AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಮದುವೆ ತಯಾರಿಯ ನಡುವೆಯೂ ಏಕದಿನ ಸರಣಿಗೆ ಸಮರಾಭ್ಯಾಸ ಶುರು ಮಾಡಿದ ರಾಹುಲ್; ವಿಡಿಯೋ

KL Rahul: ಜನವರಿ 10ರಿಂದ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಇದಕ್ಕೂ ಮುನ್ನ ಗುವಾಹಟಿಯಲ್ಲಿ ರಾಹುಲ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

KL Rahul: ಮದುವೆ ತಯಾರಿಯ ನಡುವೆಯೂ ಏಕದಿನ ಸರಣಿಗೆ ಸಮರಾಭ್ಯಾಸ ಶುರು ಮಾಡಿದ ರಾಹುಲ್; ವಿಡಿಯೋ
ಅಥಿಯಾ ಶೆಟ್ಟಿ, ಕೆಎಲ್ ರಾಹುಲ್
TV9 Web
| Updated By: ಪೃಥ್ವಿಶಂಕರ|

Updated on:Jan 07, 2023 | 12:03 PM

Share

ಟೀಂ ಇಂಡಿಯಾ ಕ್ರಿಕೆಟಿಗ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ (KL Rahul and Athiya Shetty ) ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ವಿವಾಹ ಸಮಾರಂಭ ಇದೇ ತಿಂಗಳ 21 ಮತ್ತು 23 ರ ನಡುವೆ ನಡೆಯಲಿದೆ. ಹೀಗಾಗಿ ಮದುವೆಯ ತಯಾರಿಗಾಗಿ ಶ್ರೀಲಂಕಾ ವಿರುದ್ಧದ (Team India and Sri Lanka)  ಟಿ20 ಸರಣಿಯಿಂದ ರಾಹುಲ್ ಬ್ರೇಕ್ ಪಡೆದಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಇದೀಗ ಟಿ20 ಸರಣಿ ಮುಕ್ತಾಯ ಹಂತ ತಲುಪಿದ್ದು, ಏಕದಿನ ಸರಣಿ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ ಏಕದಿನ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಭಾರತದ ಆರಂಭಿಕ ಆಟಗಾರ ರಾಹುಲ್ ಮದುವೆ ತಯಾರಿಯನ್ನು ಸಂಪೂರ್ಣಗೊಳಿಸಿ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಆರಂಭಕ್ಕೂ ಮುನ್ನ ರಾಹುಲ್ ಮೈದಾನದಲ್ಲಿ ಬೆವರು ಹರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈಗಾಗಲೇ ರಾಹುಲ್ ಫಾರ್ಮ್​ ಕಳೆದುಕೊಂಡು ತಿಂಗಳುಗಳೆ ಕಳೆದಿವೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯೊಂದಿಗೆ 2023 ವರ್ಷವನ್ನು ಪ್ರಾರಂಭಿಸುತ್ತಿರುವ ರಾಹುಲ್​ಗೆ ಇದು ಅತ್ಯಂತ ಮಹತ್ವದ ಸರಣಿಯಾಗಿದೆ. ಈ ಸರಣಿಯಲ್ಲಿ ಫಾರ್ಮ್​ ಕಂಡುಕೊಳ್ಳುವುದನ್ನು ಬಿಟ್ಟು ರಾಹುಲ್​ಗೆ ಬೇರೆ ಮಾರ್ಗವೇ ಇಲ್ಲದಂತ್ತಾಗಿದೆ. ಏಕೆಂದರೆ ಇದೇ ವರ್ಷ ನಡೆಯಲ್ಲಿರುವ ಏಕದಿನ ವಿಶ್ವಕಪ್​ಗೆ ಈಗಲೇ ತಯಾರಿ ಆರಂಭಿಸಿರುವ ಬಿಸಿಸಿಐ ಕಳಪೆ ಫಾರ್ಮ್​ನಲ್ಲಿ ಬಳಲುತ್ತಿರುವ ಆಟಗಾರರ ಮೇಲೆ ನಿರ್ಧಾಕ್ಷಣ್ಯವಾಗಿ ತೀರ್ಮಾನ ತೆಗೆದುಕೊಳ್ಳುವ ಸೂಚನೆ ನೀಡಿದೆ. ಹೀಗಾಗಿ ವಿಶ್ವಕಪ್ ಆಡಬೇಕೆಂದರೆ ರಾಹುಲ್ ಅದ್ಭುತ ಪ್ರದರ್ಶನ ನೀಡಲೇಬೇಕಾಗಿದೆ. ಅಲ್ಲದೆ ವರ್ಷದ ಆರಂಭದಲ್ಲಿಯೇ ಉಪನಾಯಕತ್ವ ಪಟ್ಟವನ್ನು ಕಳೆದುಕೊಂಡಿರುವ ರಾಹುಲ್ ಉತ್ತಮ ಪ್ರದರ್ಶನ ನೀಡಿದರಷ್ಟೇ ತಂಡಕ್ಕೆ ಮರಳುವ ಅವಕಾಶ ಹೊಂದಿದ್ದಾರೆ.

Hockey World Cup: ಹಾಕಿ ವಿಶ್ವಕಪ್​ಗೆ ಕೌಂಟ್‌ಡೌನ್ ಪ್ರಾರಂಭ; ಮಹಾ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ರಾಹುಲ್ ಫಾರ್ಮ್ ತಲೆನೋವಾಗಿ ಪರಿಣಮಿಸಿದೆ

ಜನವರಿ 10ರಿಂದ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಇದಕ್ಕೂ ಮುನ್ನ ಗುವಾಹಟಿಯಲ್ಲಿ ರಾಹುಲ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ರಾಹುಲ್ ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. ಕಳೆದ ಕೆಲ ದಿನಗಳಿಂದ ಕಳಪೆ ಫಾರ್ಮ್‌ನಿಂದ ಸಂಕಷ್ಟದಲ್ಲಿರುವ ರಾಹುಲ್ ಅವರ ಬ್ಯಾಟಿಂಗ್ ಭಾರತಕ್ಕೆ ತಲೆನೋವಾಗಿ ಉಳಿದಿದೆ. ಸರಣಿಯ ಆರಂಭಕ್ಕೂ ಮುನ್ನ ರಾಹುಲ್ ಅವರು ತಮ್ಮ ತಯಾರಿಯ ಬಗ್ಗೆ ಹಂಚಿಕೊಂಡ ವೀಡಿಯೊದಲ್ಲಿ, ಅವರು ತಮ್ಮ ನೆಚ್ಚಿನ ಶಾಟ್ ಆಡುತ್ತಿರುವುದನ್ನು ನಾವು ಕಾಣಬಹುದಾಗಿದೆ.

View this post on Instagram

A post shared by KL Rahul? (@klrahul)

ಮದುವೆಯ ಸಿದ್ಧತೆಗಳು ಪ್ರಾರಂಭ

ಇತ್ತೀಚೆಗಷ್ಟೇ ರಾಹುಲ್ ದುಬೈನಲ್ಲಿ ಅಥಿಯಾ ಜೊತೆ ಹೊಸ ವರ್ಷ ಆಚರಿಸಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಇಬ್ಬರೂ ನಿರಂತರವಾಗಿ ರೊಮ್ಯಾಂಟಿಕ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ರಾಹುಲ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಅಥಿಯಾ ಮತ್ತು ಆಕೆಯ ಸಹೋದರ ಅಹಾನ್ ಅವರೊಂದಿಗೆ ಜಾಲಿ ಮೂಡ್​ನಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರಿಂದ ಮದುವೆ ತಯಾರಿ ಜೋರಾಗಿ ನಡೆಯುತ್ತಿದೆ ಎಂದು ಊಹಿಸಲಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Sat, 7 January 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ