AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ 20 ದಿನಗಳಲ್ಲಿ 14 ಪಂದ್ಯಗಳು..!

Team India: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್​ಗಾಗಿ 2 ಅಭ್ಯಾಸ ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ. ಇದರ ಬೆನ್ನಲ್ಲೇ ಏಕದಿನ ವಿಶ್ವಕಪ್​ ಕೂಡ ಶುರುವಾಗುತ್ತಿದೆ. ಹೀಗಾಗಿ ಮುಂದಿನ ಮೂರು ವಾರಗಳಲ್ಲಿ ಭಾರತೀಯ ಕ್ರಿಕೆಟ್​ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಸಿಗುವುದು ಖಚಿತ ಎನ್ನಬಹುದು.

ಟೀಮ್ ಇಂಡಿಯಾಗೆ 20 ದಿನಗಳಲ್ಲಿ 14 ಪಂದ್ಯಗಳು..!
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 19, 2023 | 2:36 PM

ಒಂದೆಡೆ ಏಕದಿನ ವಿಶ್ವಕಪ್​ಗೆ ಕೌಂಟ್ ಡೌನ್ ಶುರುವಾಗಿದೆ. ಮತ್ತೊಂದೆಡೆ ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಗೆ ದಿನಗಣನೆ ಆರಂಭವಾಗಿದೆ. ಅಂದರೆ ಸೆಪ್ಟೆಂಬರ್ 22 ರಿಂದ ಟೀಮ್ ಇಂಡಿಯಾ ಸತತ ಪಂದ್ಯಗಳನ್ನಾಡಲಿರುವುದು ಖಚಿತ. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿ ಮುಕ್ತಾಯದೊಂದಿಗೆ ಏಕದಿನ ವಿಶ್ವಕಪ್​ ತಯಾರಿಗಳು ಶುರುವಾಗಲಿದೆ. ಇದರಿಂದ ಟೀಮ್ ಇಂಡಿಯಾ ಮುಂದಿನ 20 ದಿನಗಳಲ್ಲಿ ಬರೋಬ್ಬರಿ 14 ಪಂದ್ಯಗಳನ್ನಾಡಬೇಕಿದೆ.

ಇಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್​ಗಾಗಿ 2 ಅಭ್ಯಾಸ ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ. ಇದರ ಬೆನ್ನಲ್ಲೇ ಏಕದಿನ ವಿಶ್ವಕಪ್​ ಕೂಡ ಶುರುವಾಗುತ್ತಿದೆ. ಹೀಗಾಗಿ ಮುಂದಿನ ಮೂರು ವಾರಗಳಲ್ಲಿ ಭಾರತೀಯ ಕ್ರಿಕೆಟ್​ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಸಿಗುವುದು ಖಚಿತ ಎನ್ನಬಹುದು. ಈ ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳನಂತಿದೆ…

ಭಾರತ vs ಆಸ್ಟ್ರೇಲಿಯಾ ಸರಣಿ ವೇಳಾಪಟ್ಟಿ:

  1. ಸೆಪ್ಟೆಂಬರ್ 22: ಮೊದಲ ಏಕದಿನ ಪಂದ್ಯ- ಮೊಹಾಲಿ
  2. ಸೆಪ್ಟೆಂಬರ್ 24: ಎರಡನೇ ಏಕದಿನ ಪಂದ್ಯ- ಇಂದೋರ್
  3. ಸೆಪ್ಟೆಂಬರ್ 27: ಮೂರನೇ ಏಕದಿನ ಪಂದ್ಯ- ರಾಜ್​ಕೋಟ್

ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ:

  1. ಸೆಪ್ಟೆಂಬರ್ 30: ಭಾರತ vs ಇಂಗ್ಲೆಂಡ್- ಗುವಾಹಟಿ
  2. ಅಕ್ಟೋಬರ್ 3: ಭಾರತ vs ನೆದರ್​ಲೆಂಡ್ಸ್​- ತಿರುವನಂತಪುರ

ಭಾರತ ತಂಡದ ಏಕದಿನ ವಿಶ್ವಕಪ್​ ವೇಳಾಪಟ್ಟಿ:

  1. ಅಕ್ಟೋಬರ್ 8: ಭಾರತ vs ಆಸ್ಟ್ರೇಲಿಯಾ- ಚೆನ್ನೈ
  2. ಅಕ್ಟೋಬರ್ 11: ಭಾರತ vs ಅಫ್ಘಾನಿಸ್ತಾನ್- ದೆಹಲಿ
  3. ಅಕ್ಟೋಬರ್ 14: ಭಾರತ vs ಪಾಕಿಸ್ತಾನ್- ಅಹಮದಾಬಾದ್
  4. ಅಕ್ಟೋಬರ್ 19: ಭಾರತ vs ಬಾಂಗ್ಲಾದೇಶ್- ಪುಣೆ
  5. ಅಕ್ಟೋಬರ್ 22: ಭಾರತ vs ನ್ಯೂಝಿಲೆಂಡ್- ಧರ್ಮಶಾಲಾ
  6. ಅಕ್ಟೋಬರ್ 29: ಭಾರತ vs ಇಂಗ್ಲೆಂಡ್- ಲಕ್ನೋ
  7. ನವೆಂಬರ್ 2: ಭಾರತ vs ಶ್ರೀಲಂಕಾ- ಮುಂಬೈ
  8. ನವೆಂಬರ್ 5: ಭಾರತ vs ಸೌತ್ ಆಫ್ರಿಕಾ- ಕೊಲ್ಕತ್ತಾ
  9. ನವೆಂಬರ್ 12: ಭಾರತ vs ನೆದರ್​ಲೆಂಡ್ಸ್​- ಬೆಂಗಳೂರು.

ಈ ಪಂದ್ಯಗಳಿಗಾಗಿ ಆಯ್ಕೆಯಾಗಿರುವ ಟೀಮ್ ಇಂಡಿಯಾ:

ಆಸ್ಟ್ರೇಲಿಯಾ ವಿರುದ್ಧ ಮೊದಲ ಎರಡು ಏಕದಿನ ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್  ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ,  ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಅಕ್ಷರ್ ಪಟೇಲ್ (ಫಿಟ್​ನೆಸ್ ಸಾಧಿಸಿದರೆ).

ಏಕದಿನ ವಿಶ್ವಕಪ್​ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.