IND vs IRE: ಒಂದು ಬದಲಾವಣೆ: ದ್ವಿತೀಯ ಟಿ20ಗೆ ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದ ಟೀಮ್ ಇಂಡಿಯಾ
India PlayingXI 2ND T20 vs IRE: ಮೊದಲ ಪಂದ್ಯಕ್ಕೆ ಕೋಚ್ ವಿವಿಎಸ್ ಲಕ್ಷ್ಮಣ್ ಕೆಲ ಹೊಸ ಪ್ರಯೋಗ ನಡೆಸಿ ಅದರಲ್ಲಿ ಯಶಸ್ವಿಯಾಗಿದ್ದರು. ಇದೀಗ ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯಕ್ಕೆ ಒಂದು ಮುಖ್ಯ ಬದಲಾವಣೆ ನಿರೀಕ್ಷಿಸಲಾಗಿದೆ.
ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ಗಳ ಗೆಲುವು ಸಾಧಿಸಿದ್ದ ಭಾರತ (India vs Ireland) ಇದೀಗ ಎರಡನೇ ಕದನಕ್ಕೆ ಸಜ್ಜಾಗುತ್ತಿದೆ. ಇಂದು ಡಬ್ಲಿನ್ನ ದಿ ವಿಲೇಜ್ನಲ್ಲಿ ದ್ವಿತೀಯ ಟಿ20 ಪಂದ್ಯ ಆಯೋಜಿಸಲಾಗಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಹಾರ್ದಿಕ್ (Hardik Pandya) ಪಡೆ ಈ ಪಂದ್ಯವನ್ನೂ ಗೆದ್ದರೆ ಸರಣಿ ವಶಪಡಿಸಿಕೊಳ್ಳುವ ಜೊತೆ ಕ್ಲೀನ್ಸ್ವೀಪ್ ಮಾಡಿದ ಸಾಧನೆ ಗೈಯಲ್ಲಿದೆ. ಮೊದಲ ಪಂದ್ಯಕ್ಕೆ ಕೋಚ್ ವಿವಿಎಸ್ ಲಕ್ಷ್ಮಣ್ ಕೆಲ ಹೊಸ ಪ್ರಯೋಗ ನಡೆಸಿ ಅದರಲ್ಲಿ ಯಶಸ್ವಿಯಾಗಿದ್ದರು. ಓಪನರ್ ಆಗಿ ಇಶಾನ್ ಕಿಶನ್ ಜೊತೆ ರುತುರಾಜ್ ಬದಲು ಆಲ್ರೌಂಡರ್ ದೀಪಕ್ ಹೂಡ (Deepak Hooda) ಅವರನ್ನು ಕಣಕ್ಕಿಳಿಸಿ ಎದುರಾಳಿಯ ಯೋಜನೆಯನ್ನು ತಲೆಕೆಳಗಾಗಿಸಿದ್ದರು. ಉಮ್ರಾನ್ ಮಲಿಕ್ ಪದಾರ್ಪಣೆ ಮಾಡಿದ್ದರು. ಇದೀಗ ದ್ವಿತೀಯ ಪಂದ್ಯಕ್ಕೆ ಒಂದು ಮುಖ್ಯ ಬದಲಾವಣೆ ನಿರೀಕ್ಷಿಸಲಾಗಿದೆ.
ಐರ್ಲೆಂಡ್ ಟಿ20 ಸರಣಿಗೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಎಲ್ಲ ಪಂದ್ಯಗಳಲ್ಲು ಆರಂಭಿಕರಾಗಿ ಆಡಿದ್ದ ಯುವ ರುತುರಾಜ್ ಗಾಯಕ್ವಾಡ್ ನಿರೀಕ್ಷೆ ಮೂಡಿಸಿಲ್ಲ. ಹೀಗಾಗಿ ಐರ್ಲೆಂಡ್ ಎದುರಿನ ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕಕ್ಕೆ ಜಾರಿದ್ದರು. ಅಲ್ಲದೆ ಗಾಯಕ್ವಾಡ್ ಗಾಯದ ಸಮಸ್ಯೆ ಎದುರಿಸುತ್ತಿದ್ದಾರೆ. ಇವರ ಜಾಗದಲ್ಲಿ ಆಡಿದ ದೀಪಕ್ ಹೂಡ ಸ್ಪೋಟಕ ಬ್ಯಾಟಿಂಗ್ ನಡೆಸಿ ಕೇವಲ 29 ಎಸೆತಗಳಲ್ಲಿ 6 ಫೋರ್ ಮತ್ತು 2 ಸಿಕ್ಸರ್‌ಗಳನ್ನು ಒಳಗೊಂಡ ಅಜೇಯ 47 ರನ್‌ಗಳನ್ನು ಸಿಡಿಸಿದರು.
T20 Cricket Records: ಟಿ20ಕ್ರಿಕೆಟ್ನಲ್ಲಿ ಕಾಂಗರೂಗಳ ದಾಖಲೆ ಮುರಿದ ಭಾರತದ ಹುಲಿಗಳು..!
ಹೀಗಾಗಿ ಎರಡನೇ ಪಂದ್ಯದಲ್ಲೂ ಹೂಡ ಓನರ್ ಆಗಿಯೇ ಆಡುವ ಸಾಧ್ಯತೆ ಹೆಚ್ಚಿದೆ. ಗಾಯದ ಸಮಸ್ಯೆಯಿಂದ ರುತುರಾಜ್ ಚೇತರಿಸದೇ ಇದ್ದರೆ, ಅವರ ಜಾಗದಲ್ಲಿ ಸಂಜು ಸ್ಯಾಮ್ಸನ್ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಲವಾಗಿ ಸೇರಿಕೊಳ್ಳಲಿದ್ದಾರೆ. ಹೀಗೆ ತಂಡದಲ್ಲಿ ಒಂದು ಮುಖ್ಯ ಬದಲಾವಣೆ ನಿರೀಕ್ಷಿಸಲಾಗಿದೆ. ಉಳಿದಂತೆ ತಂಡದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಅನುಮಾನ. ಉಮ್ರಾನ್ ಮಲಿಕ್ ಕಳೆದ ಪಂದ್ಯದಲ್ಲಿ ಕೇವಲ 1 ಓವರ್ ಬೌಲಿಂಗ್ ಮಾಡಿದ್ದರು. ಈ ಬಾರಿ ಸಂಪೂರ್ಣ 4 ಓವರ್ ಮಾಡುವ ನಿರೀಕ್ಷೆಯಿದೆ. ಚಹಲ್ ಹಾಗೂ ಭುವಿ ಮತ್ತೆ ಮಾರಕ ಆಗುವುದರಲ್ಲಿ ಅನುಮಾನವಿಲ್ಲ.
ಇತ್ತ ಐರ್ಲೆಂಡ್ ತಂಡ ಯುವ ಬ್ಯಾಟ್ಸ್‌ಮನ್ 22 ವರ್ಷದ ಹ್ಯಾರಿ ಟೆಕ್ಟರ್ ಅವರನ್ನೇ ಹೆಚ್ಚಾಗಿ ನೆಚ್ಚಿಕೊಂಡಿದೆ. ಇವರಿಗೆ ಪಾಲ್ ಸ್ಟಿರ್ಲಿಂಗ್, ನಾಯಕ ಆಂಡ್ರ್ಯೂ ಬಾಲ್ಬಿರ್ನಿ, ಗ್ಯಾರೆಥ್ ಡೆಲಾನಿ ಸಾಥ್ ನೀಡಬೇಕಿದೆ. ಬೌಲಿಂಗ್ನಲ್ಲೀ ಐರ್ಲೆಂಡ್ ಮಾರಕವಾಗಬೇಕಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಈ ದ್ವಿತೀಯ ಟಿ20 ಪಂದ್ಯ ಡಬ್ಲಿನ್‌ನಲ್ಲಿ ನಡೆಯಲಿದ್ದು, ಪಂದ್ಯ ರಾತ್ರಿ 9 ಗಂಟೆಗೆ ಆರಂಭಗೊಳ್ಳಲಿದೆ. ಇನ್ನು ಈ ಕ್ರೀಡಾಂಗಣದ ಮೊದಲ ಪಂದ್ಯದಂತೆಯೇ ಮೊದಲು ಬೌಲರ್‌ಗಳಿಗೆ ಸಹಕರಿಸಲಿದ್ದು, ಟಾಸ್ ಗೆಲ್ಲುವ ತಂಡದ ನಾಯಕ ಹೆಚ್ಚಾಗಿ ಚೇಸಿಂಗ್ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಈ ಪಂದ್ಯದಲ್ಲಿಯೂ ಮಳೆಯಾಗುವ ಸಾಧ್ಯತೆಯಿದ್ದು, ಪಿಚ್ ತೇವವಾಗುವ ಕಾರಣ ಬೌಲರ್‌ಗಳಿಗೆ ಇದು ಅನುಕೂಲಕರವಾಗಲಿದೆ. ಆದರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿರಲಿದೆ. ಈ ಪಂದ್ಯದ ನೇರ ಪ್ರಸಾರವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ನಲ್ಲಿ ಹಾಗೂ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.
ಭಾರತ ಸಂಭಾವ್ಯ ಪ್ಲೇಯಿಂಗ್ XI: ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಹಲ್, ಉಮ್ರಾನ್ ಮಲಿಕ್.
IND vs ENG: ಭಾರತ ವಿರುದ್ಧದ ಅಂತಿಮ ಟೆಸ್ಟ್ಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ! ಯಾರಿಗೆಲ್ಲ ಚಾನ್ಸ್?
Published On - 7:48 am, Tue, 28 June 22