IND vs ENG: ಅಭ್ಯಾಸ ಶುರು ಮಾಡಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ

India vs England Test: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೇಲೇರಬಹುದು, ಸದ್ಯ WTC ಪಾಯಿಂಟ್ಸ್ ಟೇಬಲ್​ನಲ್ಲಿ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ದ್ವಿತೀಯ ಸ್ಥಾನದಲ್ಲಿದೆ.

IND vs ENG: ಅಭ್ಯಾಸ ಶುರು ಮಾಡಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
Rahul Dravid-Rohit Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 23, 2024 | 2:20 PM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ಜನವರಿ 25 ರಿಂದ ಶುರುವಾಗಲಿರುವ ಐದು ಪಂದ್ಯಗಳ ಸರಣಿಯ ಮೊದಲು ಮ್ಯಾಚ್​​ಗೆ ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಹೈದರಾಬಾದ್​ಗೆ ಬಂದಿಳಿದಿದ್ದು, ಇದರ ಬೆನ್ನಲ್ಲೇ ಅಭ್ಯಾಸವನ್ನೂ ಕೂಡ ಶುರು ಮಾಡಿದ್ದಾರೆ.

ಸೋಮವಾರ ಬೆಳಿಗ್ಗೆ 9.32 ಕ್ಕೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂಗೆ ಟೀಮ್ ಇಂಡಿಯಾ ಆಟಗಾರರು ಆಗಮಿಸಿದರು. ಅಲ್ಲದೆ 9.51 ರಿಂದ ಅಭ್ಯಾಸವನ್ನು ಶುರು ಮಾಡಿದ್ದಾರೆ. ಮೊದಲಿಗೆ ವ್ಯಾಯಾಮ ಆರಂಭಿಸಿದ ಭಾರತೀಯ ಆಟಗಾರರು 11 ಗಂಟೆಯ ಬಳಿಕ ಬ್ಯಾಟಿಂಗ್​ ಕಸರತ್ತಿಗೆ ಇಳಿದರು. ಹಾಗೆಯೇ ಮತ್ತೊಂದೆಡೆ ಬೌಲರ್​ಗಳು ಕೂಡ ನೆಟ್ಸ್​ನಲ್ಲಿ ಸಾಕಷ್ಟು ಬೆವರಿಳಿಸುವ ಮೂಲಕ ಆಂಗ್ಲ ಪಡೆ ವಿರುದ್ಧ ರಣತಂತ್ರ ರೂಪಿಸುವಲ್ಲಿ ನಿರತರಾದರು. ಈ ಅಭ್ಯಾಸದ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಇಂಗ್ಲೆಂಡ್ ಪಾಲಿಗೆ ಮಹತ್ವದ ಸರಣಿ:

ಈ ಸರಣಿಯು ಇಂಗ್ಲೆಂಡ್ ತಂಡದ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಸರಣಿಯಲ್ಲಿ ಆಡಲಾಗುವ 5 ಪಂದ್ಯಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಭಾಗವಾಗಿದೆ. ಅತ್ತ ಇಂಗ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಪಾಯಿಂಟ್​ ಟೇಬಲ್​ನಲ್ಲಿ 7ನೇ ಸ್ಥಾನದಲ್ಲಿದೆ. ಈ ಸರಣಿಯಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೇಲೇರಬಹುದು. ಹೀಗಾಗಿಯೇ ಭಾರತಕ್ಕಿಂತ ಇಂಗ್ಲೆಂಡ್ ಪಾಲಿಗೆ ಈ ಸರಣಿಯು ತುಂಬಾ ಮಹತ್ವದ್ದಾಗಿ ಪರಿಣಮಿಸಿದೆ.

ಸರಣಿಯ ಸಂಪೂರ್ಣ ವೇಳಾಪಟ್ಟಿ:

ಭಾರತ ಮತ್ತು ಇಂಗ್ಲೆಂಡ್ ನಡುವಿನ ಪ್ರತಿಷ್ಠಿತ ಟೆಸ್ಟ್ ಸರಣಿಯು ಗುರುವಾರದಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದರೆ, 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಆಡಲಾಗುತ್ತದೆ. ಹಾಗೆಯೇ ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇದನ್ನೂ ಓದಿ: Josh Brown: ಜೋಶ್ ಅಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  • ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
  • ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
  • ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
  • ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
  • ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

Published On - 2:17 pm, Tue, 23 January 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ