ICC Awards: ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಗೌರವಕ್ಕೆ ಭಾರತದ ಸ್ಮೃತಿ ಮಂಧಾನ ಆಯ್ಕೆ..!

Smriti Mandhana: ಈ ಭಾರತೀಯ ಬ್ಯಾಟರ್ ಕಳೆದ ವರ್ಷ ಒಟ್ಟು 22 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇಷ್ಟು ಪಂದ್ಯಗಳಲ್ಲಿ ಸ್ಮೃತಿ 38.86 ಸರಾಸರಿಯಲ್ಲಿ 855 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು ಬಾರಿಸಿದ್ದರು.

ICC Awards: ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಗೌರವಕ್ಕೆ ಭಾರತದ ಸ್ಮೃತಿ ಮಂಧಾನ ಆಯ್ಕೆ..!
ಸ್ಮೃತಿ ಮಂಧಾನ
Follow us
TV9 Web
| Updated By: ಪೃಥ್ವಿಶಂಕರ

Updated on:Jan 24, 2022 | 3:01 PM

ಭಾರತ ಮಹಿಳಾ ಕ್ರಿಕೆಟ್ ತಂಡ (Indian Women Cricket Team)ದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ (ICC Women’s Cricketer of the Year) ಆಗಿ ಆಯ್ಕೆಯಾಗಿದ್ದಾರೆ. ಐಸಿಸಿ ಸೋಮವಾರ ಹೇಳಿಕೆ ನೀಡುವ ಮೂಲಕ ಈ ವಿಷಯವನ್ನು ಪ್ರಕಟಿಸಿದೆ. ಈ ಭಾರತೀಯ ಬ್ಯಾಟರ್ ಕಳೆದ ವರ್ಷ ಒಟ್ಟು 22 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇಷ್ಟು ಪಂದ್ಯಗಳಲ್ಲಿ ಸ್ಮೃತಿ 38.86 ಸರಾಸರಿಯಲ್ಲಿ 855 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು ಬಾರಿಸಿದ್ದರು.

ಸ್ಮೃತಿ ಕಳೆದ ವರ್ಷ ಆಟದ ಎಲ್ಲಾ ಮೂರು ಸ್ವರೂಪಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಅದಕ್ಕಾಗಿಯೇ ಐಸಿಸಿ ಅವರನ್ನು ರಾಚೆಲ್ ಹೇಹೋ ಫ್ಲಿಂಟ್ ಟ್ರೋಫಿಗೆ ಆಯ್ಕೆ ಮಾಡಿದೆ. ಮಂಧಾನ ಭಾರತದ ಅತ್ಯುತ್ತಮ ಬ್ಯಾಟರ್​ಗಳಲ್ಲಿ ಒಬ್ಬರಾಗಿದ್ದಾರೆ. ಅಲ್ಲದೆ ವರ್ಷದಿಂದ ವರ್ಷಕ್ಕೆ ತನ್ನ ಪ್ರದರ್ಶನದೊಂದಿಗೆ ತನ್ನ ಪ್ರಾಮುಖ್ಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ.

ಈ ವರ್ಷದ ಪ್ರದರ್ಶನ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 2021 ರಲ್ಲಿ ಮಿಶ್ರ ಪ್ರದರ್ಶನ ನೀಡಿತ್ತು. ಆದರೆ ಸ್ಮೃತಿ ಮಂಧಾನ ವರ್ಷವಿಡೀ ತನ್ನ ಬ್ಯಾಟ್ ಕೌಶಲ್ಯವನ್ನು ತೋರಿಸಿದರು. ಭಾರತವು ದಕ್ಷಿಣ ಆಫ್ರಿಕಾಕ್ಕೆ ಆತಿಥ್ಯ ವಹಿಸಿತ್ತು. ಇದರಲ್ಲಿ ಎಂಟು ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಭಾರತ ಕೇವಲ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದೆ. ಎರಡೂ ಪಂದ್ಯಗಳಲ್ಲಿ ಮಂಧಾನ ಮಹತ್ವದ ಪಾತ್ರ ವಹಿಸಿದ್ದರು. ಎರಡನೇ ODIನಲ್ಲಿ, ಭಾರತ 158 ರನ್‌ಗಳನ್ನು ಬೆನ್ನಟ್ಟಿತು ಮತ್ತು ಮಂಧಾನ ಅಜೇಯ 80 ರನ್ ಗಳಿಸಿದರು. ಅವರು ಸರಣಿಯ ಕೊನೆಯ T20 ಪಂದ್ಯದಲ್ಲಿ ಅಜೇಯ 48 ರನ್ ಗಳಿಸಿದರು.

ಭಾರತ ಕೂಡ 2021ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಿದ್ದು, ಮಂಧಾನ ಇದರಲ್ಲಿ ಅಮೋಘ ಆಟ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್‌ನಲ್ಲಿ 78 ರನ್ ಗಳಿಸಿದ್ದರು. ಈ ಪಂದ್ಯ ಡ್ರಾ ಆಗಿತ್ತು. ಏಕದಿನ ಸರಣಿಯಲ್ಲಿ ಭಾರತ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿತ್ತು ಮತ್ತು ಇದರಲ್ಲಿ ಮಂಧಾನ 49 ರನ್ ಗಳಿಸಿದ್ದರು. ಎರಡನೇ ಟಿ20 ಪಂದ್ಯದಲ್ಲಿ ಅವರು ಅರ್ಧಶತಕ ಗಳಿಸಿದ್ದರು.

ಆಸ್ಟ್ರೇಲಿಯಾ ವಿರುದ್ಧವೂ ಅಬ್ಬರ ಇಂಗ್ಲೆಂಡ್ ಪ್ರವಾಸದ ನಂತರ ಮಂಧಾನ ಆಸ್ಟ್ರೇಲಿಯಾ ಪ್ರವಾಸದಲ್ಲೂ ಅದ್ಭುತ ಪ್ರದರ್ಶನ ನೀಡಿದ್ದರು. ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ 86 ರನ್ ಗಳಿಸಿದ್ದರು. ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ಮಂಧಾನ ಅವರ ಶತಕ ಸ್ಮರಣೀಯವಾಯಿತು. ಇದು ಟೆಸ್ಟ್‌ನಲ್ಲಿ ಅವರ ಮೊದಲ ಶತಕವಾಗಿದೆ.

ವೃತ್ತಿ ಬದುಕು ಹೀಗಿದೆ ಮಂಧಾನ ಭಾರತ ಪರ ನಾಲ್ಕು ಟೆಸ್ಟ್, 62 ODI ಮತ್ತು 84 T20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ, ಅವರು 46.42 ಸರಾಸರಿಯಲ್ಲಿ 325 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಐದು ಅರ್ಧ ಶತಕಗಳು ಸೇರಿವೆ. ODIಗಳಲ್ಲಿ ಅವರು 41.70 ಸರಾಸರಿಯಲ್ಲಿ 2377 ರನ್ ಗಳಿಸಿದ್ದಾರೆ. ODIಗಳಲ್ಲಿ, ಅವರು ತಮ್ಮ ಹೆಸರಿನಲ್ಲಿ ನಾಲ್ಕು ಶತಕಗಳು ಮತ್ತು 19 ಅರ್ಧ ಶತಕಗಳನ್ನು ಹೊಂದಿದ್ದಾರೆ. ಟಿ20ಯಲ್ಲಿ ಅವರು 25.93 ಸರಾಸರಿಯಲ್ಲಿ 1971 ರನ್ ಗಳಿಸಿದ್ದಾರೆ. ಅವರು ಈ ಆಟದ ಅತ್ಯಂತ ಕಡಿಮೆ ಸ್ವರೂಪದಲ್ಲಿ ನಾಲ್ಕು ಅರ್ಧ ಶತಕಗಳನ್ನು ಗಳಿಸಿದ್ದಾರೆ.

Published On - 2:53 pm, Mon, 24 January 22

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್