AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ

India Women's T20 Squad vs Sri Lanka Announced: ವಿಶ್ವಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ಶ್ರೀಲಂಕಾ ವಿರುದ್ಧ ಡಿಸೆಂಬರ್‌ನಲ್ಲಿ ಟಿ20 ಸರಣಿ ಆಡಲಿದೆ. ಬಿಸಿಸಿಐ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ 15 ಆಟಗಾರ್ತಿಯರ ತಂಡ ಪ್ರಕಟಿಸಿದೆ. ವೈಯಕ್ತಿಕ ಸವಾಲುಗಳನ್ನು ಮೀರಿ ಉಪನಾಯಕಿ ಸ್ಮೃತಿ ಮಂಧಾನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವಕಪ್ ನಂತರ ತಂಡದ ಇದು ಮೊದಲ ಸರಣಿಯಾಗಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

IND vs SL: ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ
India Womens
ಪೃಥ್ವಿಶಂಕರ
|

Updated on: Dec 09, 2025 | 7:48 PM

Share

ವಿಶ್ವ ಚಾಂಪಿಯನ್ ಟೀಂ ಇಂಡಿಯಾ ಶೀಘ್ರದಲ್ಲೇ ಮೈದಾನಕ್ಕೆ ಮರಳಲಿದೆ. ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡ (Indian women’s cricket team) ಡಿಸೆಂಬರ್ ಅಂತ್ಯದಲ್ಲಿ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಇದೀಗ ಈ ಸರಣಿಗಾಗಿ ಬಿಸಿಸಿಐ ಆಯ್ಕೆ ಸಮಿತಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಿದೆ. ಡಿಸೆಂಬರ್ 21 ರಂದು ಪ್ರಾರಂಭವಾಗಲಿರುವ ಐದು ಪಂದ್ಯಗಳ ಈ ಟಿ20 ಸರಣಿಗೆ ಹರ್ಮನ್ಪ್ರೀತ್ ಕೌರ್ (Harmanpreet Kaur) ನೇತೃತ್ವದ 15 ಆಟಗಾರ್ತಿಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಈ ತಂಡದಲ್ಲಿ ಉಪನಾಯಕಿ ಸ್ಮೃತಿ ಮಂಧಾನ ಕೂಡ ಇದ್ದಾರೆ.

ನವೆಂಬರ್ 2 ರಂದು ನಡೆದ ವಿಶ್ವಕಪ್ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ತಂಡ ಅಂದಿನಿಂದ ವಿರಾಮದಲ್ಲಿದೆ. ಕೆಲವು ಆಟಗಾರ್ತಿಯರು ದೇಶೀಯ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದರೆ, ಹೆಚ್ಚಿನವರು ವಿಶ್ರಾಂತಿಯಲಿದ್ದಾರೆ. ಈಗ, ಶ್ರೀಲಂಕಾ ತಂಡವು ಐದು ಪಂದ್ಯಗಳ ಟಿ20 ಸರಣಿಗಾಗಿ ಭಾರತಕ್ಕೆ ಭೇಟಿ ನೀಡುತ್ತಿರುವುದರಿಂದ ತಂಡದ ವಿರಾಮ ಶೀಘ್ರದಲ್ಲೇ ಕೊನೆಗೊಳ್ಳಲಿದೆ, ಇದು ವಿಶ್ವಕಪ್ ನಂತರ ಟೀಂ ಇಂಡಿಯಾದ ಮೊದಲ ಸರಣಿಯಾಗಿದೆ.

ತಂಡದಲ್ಲಿ ಸ್ಮೃತಿ ಮಂಧಾನ

ಈ ತಂಡದಲ್ಲಿ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಹೆಚ್ಚಿನ ಆಟಗಾರ್ತಿಯರೂ ಇದ್ದಾರೆ. ಇವರಲ್ಲಿ ಅತ್ಯಂತ ಪ್ರಮುಖ ಹೆಸರು ಸ್ಮೃತಿ ಮಂಧಾನ. ವಾಸ್ತವವಾಗಿ ಮಂಧಾನ ಇದೇ ನವೆಂಬರ್ 23 ರಂದು ಪಲಾಶ್ ಮುಚ್ಚಲ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಲು ನಿರ್ಧರಿಸಿದ್ದರು. ಆದರೆ ವಿವಿಧ ಕಾರಣಗಳಿಂದ ಮದುವೆಯನ್ನು ರದ್ದುಗೊಳಿಸಲಾಯಿತು. ಹೀಗಾಗಿ ಮಂಧಾನ ಈ ಸರಣಿಯಲ್ಲಿ ಆಡುತ್ತಾರೆಯೇ ಅಥವಾ ವಿರಾಮ ತೆಗೆದುಕೊಳ್ಳುತ್ತಾರೆಯೇ ಎಂಬುದು ಖಚಿತವಾಗಿರಲಿಲ್ಲ. ಆದರೆ, ವೈಯಕ್ತಿಕ ಜೀವನದಲ್ಲಾಗಿರುವ ಆಘಾತವನ್ನು ಬದಿಗೊತ್ತಿರುವ ಸ್ಮೃತಿ ತಮ್ಮ ವೃತ್ತಿಜೀವನದತ್ತ ಗಮನಹರಿಸಲು ನಿರ್ಧರಿಸಿದ್ದಾರೆ.

ಮದುವೆ ಮುರಿದು ಬಿದ್ದ ಬಳಿಕ ಮೊದಲ ಬಾರಿಗೆ ಕಾಣಿಸಿಕೊಂಡ ಸ್ಮೃತಿ ಮಂಧಾನ

ಟಿ20 ಸರಣಿಗೆ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ದೀಪ್ತಿ ಶರ್ಮಾ, ಸ್ನೇಹ ರಾಣಾ, ಜೆಮಿಮಾ ರೋಡ್ರಿಗಸ್, ಶೆಫಾಲಿ ವರ್ಮಾ, ಹರ್ಲೀನ್ ಡಿಯೋಲ್, ಅಮಂಜೋತ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ರೇಣುಕಾ ಸಿಂಗ್, ರಿಚಾ ಘೋಷ್, ಜಿ ಕಮಲಿನಿ, ಶ್ರೀ ಚರಣಿ, ವೈಷ್ಣವಿ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ