AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಲೇಡ್ ತಲುಪಿದ ಟೀಂ ಇಂಡಿಯಾ; 13 ವರ್ಷದ ಹಳೆಯ ಸೇಡಿನ ಲೆಕ್ಕ ಚುಕ್ತಾ ಮಾಡುತ್ತಾ ರೋಹಿತ್ ಪಡೆ?

T20 World Cup: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಏಳು ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ಕೇವಲ 150 ರನ್ ಗಳಿಸಲಷ್ಟೇ ಶಕ್ತವಾಯಿತು.

ಅಡಿಲೇಡ್ ತಲುಪಿದ ಟೀಂ ಇಂಡಿಯಾ; 13 ವರ್ಷದ ಹಳೆಯ ಸೇಡಿನ ಲೆಕ್ಕ ಚುಕ್ತಾ ಮಾಡುತ್ತಾ ರೋಹಿತ್ ಪಡೆ?
Image Credit source: insidesport
TV9 Web
| Edited By: |

Updated on:Nov 07, 2022 | 7:07 PM

Share

ಸೂಪರ್ 12 ಸುತ್ತಿನಲ್ಲಿ ಬೊಂಬಾಟ್ ಆಟ ಪ್ರದರ್ಶಿಸಿರುವ ಟೀಂ ಇಂಡಿಯಾ ಇದೀಗ ಟಿ20 ವಿಶ್ವಕಪ್​ನಲ್ಲಿ (T20 World Cup) ಸೆಮಿಫೈನಲ್‌ಗೆ ಪ್ರವೇಶಿಸಿದೆ. ಈ ಸೆಮಿಫೈನಲ್‌ನಲ್ಲಿ ರೋಹಿತ್ ಶರ್ಮಾ ತಂಡ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ವಿರಾಟ್ ಕೊಹ್ಲಿ (Virat Kohli) ಅವರ ನೆಚ್ಚಿನ ಮೈದಾನಗಳಲ್ಲಿ ಒಂದಾದ ಅಡಿಲೇಡ್ ಓವಲ್‌ನಲ್ಲಿ ಈ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕಾಗಿ ಭಾರತ ತಂಡ ಅಡಿಲೇಡ್ ತಲುಪಿದೆ. ಈ ಮೂಲಕ ಇಂಗ್ಲೆಂಡ್‌ ವಿರುದ್ಧ 13 ವರ್ಷಗಳ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಪ್ರಯತ್ನದೊಂದಿಗೆ ಟೀಂ ಇಂಡಿಯಾ (Indian cricket team) ಅಖಾಡಕ್ಕಿಳಿಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್‌ನ ಈ ಪಂದ್ಯವು ನವೆಂಬರ್ 10 ರಂದು ಅಂದರೆ ಗುರುವಾರ ನಡೆಯಲಿದೆ. ಈ ಮೈದಾನದಲ್ಲಿ ಭಾರತ, ಬಾಂಗ್ಲಾದೇಶದ ವಿರುದ್ಧ ಪಂದ್ಯವನ್ನು ಆಡಿತ್ತು. ಈ ಪಂದ್ಯದಲ್ಲಿ ಕೊಹ್ಲಿ 64 ರನ್‌ಗಳ ಇನಿಂಗ್ಸ್‌ ಆಡುವ ಮೂಲಕ ಟೀಂ ಇಂಡಿಯಾಕ್ಕೆ ಅದ್ಭುತ ಗೆಲುವು ತಂದುಕೊಟ್ಟಿದ್ದರು. ಇದೀಗ ಟೀಂ ಇಂಡಿಯಾ ಗ್ರೂಪ್-1ರಲ್ಲಿ ಅಗ್ರಸ್ಥಾನದಲ್ಲಿ ಸೆಮಿಫೈನಲ್ ತಲುಪಿದ್ದು, ಇಂಗ್ಲೆಂಡ್ ತಂಡ ಗ್ರೂಪ್-2ರಲ್ಲಿ ಎರಡನೇ ಸ್ಥಾನದಲ್ಲಿದೆ. ಇವೆರಡರ ಹೊರತಾಗಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಕೂಡ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿವೆ.

13 ವರ್ಷಗಳ ಹಳೆಯ ಸೇಡು

ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಕಡಿಮೆ ಪಂದ್ಯಗಳು ನಡೆದಿವೆ. ಈ ಎರಡು ತಂಡಗಳ ನಡುವೆ ಎಲ್ಲರಿಗೂ ನೆನಪಾಗುವಂತಹ ಒಂದೇ ಒಂದು ಪಂದ್ಯವಿದ್ದು, ಆ ಪಂದ್ಯದ ರೋಚಕತೆಯನ್ನು ಇದುವರೆಗೂ ಸಹ ಭಾರತೀಯರು ಮರೆತಿಲ್ಲ. ವಾಸ್ತವವಾಗಿ 2007 ರ ಮೊದಲ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಯುವರಾಜ್ ಸಿಂಗ್ ಸ್ಟುವರ್ಟ್ ಬ್ರಾಡ್ ಓವರ್​ನಲ್ಲಿ ಸತತ ಆರು ಸಿಕ್ಸರ್‌ಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದ್ದರು. ಜೊತೆಗೆ ಆ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಬೀಗಿತ್ತು. ಇದಾದ ಬಳಿಕ 2009ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಈ ಎರಡೂ ತಂಡಗಳು ಗ್ರೂಪ್ ಹಂತದಲ್ಲಿ  ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಭಾರತ ಸೋಲನುಭವಿಸಬೇಕಾಯಿತು.

ಆ ಪಂದ್ಯದಲ್ಲಿ ಇಂಗ್ಲೆಂಡ್ ಮೂರು ರನ್‌ಗಳಿಂದ ಭಾರತವನ್ನು ಸೋಲಿಸಿತ್ತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಏಳು ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ಕೇವಲ 150 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಈ ಬಾರಿ ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.

ಅಡಿಲೇಡ್‌ನಲ್ಲಿ ಕೊಹ್ಲಿ ಅಬ್ಬರ

ಭಾರತ ಮತ್ತು ಇಂಗ್ಲೆಂಡ್ ನಡುವೆ ಪಂದ್ಯ ನಡೆಯಲಿರುವ ಮೈದಾನದಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟ್ ಇದುವರೆಗೆ ಸಖತ್ ಸದ್ದು ಮಾಡಿದೆ. ಅಂಕಿಅಂಶಗಳ ಪ್ರಕಾರ ಇದು ಕೊಹ್ಲಿಯ ನೆಚ್ಚಿನ ಮೈದಾನಗಳಲ್ಲಿ ಒಂದಾಗಿದೆ. ಕೊಹ್ಲಿ ಇಲ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ಒಟ್ಟು 14 ಇನ್ನಿಂಗ್ಸ್ ಆಡಿದ್ದು, 75.58 ಸರಾಸರಿಯಲ್ಲಿ 907 ರನ್ ಗಳಿಸಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್​ನಿಂದ ಮೂರು ಶತಕಗಳು ಹೊರಬಂದಿದ್ದರೆ, ನಾಲ್ಕು ಅರ್ಧ ಶತಕಗಳು ಕೂಡ ದಾಖಲಾಗಿವೆ. ಹಾಗೆಯೇ ಏಕದಿನ ಕ್ರಿಕೆಟ್​ನಲ್ಲಿ ಇಲ್ಲಿ ಆಡಿರುವ ಒಟ್ಟು ನಾಲ್ಕು ಪಂದ್ಯಗಳಲ್ಲಿ ಎರಡು ಅರ್ಧ ಶತಕಗಳನ್ನು ಕೊಹ್ಲಿ ಬಾರಿಸಿದ್ದಾರೆ. ಅಲ್ಲದೆ ಟಿ20ಮಾದರಿಯಲ್ಲಿ ಬಾಂಗ್ಲಾದೇಶ ವಿರುದ್ಧ ಆಡಿದ ಪಂದ್ಯದಲ್ಲಿ ವಿರಾಟ್ ಔಟಾಗದೆ 64 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು. ಇದಲ್ಲದೇ 2016ರಂದು ಈ ಮೈದಾನದಲ್ಲಿ ನಡೆದ ಟಿ20ಪಂದ್ಯದಲ್ಲಿ ಕೊಹ್ಲಿ 90 ರನ್‌ಗಳ ಇನ್ನಿಂಗ್ಸ್‌ ಕೂಡ ಆಡಿದ್ದರು.

Published On - 5:49 pm, Mon, 7 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ