ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆರ್ಸಿಬಿ ಪರ ಆಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ
KS Bharat Retires from International Cricket at 32: ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೆ.ಎಸ್. ಭರತ್ 32ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸಣ್ಣ ಟೆಸ್ಟ್ ವೃತ್ತಿಜೀವನದಲ್ಲಿ, ಅವರು ಭಾರತದ ಪರ 7 ಪಂದ್ಯಗಳನ್ನು ಆಡಿದ್ದು, ವಿಕೆಟ್ ಕೀಪಿಂಗ್‌ನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೇರಿದಂತೆ ತಂಡದ ಸದಸ್ಯರು, ತರಬೇತುದಾರರು ಮತ್ತು ಬಿಸಿಸಿಐಗೆ ಕೃತಜ್ಞತೆ ಸಲ್ಲಿಸಿ ಹೆಮ್ಮೆಯಿಂದ ತಮ್ಮ ವಿದಾಯ ಹೇಳಿದ್ದಾರೆ.

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಇದೇ ಜೂನ್ 6 ರಿಂದ ಆರಂಭವಾಗಲಿದೆ. ಇದಕ್ಕಾಗಿ ಉಭಯ ತಂಡಗಳು ಕೂಡ ತಯಾರಿ ನಡೆಸುತ್ತಿವೆ. ಈ ನಡುವೆ ಟೀಂ ಇಂಡಿಯಾ (Team India) ಪರ ಟೆಸ್ಟ್ ಪಂದ್ಯವನ್ನಾಡಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಶ್ರೀಕರ್ ಭರತ್ (KS Bharat) ಕೇವಲ 32 ನೇ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಆಂಧ್ರಪ್ರದೇಶ ಪರ ದೇಶಿ ಕ್ರಿಕೆಟ್ ಆಡುತ್ತಿದ್ದ ಭರತ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಹೆಚ್ಚು ಕಾಲ ಇರದಿದ್ದರೂ, ಟೆಸ್ಟ್ ಕ್ರಿಕೆಟ್‌ನಲ್ಲಿ ವಿಕೆಟ್ ಕೀಪಿಂಗ್‌ನಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ್ದರು. 2014 ರಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಪರ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದ ಭರತ್ಗೆ, ಅಂದಿನಿಂದ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿರಲಿಲ್ಲ.
ನಿವೃತ್ತಿ ಘೋಷಿಸಿದ ಭರತ್
ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ನಿವೃತ್ತಿ ಘೋಷಿಸಿರುವ ಕೆಎಸ್ ಭರತ್, ಭಾರತದ ಇಬ್ಬರು ಶ್ರೇಷ್ಠ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಇಬ್ಬರು ದಂತಕಥೆಗಳ ನಾಯಕತ್ವದಲ್ಲಿ ಆಡುವುದು ಮತ್ತು ಅವರಿಂದ ಕಲಿಯುವುದು ನನ್ನ ವೃತ್ತಿಜೀವನದ ಅತ್ಯುತ್ತಮ ಅನುಭವವಾಗಿತ್ತು. ಡ್ರೆಸ್ಸಿಂಗ್ ಕೋಣೆಯಲ್ಲಿ ಈ ಹಿರಿಯ ಆಟಗಾರರಿಂದ ಪಡೆದ ಬೆಂಬಲ ಮತ್ತು ಮಾರ್ಗದರ್ಶನ ಯಾವಾಗಲೂ ಸ್ಮರಣೀಯವಾಗಿರುತ್ತದೆ.
ನಾನು ಹೆಮ್ಮೆಯಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತೇನೆ. ನನ್ನ ದೇಶಕ್ಕಾಗಿ ಆಡುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವವಾಗಿದೆ. ಈ ಪ್ರಯಾಣಕ್ಕೆ ಅಪಾರ ತಾಳ್ಮೆ ಮತ್ತು ಶಕ್ತಿಯ ಅಗತ್ಯವಿತ್ತು, ಆದರೆ ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸುವುದು ಮತ್ತಷ್ಟು ವಿಶಿಷ್ಟವಾಗಿದೆ. ಬಿಸಿಸಿಐ, ಮತ್ತು ನನ್ನ ವೃತ್ತಿಜೀವನದುದ್ದಕ್ಕೂ ನನಗೆ ತರಬೇತಿ ನೀಡಿದ ಎಲ್ಲಾ ತರಬೇತುದಾರರು ಮತ್ತು ಆಡಳಿತ ಮಂಡಳಿಗೆ ಧನ್ಯವಾದಗಳು, ಇವರೆಲ್ಲರು ನನ್ನನ್ನು ಬೇಷರತ್ತಾಗಿ ಬೆಂಬಲಿಸಿದರು. ನನ್ನ ಎಲ್ಲಾ ತಂಡದ ಸದಸ್ಯರಿಗೆ, ನಾವು ಒಟ್ಟಿಗೆ ಹಂಚಿಕೊಂಡ ಎಲ್ಲಾ ಕ್ಷಣಗಳು ಮತ್ತು ಸಾಧನೆಗಳಿಗಾಗಿ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಹೇಳುತ್ತೇನೆ. ನೀವೆಲ್ಲರೂ ಇಲ್ಲದೆ, ನನ್ನ ಕನಸನ್ನು ನನಸಾಗಿಸಲು ಮತ್ತು ಇಷ್ಟು ವರ್ಷಗಳ ಕಾಲ ಈ ಆಟವನ್ನು ಆಡಲು ನನಗೆ ಸಾಧ್ಯವಾಗುತ್ತಿರಲಿಲ್ಲ’ ಎಂದಿದ್ದಾರೆ.
View this post on Instagram
ಭರತ್ ಅಂತರರಾಷ್ಟ್ರೀಯ ವೃತ್ತಿಜೀವನ
ಶ್ರೀಕರ್ ಭರತ್ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಟೀಂ ಇಂಡಿಯಾ ಪರ ಒಟ್ಟು 7 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ, ಅವರು 20.09 ಸರಾಸರಿಯಲ್ಲಿ 221 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಅಥವಾ ಅರ್ಧಶತಕ ಸೇರಿಲ್ಲದಿದ್ದರೂ, ಶ್ರೀಕರ್ ಭರತ್ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದರು. ಇದರಿಂದಾಗಿ ಅವರಿಗೆ 2023 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಡುವ ಅವಕಾಶವೂ ಸಿಕ್ಕಿತ್ತು. ಇನ್ನು ಭರತ್ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (2021), ದೆಹಲಿ ಕ್ಯಾಪಿಟಲ್ಸ್ (2022), ಗುಜರಾತ್ ಟೈಟಾನ್ಸ್ (2023), ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (2024) ಪರವೂ ಆಡಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:03 pm, Thu, 4 June 26




