ಒಂದೆಡೆ ಏಕದಿನ ವಿಶ್ವಕಪ್ಗೆ ಕೌಂಟ್ ಡೌನ್ ಶುರುವಾಗಿದೆ. ಮತ್ತೊಂದೆಡೆ ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಗೆ ದಿನಗಣನೆ ಆರಂಭವಾಗಿದೆ. ಅಂದರೆ ಸೆಪ್ಟೆಂಬರ್ 22 ರಿಂದ ಟೀಮ್ ಇಂಡಿಯಾ ಸತತ ಪಂದ್ಯಗಳನ್ನಾಡಲಿರುವುದು ಖಚಿತ. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿ ಮುಕ್ತಾಯದೊಂದಿಗೆ ಏಕದಿನ ವಿಶ್ವಕಪ್ ತಯಾರಿಗಳು ಶುರುವಾಗಲಿದೆ. ಇದರಿಂದ ಟೀಮ್ ಇಂಡಿಯಾ ಮುಂದಿನ 20 ದಿನಗಳಲ್ಲಿ ಬರೋಬ್ಬರಿ 14 ಪಂದ್ಯಗಳನ್ನಾಡಬೇಕಿದೆ.
ಇಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ಗಾಗಿ 2 ಅಭ್ಯಾಸ ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ. ಇದರ ಬೆನ್ನಲ್ಲೇ ಏಕದಿನ ವಿಶ್ವಕಪ್ ಕೂಡ ಶುರುವಾಗುತ್ತಿದೆ. ಹೀಗಾಗಿ ಮುಂದಿನ ಮೂರು ವಾರಗಳಲ್ಲಿ ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಸಿಗುವುದು ಖಚಿತ ಎನ್ನಬಹುದು. ಈ ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳನಂತಿದೆ…
ಆಸ್ಟ್ರೇಲಿಯಾ ವಿರುದ್ಧ ಮೊದಲ ಎರಡು ಏಕದಿನ ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಅಕ್ಷರ್ ಪಟೇಲ್ (ಫಿಟ್ನೆಸ್ ಸಾಧಿಸಿದರೆ).
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.