ನಾಯಕನೂ ಸೇರಿ ಟಿ20 ಕ್ರಿಕೆಟ್​ಗೆ ವಿದಾಯ ಹೇಳಬಹುದಾದ ಟೀಂ ಇಂಡಿಯಾ ಕ್ರಿಕೆಟಿಗರಿವರು..!

T20 World Cup 2022: ಈ ಸೋಲಿನ ನಂತರ ಕೆಲವು ಆಟಗಾರರ ನಿವೃತ್ತಿ ಸುದ್ದಿ ಬರಬಹುದು ಎಂದು ಭಾರತ ತಂಡದ ಮಾಜಿ ನಾಯಕ ಸುನೀವ್ ಗವಾಸ್ಕರ್ ಕೂಡ ಒಪ್ಪಿಕೊಂಡಿದ್ದಾರೆ.

ನಾಯಕನೂ ಸೇರಿ ಟಿ20 ಕ್ರಿಕೆಟ್​ಗೆ ವಿದಾಯ ಹೇಳಬಹುದಾದ ಟೀಂ ಇಂಡಿಯಾ ಕ್ರಿಕೆಟಿಗರಿವರು..!
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on: Nov 10, 2022 | 8:15 PM

ಐಸಿಸಿ ಟೂರ್ನಿಗಳಲ್ಲಿ ಭಾರತ ತಂಡಕ್ಕೆ (Team India) ಮತ್ತೊಮ್ಮೆ ನಾಕೌಟ್ ಪಂದ್ಯದ ಅಡಚಣೆಯನ್ನು ದಾಟಲು ಸಾಧ್ಯವಾಗಲಿಲ್ಲ. ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿ ಟಿ20 ವಿಶ್ವಕಪ್​ನಿಂದ (T20 World Cup 2022) ಹೊರದಬ್ಬಿದೆ. ಇದರೊಂದಿಗೆ 2013ರ ನಂತರ ಐಸಿಸಿ ಟ್ರೋಫಿ ಹಾಗೂ 2007ರಿಂದ ಟಿ20 ವಿಶ್ವಕಪ್ ಗೆಲ್ಲುವ ಭಾರತದ ಬರ ಅವ್ಯಾಹತವಾಗಿ ಮುಂದುವರಿದಿದೆ. ಇದರಿಂದ ತಂಡದ ಹಲವು ಹಿರಿಯ ಆಟಗಾರರ ಮೇಲೆ ಪ್ರಶ್ನೆಗಳು ಎದ್ದಿದ್ದು, ಈ ಸೋಲಿನ ಬಳಿಕ ಟೀಂ ಇಂಡಿಯಾದ ಕೆಲ ಆಟಗಾರರು ಟಿ20ಗೆ ವಿದಾಯ ಹೇಳಬಹುದು ಎಂಬ ಊಹಾಪೋಹವಿದೆ.

ಈ ಸೋಲಿನ ನಂತರ ಕೆಲವು ಆಟಗಾರರ ನಿವೃತ್ತಿ ಸುದ್ದಿ ಬರಬಹುದು ಎಂದು ಭಾರತ ತಂಡದ ಮಾಜಿ ನಾಯಕ ಸುನೀವ್ ಗವಾಸ್ಕರ್ ಕೂಡ ಒಪ್ಪಿಕೊಂಡಿದ್ದಾರೆ. ಪಂದ್ಯದ ನಂತರ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಗವಾಸ್ಕರ್, “ಈ ಸೋಲಿನ ನಂತರ, ಕೆಲವು ನಿವೃತ್ತಿ ಸುದ್ದಿಗಳು ಸಹ ಹೊರಬರಬಹುದು” ಎಂದು ಹೇಳಿದರು.

ರಾಹುಲ್ ದ್ರಾವಿಡ್ ಕೂಡ ಇದ್ದನ್ನೇ ಹೇಳಿದ್ದಾರೆ

ಸೆಮಿಫೈನಲ್ ಪಂದ್ಯದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ ಹಿರಿಯ ಆಟಗಾರರ ಭವಿಷ್ಯದ ಬಗ್ಗೆಯೂ ಪ್ರಶ್ನಿಸಲಾಯಿತು. ಆದರೆ, ರಾಹುಲ್ ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್, ಮುಂದಿನ ಟಿ20 ವಿಶ್ವಕಪ್‌ಗೆ ಸಾಕಷ್ಟು ಸಮಯವಿದ್ದು, ಹಿರಿಯ ಆಟಗಾರರ ಭವಿಷ್ಯದ ಬಗ್ಗೆ ತೀರಾ ಮುಂಚೆಯೇ ಹೇಳುವುದು ಕಷ್ಟ ಎಂದರು.

ಯಾವ ಆಟಗಾರರು ನಿವೃತ್ತಿ ಹೊಂದಬಹುದು

ಈ ವಿಶ್ವಕಪ್ ಬಳಿಕ ಮತ್ತೆ ಕೆಲ ಆಟಗಾರರು ಭಾರತದ ಟಿ20 ತಂಡದಲ್ಲಿ ಕಾಣಿಸಿಕೊಳ್ಳದಿರುವುದು ಖಚಿತವಾಗಿದೆ. ಹೀಗಾಗಿ ಟಿ20 ಕ್ರಿಕೆಟ್​ನಿಂದ ನಿವೃತ್ತಿ ಹೊಂದಬಹುದಾದ ಆಟಗಾರರು ಯಾರು ಎಂಬುದರ ಬಗ್ಗೆಗಿನ ಒಂದಿಷ್ಟು ಮಾಹಿತಿ ಇಲ್ಲಿದೆ.

2019ರ ಏಕದಿನ ವಿಶ್ವಕಪ್ ಬಳಿಕ ದಿನೇಶ್ ಕಾರ್ತಿಕ್ ತಂಡದಿಂದ ಹೊರಗಿದ್ದರು. ಆದರೆ ಅವರು ಐಪಿಎಲ್-2022 ರಲ್ಲಿ ಬಲವಾದ ಪ್ರದರ್ಶನದೊಂದಿಗೆ ತಂಡಕ್ಕೆ ಮರಳಿದ್ದರು. ಇದಕ್ಕೆ ಟೀಮ್ ಇಂಡಿಯಾದಲ್ಲಿ ಯಾವುದೇ ಫಿನಿಶರ್ ಇಲ್ಲದಿರುವುದು ಪ್ರಮುಖ ಕಾರಣವಾಗಿತ್ತು. ಆದರೆ ಈಗ ಟೀಂ ಇಂಡಿಯಾದಲ್ಲಿ ಕಾರ್ತಿಕ್ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ. ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಪ್ರವಾಸಕ್ಕೆ ಆಯ್ಕೆಗಾರರು ಪ್ರಕಟಿಸಿದ ತಂಡಗಳಲ್ಲಿ ಕಾರ್ತಿಕ್ ಸ್ಥಾನ ಪಡೆದಿಲ್ಲ. ಅಲ್ಲದೆ ಮುಂದಿನ ಐಸಿಸಿ ಈವೆಂಟ್​ಗಳಿಗೆ ಸಾಕಷ್ಟು ಸಮಯವನ್ನು ಹೊಂದಿರುವುದರಿಂದ ಟೀಮ್ ಇಂಡಿಯಾ ಈಗ ಯುವ ಫಿನಿಶರ್ ಅನ್ನು ಹುಡುಕಲು ಪ್ರಯತ್ನಿಸಲಿದೆ. ಇಂತಹ ಪರಿಸ್ಥಿತಿಯಲ್ಲಿ ಕಾರ್ತಿಕ್ ಅಂತಾರಾಷ್ಟ್ರೀಯ ಟಿ20ಯಿಂದ ನಿವೃತ್ತಿ ಹೊಂದಬಹುದು.

ಈ ವಿಶ್ವಕಪ್ ನಂತರ ಟಿ20 ಅಂತರಾಷ್ಟ್ರೀಯ ಪಂದ್ಯಕ್ಕೆ ವಿದಾಯ ಹೇಳಬಹುದಾದ ಮತ್ತೊಂದು ಹೆಸರು ರವಿಚಂದ್ರನ್ ಅಶ್ವಿನ್. ಅಶ್ವಿನ್ ಸಹ ಸ್ವಲ್ಪ ಸಮಯದವರೆಗೆ ಭಾರತದ ಟೆಸ್ಟ್ ತಂಡದ ಭಾಗವಾಗಿದ್ದರು. ಅದರ ನಂತರ ಅವರು ಟಿ20 ಕ್ರಿಕೆಟ್​ನಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದಾಗ್ಯೂ, ಅವರು ಪರಿಣಾಮಕಾರಿ ಎಂದು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ. ಭಾರತ ಅಶ್ವಿನ್ ಬದಲಿ ಆಟಗಾರನಾಗಿ ಅನೇಕ ಆಟಗಾರರನ್ನು ಈಗಾಗಲೇ ಹೊಂದಿದೆ. ಹೀಗಿರುವಾಗ ಅಶ್ವಿನ್ ಕೂಡ ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೆ ವಿದಾಯ ಹೇಳಿದರೆ ಆಶ್ಚರ್ಯವಿಲ್ಲ.

ರೋಹಿತ್ ಶರ್ಮಾ ಪ್ರಸ್ತುತ ಎಲ್ಲಾ ಮೂರು ಮಾದರಿಗಳಲ್ಲಿ ಭಾರತ ತಂಡದ ನಾಯಕರಾಗಿದ್ದಾರೆ. ಎಲ್ಲಾ ಮೂರು ಸ್ವರೂಪಗಳಲ್ಲಿ ಆಡುವುದು ಮತ್ತು ನಾಯಕತ್ವ ವಹಿಸುವುದು ತುಂಬಾ ಕಷ್ಟ. ಇದರೊಂದಿಗೆ ರೋಹಿತ್ ನಂತರ ಮುಂದಿನ ನಾಯಕನನ್ನು ಸಿದ್ಧಪಡಿಸುವ ಬಗ್ಗೆಯೂ ಟೀಮ್ ಮ್ಯಾನೇಜ್​ಮೆಂಟ್ ಚಿಂತನೆ ನಡೆಸಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಟಿ20 ಮಾದರಿಯನ್ನು ತೊರೆಯುವ ಸಾಧ್ಯತೆ ಹೆಚ್ಚಿದೆ.

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು