಸ್ಥಿತಿಯ ಕಾರಣದಿಂದ ಯಶಸ್ವಿ ಜೈಸ್ವಾಲ್‌ ಮತ್ತು ತಿಲಕ್‌ ವರ್ಮಾ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಶುಭ್​​ಮನ್ ಗಿಲ್ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದರು. ಗಿಲ್ ನರಗಳ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಅವರು ಭಾರತ ತಂಡದ ನಾಯಕ ಶುಭ್​​ಮನ್ ಗಿಲ್  ಮತ್ತೆ ಕಣಕ್ಕಿಳಿಯಲು ಮುಂದಿನ ವರ್ಷದವರೆಗೆ ಕಾಯಬೇಕಿದೆ.

ರಾಹುಲ್‌ ಮತ್ತು ರಿಷಭ್‌ ಪಂತ್‌ ವಿಕೆಟ್‌ ಕೀಪರ್‌ ಆಗಿದ್ದಾರೆ. ವೇಗಿಗಳ ಕೋಟಾದಲ್ಲಿ ಹರ್ಷಿತ್‌ ರಾಣಾ, ಪ್ರಸಿಧ್‌ ಕೃಷ್ಣ, ಅರ್ಶ್‌ದೀಪ್ ಸಿಂಗ್‌ ರನ್ನು ಆಯ್ಕೆ ಮಾಡಲಾಗಿದೆ. ಉಳಿದಂತೆ ಅಲ್‌ ರೌಂಡರ್‌ ನಿತೀಶ್ ಕುಮಾರ್ ರೆಡ್ಡಿ ತಂಡದಲ್ಲಿದ್ದಾರೆ. ಆದರೆ ಈಗ ಚೇತರಿಸಿಕೊಂಡಿರುವ ಆಲ್‌ ರೌಂಡರ್ ಹಾರ್ದಿಕ್‌ ಪಾಂಡ್ಯ ತಂಡಕ್ಕೆ ವಾಪಸ್ ಆಗಿಲ್ಲ.‌

ಇದನ್ನೂ ಓದಿ: ಮುಂದಿನ ವರ್ಷದವರೆಗೆ ಶುಭ್​ಮನ್ ಗಿಲ್ ತಂಡದಿಂದ ಔಟ್..!


ಇನ್ನು ಸ್ಪಿನ್ನರ್‌ ಕೋಟಾದಲ್ಲಿ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಉಳಿದಂತೆ ದಕ್ಷಿಣ ಆಫ್ರಿಕಾ ‘ಎ’ ವಿರುದ್ಧದ ಮೂರು ಪಂದ್ಯಗಳ ಅನಧಿಕೃತ ಏಕದಿನ ಸರಣಿಯಲ್ಲಿ ಭಾರತ ‘ಎ’ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ರುತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ. ಅಲ್ಲದೆ ಧ್ರುವ್‌ ಜುರೆಲ್‌ ಕೂಡಾ ಆಯ್ಕೆಯಾಗಿದ್ದಾರೆ.‌ ಆದ್ರೆ ಈ ಇಬ್ಬರು ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಡಿಮೆ.

ತಂಡ ಇಂತಿದೆ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾ) (ವಿ.ಕೀ), ರಿಷಭ್ ಪಂತ್ (ವಿ.ಕೀ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಶ್‌ದೀಪ್ ಸಿಂಗ್‌, ಧ್ರುವ್ ಜುರೆಲ್

Published On - 6:47 pm, Sun, 23 November 25