AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ದಂಪತಿಗಳಿಗೆ ಗಂಡು ಮಗು ಜನನ; ಮಗುವಿನ ಹೆಸರೇನು ಗೊತ್ತಾ?

Jasprit Bumrah: ಟೀಂ ಇಂಡಿಯಾದ ವೇಗದ ಜಸ್ಪ್ರೀತ್ ಬುಮ್ರಾ ಮತ್ತು ಅವರ ಪತ್ನಿ ಸಂಜನಾ ಗಣೇಶನ್ ದಂಪತಿಗಳಿಗೆ ಗಂಡು ಮಗು ಜನಿಸಿದೆ. ಸ್ವತಃ ಈ ವಿಚಾರವನ್ನು ಬುಮ್ರಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಾಸ್ತವವಾಗಿ ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ವೇಗದ ಬೌಲಿಂಗ್ ವಿಭಾಗವನ್ನು ನಿರ್ವಹಿಸುತ್ತಿದ್ದ ಯಾರ್ಕರ್ ಕಿಂಗ್ ಖ್ಯಾತಿಯ ಬುಮ್ರಾ ನಿನ್ನೆ ಅಂದರೆ ಸೆಪ್ಟಂಬರ್ 3 ರಂದು ಇದ್ದಕ್ಕಿದ್ದಂತೆ ಟೀಂ ಇಂಡಿಯಾವನ್ನು ತೊರೆದು ಮುಂಬೈಗೆ ವಾಪಸ್ಸಾಗಿದ್ದರು.

Jasprit Bumrah: ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ದಂಪತಿಗಳಿಗೆ ಗಂಡು ಮಗು ಜನನ; ಮಗುವಿನ ಹೆಸರೇನು ಗೊತ್ತಾ?
ಜಸ್ಪ್ರೀತ್ ಬುಮ್ರಾ ದಂಪತಿಗಳು
ಪೃಥ್ವಿಶಂಕರ
|

Updated on:Sep 04, 2023 | 11:15 AM

Share

ಟೀಂ ಇಂಡಿಯಾದ ವೇಗದ ಜಸ್ಪ್ರೀತ್ ಬುಮ್ರಾ (Jasprit Bumrah) ಮತ್ತು ಅವರ ಪತ್ನಿ ಸಂಜನಾ ಗಣೇಶನ್ (Sanjana Ganesan) ದಂಪತಿಗಳಿಗೆ ಗಂಡು ಮಗು ಜನಿಸಿದೆ. ಸ್ವತಃ ಈ ವಿಚಾರವನ್ನು ಬುಮ್ರಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಾಸ್ತವವಾಗಿ ಏಷ್ಯಾಕಪ್​ನಲ್ಲಿ (Asia Cup 2023) ಟೀಂ ಇಂಡಿಯಾದ ವೇಗದ ಬೌಲಿಂಗ್ ವಿಭಾಗವನ್ನು ನಿರ್ವಹಿಸುತ್ತಿದ್ದ ಯಾರ್ಕರ್ ಕಿಂಗ್ ಖ್ಯಾತಿಯ ಬುಮ್ರಾ ನಿನ್ನೆ ಅಂದರೆ ಸೆಪ್ಟಂಬರ್ 3 ರಂದು ಇದ್ದಕ್ಕಿದ್ದಂತೆ ಟೀಂ ಇಂಡಿಯಾವನ್ನು ತೊರೆದು ಮುಂಬೈಗೆ ವಾಪಸ್ಸಾಗಿದ್ದರು. ತಂಡದ ಟ್ರಂಪ್ ಕಾರ್ಡ್​ ಆಗಿರುವ ಬುಮ್ರಾ ಹಠಾತ್ ಆಗಿ ಟೀಂ ಇಂಡಿಯಾವನ್ನು (Team India) ತೊರೆದಿದ್ದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಆ ಬಳಿಕ ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ, ಬುಮ್ರಾ ದಂಪತಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಬುಮ್ರಾ ತಂಡವನ್ನು ಬಿಟ್ಟು ದೇಶಕ್ಕೆ ಮರಳಿದ್ದಾರೆ ಎಂದು ವರದಿಯಾಗಿತ್ತು.

ಮಗುವಿನ ಹೆಸರೇನು?

ತಮ್ಮ ಟ್ವಿಟರ್ ಖಾತೆಯಲ್ಲಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿರುವ ಬುಮ್ರಾ ಇಂದು ಮುಂಜಾನೆ ನಮ್ಮ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ. ನಾವೀಗ ಚಂದ್ರನ ಮೇಲೆ ತೇಲುತ್ತಿದ್ದೇವೆ. ಹೊಸ ಸದಸ್ಯರೊಂದಿಗೆ ಬದುಕಿನ ಹೊಸ ಅಧ್ಯಾಯವನ್ನು ಆರಂಭಿಸಲು ಕಾತುರರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇನ್ನು ಇದೇ ಪೋಸ್ಟ್​ನಲ್ಲಿ ತಮ್ಮ ಮಗನ ಹೆಸರನ್ನು ಬಹಿರಂಗಗೊಳಿಸಿರುವ ಬುಮ್ರಾ, ಮಗುವಿಗೆ ‘ಅಂಗದ್ ಜಸ್ಪ್ರೀತ್ ಬುಮ್ರಾ’ ಎಂದು ಹೆಸರಿಟ್ಟಿರುವುದಾಗಿ ಬರೆದುಕೊಂಡಿದ್ದಾರೆ.

ತಂಡಕ್ಕೆ ರೀ ಎಂಟ್ರಿ ಯಾವಾಗ?

ಏತನ್ಮಧ್ಯೆ, ಮೊದಲ ಮಗುವಿನ ಸಂತಸದಲ್ಲಿರುವ ಬುಮ್ರಾ ಬದಲಿಗೆ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾದಲ್ಲಿ ಯಾರು ಸ್ಥಾನ ಪಡೆಯಲ್ಲಿದ್ದಾರೆ ಎಂದು ಕಾದುನೋಡಬೇಕಿದೆ. ನೇಪಾಳ ವಿರುದ್ಧದ ಈ ಪಂದ್ಯಕ್ಕೆ ಮೊಹಮ್ಮದ್ ಶಮಿ ತಂಡಕ್ಕೆ ಮರಳುವ ಸಾಧ್ಯತೆಯಿದೆ. ಆದರೆ ಪ್ರಸಿದ್ಧ್ ಕೃಷ್ಣ ಕೂಡ ಈ ಸ್ಥಾನಕ್ಕೆ ಪೈಪೋಟಿ ನೀಡುತ್ತಿದ್ದಾರೆ. ಇನ್ನು ಬುಮ್ರಾ ಮತ್ತೆ ಯಾವಾಗ ತಂಡ ಕೂಡಿಕೊಳ್ಳಲಿದ್ದಾರೆ ಎಂಬುದನ್ನು ನೋಡುವುದಾದರೆ, ಸೆಪ್ಟೆಂಬರ್ 10 ರ ಭಾನುವಾರದಂದು ಪಾಕಿಸ್ತಾನ ವಿರುದ್ಧ ನಡೆಯಲ್ಲಿರುವ ಸೂಪರ್ ಫೋರ್ ಪಂದ್ಯಕ್ಕೂ ಮುನ್ನ ಬುಮ್ರಾ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:52 am, Mon, 4 September 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು