AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Manish Pandey: ಬರ್ತ್​ ಡೇ ಸಂಭ್ರಮದಲ್ಲಿರುವ ಮನೀಶ್ ಪಾಂಡೆಗೆ ಬಿಸಿಸಿಐನಿಂದ ಸಿಗಲಿಲ್ಲ ಸಂತೋಷದ ಉಡುಗೊರೆ

Happy Birthday Manish Pandey: 2008 ವರ್ಷವು ಮನೀಶ್ ಪಾಂಡೆಯವರಿಗೆ ಬಹಳ ಅದೃಷ್ಟಕರವಾಗಿತ್ತು. ಒಂದೆಡೆ, ವಿಶ್ವಕಪ್ ಗೆದ್ದ ನಂತರ, 2009ನೇ ಇಸವಿಯಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ಪರ ಕ್ರೀಸಿಗಿಳಿದ ಯುವ ಸ್ಫೋಟಕ ಓಪನರ್ ಮನೀಶ್ ಪಾಂಡೆ ಭರ್ಜರಿ ಶತಕ ಸಾಧನೆ ಮಾಡಿದರು.

Happy Birthday Manish Pandey: ಬರ್ತ್​ ಡೇ ಸಂಭ್ರಮದಲ್ಲಿರುವ ಮನೀಶ್ ಪಾಂಡೆಗೆ ಬಿಸಿಸಿಐನಿಂದ ಸಿಗಲಿಲ್ಲ ಸಂತೋಷದ ಉಡುಗೊರೆ
ಮನೀಶ್ ಪಾಂಡೆ
TV9 Web
| Edited By: |

Updated on: Sep 10, 2021 | 6:33 PM

Share

ಮನೀಶ್ ಪಾಂಡೆ ಭಾರತೀಯ ಕ್ರಿಕೆಟ್​ನಲ್ಲಿ ಅತ್ಯಂತ ಫಿಟ್ ಮತ್ತು ಸ್ಟೈಲಿಶ್ ಆಟಗಾರರಲ್ಲಿ ಒಬ್ಬರು. 19 ನೇ ವಯಸ್ಸಿನಲ್ಲಿ ವಿಶ್ವಕಪ್ ಗೆದ್ದ ನಂತರ, ಐಪಿಎಲ್​ನಲ್ಲಿ ಶತಕ ಗಳಿಸಿದ ಮನೀಶ್ ಈಗ ನಿಧಾನವಾಗಿ ಭಾರತ ತಂಡದಿಂದ ದೂರವಾಗುತ್ತಿದ್ದಾರೆ. ಯಾವುದೇ ಪ್ರಮುಖ ಟೂರ್ನಿಯಲ್ಲಿ ಸ್ಥಾನ ಪಡೆಯದ ಮನೀಶ್, ಇತ್ತೀಚೆಗಿನ ಶ್ರೀಲಂಕಾ ಪ್ರವಾಸದ ವೇಳೆ ಎಲ್ಲರನ್ನೂ ನಿರಾಸೆಗೊಳಿಸಿದರು. ಪರಿಣಾಮವಾಗಿ, ಮುಂಬರುವ ಟಿ 20 ವಿಶ್ವಕಪ್‌ಗಾಗಿ ಅವರು ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಹೀಗೆ ವೃತ್ತಿ ಬದುಕಿನಲ್ಲಿ ಏರಳಿತ ಕಂಡಿರುವ ಮನೀಶ್​ಗೆ ಇಂದು ಹುಟ್ಟುಹಬ್ಬ.

ಮನೀಶ್ ಪಾಂಡೆ ಸೆಪ್ಟೆಂಬರ್ 10, 1989 ರಂದು ಕುಮಾನ್ ಜಿಲ್ಲೆಯ ಬಾಗೇಶ್ವರದಲ್ಲಿ ಜನಿಸಿದರು. ಆದರೆ ಆತ 15 ವರ್ಷದವನಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ಸ್ಥಳಾಂತರಗೊಂಡಿತು. ಅವರ ತಂದೆ ಭಾರತೀಯ ಸೇನೆಯಲ್ಲಿದ್ದರು. ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಮನೀಶ್ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್‌ ಪರ ಆಡಿದರು. ಇಲ್ಲಿಂದ ಆರಂಭವಾದ ಮನೀಶ್ ಅವರ ಕ್ರಿಕೆಟ್ ಜೀವನದಲ್ಲಿ 2008 ರಲ್ಲಿ ಒಂದು ದೊಡ್ಡ ಸಂಗತಿ ಸಂಭವಿಸಿತು. ವಿರಾಟ್ ನಾಯಕತ್ವದಲ್ಲಿ ಭಾರತ ಅಂಡರ್ -19 ವಿಶ್ವಕಪ್ ಗೆದ್ದಿತ್ತು. ಆ ತಂಡದಲ್ಲಿ ಮನೀಶ್ ಕೂಡ ಪ್ರಮುಖ ಪಾತ್ರ ವಹಿಸಿದ್ದರು.

ಐಪಿಎಲ್‌ನಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ 2008 ವರ್ಷವು ಮನೀಶ್ ಪಾಂಡೆಯವರಿಗೆ ಬಹಳ ಅದೃಷ್ಟಕರವಾಗಿತ್ತು. ಒಂದೆಡೆ, ವಿಶ್ವಕಪ್ ಗೆದ್ದ ನಂತರ, 2009ನೇ ಇಸವಿಯಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ಪರ ಕ್ರೀಸಿಗಿಳಿದ ಯುವ ಸ್ಫೋಟಕ ಓಪನರ್ ಮನೀಶ್ ಪಾಂಡೆ ಭರ್ಜರಿ ಶತಕ ಸಾಧನೆ ಮಾಡಿದರು. ಇದು ಐಪಿಎಲ್ ಇತಿಹಾಸದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ನಿಂದ ದಾಖಲಾದ ಮೊದಲ ಶತಕವಾಗಿದೆ. ಹಾಗೆಯೇ ಆರ್‌ಸಿಬಿ ಪರ ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ ಮನೀಶ್ ಪಾಂಡೆ ಭಾಜನವಾದರು. ಇದು ಅವರ ಮೊದಲ ಐಪಿಎಲ್ ಶತಕವಾಗಿದ್ದು, ಐಪಿಎಲ್ ಶತಕ ಬಾರಿಸಿದ ಮೊದಲ ಭಾರತೀಯ ಎನಿಸಿಕೊಂಡರು. 2014 ರಲ್ಲಿ ಅವರು ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿದ್ದರು. ಫೈನಲ್‌ನಲ್ಲಿ 94 ರನ್ ಗಳಿಸಿ ತಂಡಕ್ಕೆ ಟ್ರೋಫಿ ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಭಾರತೀಯ ತಂಡದಲ್ಲಿ ಪಾದಾರ್ಪಣೆ ಮನೀಶ್ ಪಾಂಡೆ 2015 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನಕ್ಕೆ ಪಾದಾರ್ಪಣೆ ಮಾಡಿದರು. ಅವರು ಆರಂಭಿಕ ಪಂದ್ಯದಲ್ಲಿ ಕೇದಾರ್ ಜಾಧವ್ ಜೊತೆ 144 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಅದೇ ಪ್ರವಾಸದಲ್ಲಿ ಅವರನ್ನು ಟಿ -20 ತಂಡದಲ್ಲಿ ಸೇರಿಸಲಾಯಿತು. 2016 ಆಸ್ಟ್ರೇಲಿಯಾ ಪ್ರವಾಸದಲ್ಲಿ, ಅವರು ಸಿಡ್ನಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ 104 ರನ್​ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ಅವರು 2016 ರ ಟಿ 20 ವಿಶ್ವಕಪ್ ಮತ್ತು 2017 ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರ ತಂಡದಲ್ಲಿದ್ದರು. ಆದರೆ ಅವರ ಸ್ಟ್ರೈಕ್ ರೇಟ್ ಕುಸಿಯುತ್ತಿರುವ ಕಾರಣ ಮತ್ತು ಇತ್ತೀಚೆಗೆ ಫಾರ್ಮ್ ಕುಸಿಯುತ್ತಿರುವ ಕಾರಣ, ಹೈದರಾಬಾದ್ ತಂಡದಲ್ಲಿ ಅವರಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದಕ್ಕಾಗಿಯೇ ಅವರಿಗೆ ಟಿ 20 ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಲಿಲ್ಲ.

Follow Us
TV9 Web
TV9 Web

TV9 Kannada

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್