6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಲೀಗ್​ನಲ್ಲಿ ಹೊಸ ದಾಖಲೆ

| Updated By: ಝಾಹಿರ್ ಯೂಸುಫ್

Updated on: Jul 09, 2022 | 12:54 PM

ಚಿಕಾಗೋ ಟೈಗರ್ಸ್ ಪರ ಕರಣ್ ಕುಮಾರ್ 53, ಮನನ್ ಪಟೇಲ್ 43 ರನ್ ಗಳಿಸಿದರೆ, ಕೆಲ್ವಿನ್ ಸಾವೇಜ್ 49 ರನ್ ಗಳಿಸುವ ಮೂಲಕ ಗೆಲುವಿನ ರೂವಾರಿ ಎನಿಸಿಕೊಂಡರು. ಅದರಂತೆ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಲೀಗ್​ನಲ್ಲಿ ಹೊಸ ದಾಖಲೆ
ಸಾಂದರ್ಭಿಕ ಚಿತ್ರ
Follow us on

ಅಮೆರಿಕದಲ್ಲಿ ನಡೆಯುತ್ತಿರುವ ಮೈನರ್ ಲೀಗ್ ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 5 ಸಿಕ್ಸ್​ ಚಚ್ಚಿಸಿಕೊಳ್ಳುವ ಭಾರತೀಯ ಮೂಲದ ವೇಗಿಯೊಬ್ಬರು ಅತ್ಯಂತ ಕೆಟ್ಟ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಿಕಾಗೊ ಟೈಗರ್ಸ್ ಹಾಗೂ ಚಿಕಾಗೊ ಬ್ಲಾಸ್ಟರ್ಸ್​ ನಡುವಿನ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚಿಕಾಗೊ ಟೈಗರ್ಸ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಅಂತಿಮ ಓವರ್​ಗಳಲ್ಲಿ ಅಬ್ಬರಿಸಿದ ಟೈಗರ್ಸ್ ಬ್ಯಾಟ್ಸ್​ಮಮ್ ಕೆಲ್ವಿನ್ ಸಾವೇಜ್ ಸ್ಪೋಟಕ ಇನಿಂಗ್ಸ್ ಆಡಿದ್ದರು. ಈ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಾಯಿಸಿದರು.

ಸಿಕ್ಸ್ – ಫೋರ್​ಗಳ ಅಬ್ಬರದೊಂದಿಗೆ ಬ್ಯಾಟ್ ಬೀಸಿದ ಕೆಲ್ವಿನ್ 19ನೇ ಓವರ್​ನಲ್ಲಿ ಸಿಡಿಲಬ್ಬರ ಪ್ರದರ್ಶಿಸಿದ್ದರು. ಭಾರತೀಯ ಮೂಲದ ಮೋಹಿತ್ ಪಟೇಲ್ ಅವರ ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆಗೈದರು. ಮೋಹಿತ್ ಅವರ ಮೊದಲ ಎರಡು ಎಸೆತಗಳಲ್ಲಿ ಕೆಲ್ವಿನ್ ಸಿಕ್ಸರ್ ಬಾರಿಸಿದರು. ಮೂರನೇ ಎಸೆತದಲ್ಲಿ ಬೌಂಡರಿ ಸಿಡಿಸಿದರು. ಇದಾದ ಬಳಿಕ ಮುಂದಿನ ಮೂರು ಎಸೆತಗಳಲ್ಲಿ 3 ಸಿಕ್ಸ್ ಸಿಡಿಸುವ ಮೂಲಕ ಹೊಸ ಇತಿಹಾಸ ಬರೆದರು. ಅಂದರೆ ಮೈನರ್ ಟಿ20 ಲೀಗ್​ನಲ್ಲಿ ಒಂದೇ ಓವರ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ದಾಖಲೆ ಕೆಲ್ವಿನ್ ಪಾಲಾಗಿದೆ. ಮತ್ತೊಂದೆಡೆ ಒಂದೇ ಓವರ್​ನಲ್ಲಿ 34 ರನ್ ಬಿಟ್ಟುಕೊಡುವ ಮೂಲಕ ಮೋಹಿತ್ ಪಟೇಲ್ ಅತ್ಯಂತ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದನ್ನೂ ಓದಿ
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

ಇನ್ನು ಈ ಪಂದ್ಯದಲ್ಲಿ ಕೇವಲ 17 ಎಸೆತಗಳಲ್ಲಿ ಅಜೇಯ 49 ರನ್​ ಬಾರಿಸುವ ಮೂಲಕ ಕೆಲ್ವಿನ್ ಸಾವೇಜ್ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ಕ್ಕೆ ತಂದು ನಿಲ್ಲಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟ್ ಬೀಸಿದ ಚಿಕಾಗೊ ಬ್ಲಾಸ್ಟರ್ಸ್ ನಿಗದಿತ 20 ಓವರ್‌ಗಳಲ್ಲಿ 183 ರನ್ ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಚಿಕಾಗೊ ಟೈಗರ್ಸ್ ತಂಡವು 8 ರನ್​ಗಳ ರೋಚಕ ಜಯ ಸಾಧಿಸಿತು.

ಚಿಕಾಗೋ ಟೈಗರ್ಸ್ ಪರ ಕರಣ್ ಕುಮಾರ್ 53, ಮನನ್ ಪಟೇಲ್ 43 ರನ್ ಗಳಿಸಿದರೆ, ಕೆಲ್ವಿನ್ ಸಾವೇಜ್ 49 ರನ್ ಗಳಿಸುವ ಮೂಲಕ ಗೆಲುವಿನ ರೂವಾರಿ ಎನಿಸಿಕೊಂಡರು. ಅದರಂತೆ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.