ಹೊಸ ವರ್ಷದಲ್ಲಿ ಟೀಮ್ ಇಂಡಿಯಾ (Team India) ಮೊದಲ ವಾರದಲ್ಲೇ ಅಭಿಯಾನ ಆರಂಭಿಸಲಿದೆ. ಜನವರಿ 3 ರಿಂದ ಭಾರತ ತಂಡದ ಕ್ರಿಕೆಟ್ ವೇಳಾಪಟ್ಟಿ ಶುರುವಾಗಲಿದೆ. ಅದರಂತೆ ಈ ವರ್ಷ ಟೀಮ್ ಇಂಡಿಯಾ ಹಲವು ಸರಣಿಗಳನ್ನು ಹಾಗೂ ಪ್ರತಿಷ್ಠಿತ ಟೂರ್ನಿಗಳನ್ನು ಆಡಲಿದೆ. ಅದರಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹಾಗೂ ಏಕದಿನ ವಿಶ್ವಕಪ್ ಪ್ರಮುಖವಾದವು. ಅಂದರೆ ಈ ವರ್ಷ ಐಸಿಸಿ ಟ್ರೋಫಿ ಗೆಲ್ಲಲು ಟೀಮ್ ಇಂಡಿಯಾ ಮುಂದೆ ಎರಡು ಅವಕಾಶಗಳಿವೆ. ಈ ಮೂಲಕ ಭಾರತ ತಂಡವು 9 ವರ್ಷಗಳ ಕಾಯುವಿಕೆಗೆ ಇತಿಶ್ರೀ ಹಾಡಲಿದೆಯಾ ಕಾದು ನೋಡಬೇಕಿದೆ.
ಈ ವರ್ಷದ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಹೀಗಿದೆ:
ಭಾರತ vs ಶ್ರೀಲಂಕಾ ಸರಣಿ: ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ.
ಭಾರತ vs ನ್ಯೂಜಿಲೆಂಡ್ ಸರಣಿ: ಭಾರತದಲ್ಲೇ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಒಟ್ಟು 6 ಪಂದ್ಯಗಳನ್ನು ಆಡಲಿದೆ. ಈ ಸರಣಿಯ ವೇಳಾಪಟ್ಟಿ ಹೀಗಿದೆ.
ಭಾರತ vs ಆಸ್ಟ್ರೇಲಿಯಾ: ಫೆಬ್ರವರಿ 2023 ರಲ್ಲಿ ಪ್ರಾರಂಭವಾಗುವ ಈ ಐತಿಹಾಸಿಕ ಟೆಸ್ಟ್ ಸರಣಿಯು ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಶಿಪ್ನ ಭಾರತದ ಅಂತಿಮ ಸರಣಿಯಾಗಿದೆ. ಈ ಸರಣಿಯಲ್ಲಿ ಭಾರತ ನಾಲ್ಕು ಟೆಸ್ಟ್ ಪಂದ್ಯಗಳು ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ.
ಮಾರ್ಚ್ ರಿಂದ ಮೇ ತಿಂಗಳು- ಐಪಿಎಲ್ 2023
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಜೂನ್ ತಿಂಗಳಲ್ಲಿ ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಸದ್ಯ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಟೇಬಲ್ನಲ್ಲಿ 2ನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾ ಫೈನಲ್ ಆಡುವ ವಿಶ್ವಾಸದಲ್ಲಿದೆ.
ವೆಸ್ಟ್ ಇಂಡೀಸ್ vs ಭಾರತ: ಐಪಿಎಲ್ ಬಳಿಕ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಭಾರತ ತಂಡವು ಎರಡು ಟೆಸ್ಟ್‌ಗಳು, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿಯ ವೇಳಾಪಟ್ಟಿ ಇನ್ನಷ್ಟೇ ನಿಗದಿಯಾಗಬೇಕಿದೆ.
ಏಷ್ಯಾ ಕಪ್ 2023: ಈ ವರ್ಷ ಸೆಪ್ಟೆಂಬರ್ನಲ್ಲಿ ಪಾಕಿಸ್ತಾನದಲ್ಲಿ ಏಷ್ಯಾಕಪ್ ಕೂಡ ನಡೆಯಲಿದೆ. ಈ ಬಾರಿ ಪಾಕ್ನಲ್ಲಿ ಟೂರ್ನಿ ನಡೆದರೆ ಭಾರತ ಭಾಗವಹಿಸುವುದು ಅನುಮಾನ. ಈಗಾಗಲೇ ತಟಸ್ಥ ಸ್ಥಳದಲ್ಲಿ ಏಷ್ಯಾಕಪ್ ಅನ್ನು ಆಯೋಜಿಸುವಂತೆ ಬಿಸಿಸಿಐಗೆ ಪಾಕ್ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದೆ. ಹೀಗಾಗಿ ಏಷ್ಯಾಕಪ್ ಆಯೋಜನೆ ಮತ್ತು ವೇಳಾಪಟ್ಟಿ ಇನ್ನೂ ಕೂಡ ಫೈನಲ್ ಆಗಿಲ್ಲ.
ಭಾರತ vs ಆಸ್ಟ್ರೇಲಿಯಾ: ಅಕ್ಟೋಬರ್ ತಿಂಗಳಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಲು ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬರಲಿದೆ.
ಏಕದಿನ ವಿಶ್ವಕಪ್: ಅಕ್ಟೋಬರ್/ನವೆಂಬರ್ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. 2011 ರಲ್ಲಿ ಕೊನೆಯ ಬಾರಿ ಏಕದಿನ ವಿಶ್ವಕಪ್ಗೆ ಭಾರತ ಆತಿಥ್ಯವಹಿಸಿದ್ದ ವೇಳೆ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹೀಗಾಗಿ ಈ ಬಾರಿ ಕೂಡ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಈ ಬಿಗ್ ಟೂರ್ನಿಯ ವೇಳಾಪಟ್ಟಿ ಇನ್ನಷ್ಟೇ ಪ್ರಕಟವಾಗಬೇಕಿದೆ.
ಆಸ್ಟ್ರೇಲಿಯಾ vs ಭಾರತ: ನವೆಂಬರ್/ಡಿಸೆಂಬರ್ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಚುಟುಕು ಸರಣಿ ಆಡಲಿದೆ. ಈ ಸರಣಿಯಲ್ಲಿ ಐದು ಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿಯ ವೇಳಾಪಟ್ಟಿ ಇನ್ನೂ ಕೂಡ ನಿಗದಿಯಾಗಿಲ್ಲ.
ಭಾರತ vs ದಕ್ಷಿಣ ಆಫ್ರಿಕಾ: ಟೀಮ್ ಇಂಡಿಯಾ 2023ರ ಕೊನೆಯ ಸರಣಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಆಡಲಿದೆ. ಈ ಸರಣಿಯಲ್ಲಿ ಎರಡು ಟೆಸ್ಟ್, ಮೂರು ಏಕದಿನ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಲಿವೆ.