AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2026: ಏಷ್ಯಾಕಪ್​ಗೆ ಭಾರತ ಮಹಿಳಾ ತಂಡ ಪ್ರಕಟ; ಚೇತರಿಸಿಕೊಳ್ಳದ ಶ್ರೇಯಾಂಕ ಪಾಟೀಲ್

India Women's Asia Cup 2026 Squad: 2026ರ ಮಹಿಳಾ ಏಷ್ಯಾಕಪ್‌ಗಾಗಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಏಷ್ಯನ್ ಕ್ರೀಡಾಕೂಟಕ್ಕೆ ಆಯ್ಕೆಯಾದ ತಂಡವನ್ನೇ ಉಳಿಸಿಕೊಂಡಿದ್ದರೂ, ಗಾಯದಿಂದ ಚೇತರಿಸಿಕೊಳ್ಳದ ಕನ್ನಡತಿ ಶ್ರೇಯಾಂಕ ಪಾಟೀಲ್ ಬದಲಿಗೆ ಲೆಗ್-ಸ್ಪಿನ್ ಆಲ್‌ರೌಂಡರ್ ಪ್ರೇಮಾ ರಾವತ್‌ಗೆ ಸ್ಥಾನ ನೀಡಲಾಗಿದೆ. ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಏಷ್ಯಾಕಪ್ ನಡೆಯಲಿದ್ದು, ನಂತರ ಏಷ್ಯನ್ ಕ್ರೀಡಾಕೂಟ ಇರಲಿದೆ.

Asia Cup 2026: ಏಷ್ಯಾಕಪ್​ಗೆ ಭಾರತ ಮಹಿಳಾ ತಂಡ ಪ್ರಕಟ; ಚೇತರಿಸಿಕೊಳ್ಳದ ಶ್ರೇಯಾಂಕ ಪಾಟೀಲ್
India Team
ಪೃಥ್ವಿಶಂಕರ
|

Updated on: Aug 02, 2026 | 10:06 PM

Share

2026 ರ ಮಹಿಳಾ ಏಷ್ಯಾಕಪ್‌ (Women’s Asia Cup 2026 ) ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿದ್ದು, ಈ ಪಂದ್ಯಾವಳಿಗಾಗಿ ಬಿಸಿಸಿಐ(BCCI), ಭಾರತೀಯ ಮಹಿಳಾ ತಂಡವನ್ನು ಪ್ರಕಟಿಸಿದೆ. ಮುಂದಿನ ತಿಂಗಳು ನಡೆಯಲಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಆಡಲಿರುವ ತಂಡವನ್ನೇ ಆಯ್ಕೆದಾರರು ಈ ಪಂದ್ಯಾವಳಿಗೂ ಆಯ್ಕೆ ಮಾಡಿದ್ದಾರೆ. ಆದರೆ ಟಿ20 ವಿಶ್ವಕಪ್ ಸಮಯದಲ್ಲಿ ಕಾಲಿಗೆ ಗಾಯ ಮಾಡಿಕೊಂಡು ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದ ಕನ್ನಡತಿ ಶ್ರೇಯಾಂಕ ಪಾಟೀಲ್ ಇನ್ನು ಚೇತರಿಸಿಕೊಳ್ಳದ ಕಾರಣ ಅವರನ್ನು ಏಷ್ಯಾಕಪ್​ನಿಂದಲೂ ಹೊರಗಿಡಲಾಗಿದೆ. ಹೀಗಾಗಿ ಅವರ ಬದಲಿಗೆ ಲೆಗ್-ಸ್ಪಿನ್ ಆಲ್‌ರೌಂಡರ್ ಪ್ರೇಮಾ ರಾವತ್ ಅವರನ್ನು ಆಯ್ಕೆ ಮಾಡಲಾಗಿದೆ.

ಏಷ್ಯಾಕಪ್​ನಿಂದ ಶ್ರೇಯಾಂಕ ಪಾಟೀಲ್ ಔಟ್

ವಾಸ್ತವವಾಗಿ ಜೂನ್ 30 ರಂದು ಏಷ್ಯನ್ ಕ್ರೀಡಾಕೂಟಕ್ಕೆ ಭಾರತ ಮಹಿಳಾ ತಂಡವನ್ನು ಘೋಷಿಸಿದಾಗ, ಶ್ರೇಯಾಂಕಾ ಪಾಟೀಲ್ ಅವರನ್ನು ಸಹ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಅವರು ಆಡುವುದು ಅವರ ಫಿಟ್ನೆಸ್ ಮೇಲೆ ಅವಲಂಬಿತವಾಗಿರಲಿದೆ ಎಂಬ ಮಾಹಿತಿಯನ್ನು ಆಗಲೇ ನೀಡಲಾಗಿತ್ತು. ಆದರೆ ಶ್ರೇಯಾಂಕ ಗುಣಮುಖರಾಗದ ಕಾರಣ ಪ್ರೇಮಾ ರಾವತ್​ಗೆ ಅವಕಾಶ ನೀಡಲಾಗಿದೆ.

ಟಿ20 ವಿಶ್ವಕಪ್ ಸಮಯದಲ್ಲಿ ಶ್ರೇಯಾಂಕ ಪಾಟೀಲ್ ಗಾಯಗೊಂಡು ಪಂದ್ಯಾವಳಿಯಿಂದ ಹೊರಬಿದ್ದಾಗ ಪ್ರೇಮಾ ರಾವತ್ ಅವರನ್ನು ಬದಲಿ ಆಟಗಾರ್ತಿಯಾಗಿ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಅದರಂತೆ ವಿಶ್ವಕಪ್‌ನಲ್ಲಿ ಒಂದು ಪಂದ್ಯವನ್ನು ಆಡುವ ಅವಕಾಶ ಪಡೆದಿದ್ದ ಪ್ರೇಮಾ, ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಪಂದ್ಯದಲ್ಲಿ ಎರಡು ಓವರ್‌ಗಳನ್ನು ಬೌಲ್ ಮಾಡಿ 21 ರನ್‌ಗಳನ್ನು ಬಿಟ್ಟುಕೊಟ್ಟು ವಿಕೆಟ್ ಪಡೆಯಲಿಲ್ಲ.

ಆಗಸ್ಟ್ ಅಂತ್ಯದಿಂದ ಆರಂಭ

ಏಷ್ಯಾಕಪ್‌ ವೇಳಾಪಟ್ಟಿಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಆದರೆ ಪಂದ್ಯಾವಳಿಯನ್ನು ಆಗಸ್ಟ್ ಅಂತ್ಯದಿಂದ ಸೆಪ್ಟೆಂಬರ್ ಮಧ್ಯದವರೆಗೆ ನಡೆಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಇದಾದ ತಕ್ಷಣ, ಸೆಪ್ಟೆಂಬರ್ 17 ರಿಂದ 22 ರವರೆಗೆ ಜಪಾನ್‌ನಲ್ಲಿ ಏಷ್ಯನ್ ಕ್ರೀಡಾಕೂಟ ನಡೆಯಲಿದೆ.

125 ಎಸೆತಗಳಲ್ಲಿ 209 ರನ್‌..! ಏಷ್ಯಾಕಪ್‌ನಲ್ಲಿ ಅಜೇಯ ಶತಕ ಸಿಡಿಸಿದ ಅಭಿಗ್ಯಾನ್ ಕುಂಡು

2026 ರ ಏಷ್ಯಾಕಪ್‌ಗೆ ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಭಾರತಿ ಫುಲ್ಮಾಲಿ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ. ಕಮಲಿನಿ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಧಾ ಯಾದವ್, ಪ್ರೇಮಾ ರಾವತ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ರೇಣುಕಾ ಸಿಂಗ್, ಶ್ರೀ ಚರಣಿ, ನಂದನಿ ಶರ್ಮಾ

ಮೀಸಲು ಆಟಗಾರ್ತಿಯರು: ಪ್ರತೀಕಾ ರಾವಲ್, ಉಮಾ ಛೆಟ್ರಿ (ವಿಕೆಟ್ ಕೀಪರ್), ವೈಷ್ಣವಿ ಶರ್ಮಾ, ಸಯಾಲಿ ಸತ್ಘರೆ, ಮಿನ್ನು ಮಣಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್