ಇಂದು ಭಾರತ-ಪಾಕಿಸ್ತಾನ ಫೈನಲ್ ಫೈಟ್..! ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ

|

Updated on: Aug 26, 2023 | 8:43 AM

IBSA World Games: ನಡೆಯುತ್ತಿರುವ IBSA ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಅಂಧರ ಕ್ರಿಕೆಟ್ ತಂಡ ತನ್ನ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಫೈನಲ್​ಗೇರಿದೆ. ಇದೀಗ ಫೈನಲ್​ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಉಭಯ ತಂಡಗಳ ಫೈನಲ್ ಕದನ ಇಂದು ಅಂದರೆ, ಆಗಸ್ಟ್ 26 ರ ಶನಿವಾರದಂದು ಎಡ್ಜ್‌ಬಾಸ್ಟನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.

ಇಂದು ಭಾರತ-ಪಾಕಿಸ್ತಾನ ಫೈನಲ್ ಫೈಟ್..! ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ
ಭಾರತ ಅಂಧರ ಕ್ರಿಕೆಟ್ ತಂಡ
Follow us on

ಇದೇ ಸೆಪ್ಟೆಂಬರ್ 2 ರಂದು ಏಷ್ಯಾಕಪ್‌ನಲ್ಲಿ (Asia Cup 2023) ಭಾರತ ಮತ್ತು ಪಾಕಿಸ್ತಾನದ (India vs Pakistan) ನಡುವೆ ಹೈವೋಲ್ಟೇಜ್ ಕ್ರಿಕೆಟ್ ಕದನ ನಡೆಯಲಿದೆ. ಆದರೆ ಅದಕ್ಕೂ ಮೊದಲು ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಕದನವನ್ನು ಕ್ರಿಕೆಟ್ ಅಭಿಮಾನಿಗಳು ಕಣ್ತುಂಬಿಕೊಳ್ಳಬಹುದಾಗಿದೆ. ನಡೆಯುತ್ತಿರುವ IBSA ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಅಂಧರ ಕ್ರಿಕೆಟ್ ತಂಡ ತನ್ನ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಫೈನಲ್​ಗೇರಿದೆ. ಇದೀಗ ಫೈನಲ್​ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಉಭಯ ತಂಡಗಳ ಫೈನಲ್ ಕದನ ಇಂದು ಅಂದರೆ, ಆಗಸ್ಟ್ 26 ರ ಶನಿವಾರದಂದು ಎಡ್ಜ್‌ಬಾಸ್ಟನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.

ಸುಲಭವಾಗಿ ಗೆದ್ದ ಭಾರತ

ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್‌ ಕಳೆದುಕೊಂಡು 144 ರನ್‌ ಕಲೆಹಾಕಿತು. ತಂಡಕ್ಕೆ ಉತ್ತಮ ಆರಂಭ ಸಿಕ್ಕಿದ್ದರಿಂದ ತಂಡ ಮೊದಲ 9 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 62 ರನ್ ಗಳಿಸಿತ್ತು. ಹೀಗಾಗಿ ಬಾಂಗ್ಲಾದೇಶ ತಂಡಕ್ಕೆ ಬಿಗ್ ಸ್ಕೋರ್ ಸೆಟ್ ಮಾಡುವ ಅವಕಾಶವಿತ್ತು. ಆದರೆ ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳು ಬಲಿಷ್ಠ ಆಟ ಪ್ರದರ್ಶಿಸಿ, ಬಾಂಗ್ಲಾದೇಶವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಇನ್ನು ಈ ಗುರಿಯನ್ನು ಟೀಂ ಇಂಡಿಯಾ 18 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತ್ತು. ತಂಡದ ಪರ 68 ರನ್ ಜೊತೆಯಾಟ ನಡೆಸಿದ ಸುನಿಲ್ ರಮೇಶ್ ಮತ್ತು ನರೇಶ್‌ಭಾಯ್ ಬಾಲುಭಾಯ್ ತುಮ್ಡಾ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.

ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?

ಇದೀಗ ಫೈನಲ್​ಗೆ ಪ್ರವೇಶಿಸಿರುವ ಭಾರತ, ಪ್ರಶಸ್ತಿ ಸುತ್ತಿನಲ್ಲಿ ಪಾಕಿಸ್ತಾನವನ್ನು ಎದುರಿಸಬೇಕಾಗಿದೆ. ಇದರೊಂದಿಗೆ ಭಾರತ ತಂಡಕ್ಕೆ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಕೂಡ ಸಿಕ್ಕಿದೆ. ವಾಸ್ತವವಾಗಿ ಈ ಟೂರ್ನಿಯ ಲೀಗ್ ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಪಾಕಿಸ್ತಾನ 18 ರನ್‌ಗಳಿಂದ ಭಾರತವನ್ನು ಸೋಲಿಸಿತು. ಇದೀಗ ಆ ಸೋಲಿನ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಬಯಸಿದ್ದು, ಪಾಕಿಸ್ತಾನದ ಪ್ರಶಸ್ತಿ ಗೆಲ್ಲುವ ಕನಸಿಗೆ ಬ್ರೇಕ್ ಹಾಕುವ ತವಕದಲ್ಲಿದೆ.

ಮಹಿಳಾ ತಂಡವೂ ಫೈನಲ್‌ಗೆ

ಪುರುಷರ ತಂಡಕ್ಕಿಂತ ಮೊದಲು ಭಾರತದ ಮಹಿಳಾ ತಂಡವೂ ಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾರತ ತಂಡ ಈ ಟೂರ್ನಿಯಲ್ಲಿ ಫೈನಲ್ ತಲುಪಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಶನಿವಾರ ನಡೆಯಲಿರುವ ಫೈನಲ್‌ನಲ್ಲಿ ಮಹಿಳಾ ತಂಡವೂ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಪಂದ್ಯ ಕೂಡ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:42 am, Sat, 26 August 23