IND vs SA: ನಾಳೆಯಿಂದ ಬೆಂಗಳೂರಿನಲ್ಲಿ ಭಾರತ- ಆಫ್ರಿಕಾ ನಡುವೆ ಏಕದಿನ ಸರಣಿ ಆರಂಭ
India Women vs South Africa Women: ಭಾರತ ಮಹಿಳಾ ತಂಡ ಮತ್ತು ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ ಮೊದಲು ಏಕದಿನ ಸರಣಿ ನಡೆಯಲ್ಲಿದೆ. ಈ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು, ಟೆಸ್ಟ್ ಮತ್ತು ಟಿ20 ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ
ಪ್ರಸ್ತುತ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್ (T20 World Cup 2024) ನಡೆಯುತ್ತಿದೆ. ಇದಾದ ಬಳಿಕ ಕೆಲವೇ ತಿಂಗಳ ಅಂತರದಲ್ಲಿ ಅಂದರೆ ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಮಹಿಳೆಯರ ಟಿ20 ವಿಶ್ವಕಪ್ ಬಾಂಗ್ಲಾದೇಶದಲ್ಲಿ ನಡೆಯಲಿದೆ. ಈ ಮಿನಿ ವಿಶ್ವ ಸಮರಕ್ಕೂ ಮುನ್ನ ತಂಡದ ಸಿದ್ಧತೆಯನ್ನು ಪೂರ್ಣಗೊಳಿಸುವ ಸಲುವಾಗಿ ಭಾರತ ಮಹಿಳಾ ತಂಡ, ದಕ್ಷಿಣ ಆಫ್ರಿಕಾ ಮಹಿಳಾ ತಂಡದ (INDW vs SAW) ವಿರುದ್ಧ ಮೂರು ಮಾದರಿಗಳ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಈಗಾಗಲೇ ದಕ್ಷಿಣ ಆಫ್ರಿಕಾ ತಂಡ ಭಾರತ ಪ್ರವಾಸ ಕೈಗೊಂಡಿದೆ. ಈ ಪ್ರವಾಸವು ನಾಳೆಯಿಂದ ಅಂದರೆ ಜೂನ್ 16 ರಿಂದ ಪ್ರಾರಂಭವಾಗಲಿದೆ.
ಜೂನ್ 16 ರಿಂದ ಸರಣಿ ಆರಂಭ
ಭಾರತ ಮಹಿಳಾ ತಂಡ ಮತ್ತು ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ ಮೊದಲು ಏಕದಿನ ಸರಣಿ ನಡೆಯಲ್ಲಿದೆ. ಈ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು, ಟೆಸ್ಟ್ ಮತ್ತು ಟಿ20 ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ. ಎರಡು ತಂಡಗಳ ನಡುವಿನ ಏಕದಿನ ಪಂದ್ಯಗಳು ಐಸಿಸಿ ಮಹಿಳಾ ಚಾಂಪಿಯನ್‌ಶಿಪ್ 2022-2025 ರ ಭಾಗವಾಗಿವೆ. ಮೊದಲ ಏಕದಿನ ಪಂದ್ಯ ಜೂನ್ 16 ರಂದು, ಎರಡನೇ ಏಕದಿನ ಪಂದ್ಯ ಜೂನ್ 23 ರಂದು ಮತ್ತು ಮೂರನೇ ಏಕದಿನ ಪಂದ್ಯ ಜೂನ್ 23 ರಂದು ನಡೆಯಲಿದೆ. ಏಕದಿನ ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿವೆ. ಇದಾದ ಬಳಿಕ ಜೂನ್ 28ರಿಂದ ಜುಲೈ 1ರವರೆಗೆ ಚೆನ್ನೈನಲ್ಲಿ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಆ ಬಳಿಕ ನಡೆಯಲ್ಲಿರುವ ಟಿ20 ಸರಣಿಯ ಪಂದ್ಯಗಳಯ ರಾತ್ರಿ 7 ಗಂಟೆಗೆ ಆರಂಭವಾಗಲಿದೆ.
ಭಾರತ-ದಕ್ಷಿಣ ಆಫ್ರಿಕಾ ಸರಣಿ ವೇಳಾಪಟ್ಟಿ
ಏಕದಿನ ಸರಣಿ
- ಜೂನ್ 16: ಮೊದಲನೇ ಏಕದಿನ ಪಂದ್ಯ, ಬೆಂಗಳೂರು, ಮಧ್ಯಾಹ್ನ 1.30
- ಜೂನ್ 19: ಎರಡನೇ ಏಕದಿನ ಪಂದ್ಯ, ಬೆಂಗಳೂರು, ಮಧ್ಯಾಹ್ನ 1.30
- ಜೂನ್ 23: ಮೂರನೇ ಏಕದಿನ ಪಂದ್ಯ, ಬೆಂಗಳೂರು, ಮಧ್ಯಾಹ್ನ 1.30
ಏಕೈಕ ಟೆಸ್ಟ್ ಪಂದ್ಯ
- ಜೂನ್ 28 ರಿಂದ ಜುಲೈ 1 ರವರೆಗೆ, ಚೆನ್ನೈ
ಟಿ20 ಸರಣಿ
- ಜುಲೈ 5: ಮೊದಲ ಟಿ20, ಚೆನ್ನೈ, ಸಂಜೆ 7 ರಿಂದ
- ಜುಲೈ 7: 2ನೇ ಟಿ20, ಚೆನ್ನೈ, ಸಂಜೆ 7 ರಿಂದ
- ಜುಲೈ 9: 3ನೇ ಟಿ20, ಚೆನ್ನೈ, ಸಂಜೆ 7 ರಿಂದ
ಭಾರತ ಮಹಿಳಾ ತಂಡ
ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ದಯಾಲನ್ ಹೇಮಲತಾ, ರಾಧಾ ಯಾದವ್, ಆಶಾ ಶೋಭಾನಾ, ಶ್ರೇಯಾಂಕ ಪಾಟೀಲ್, ಸೈಕಾ ಇಶಾಕ್, ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಪ್ರಿಯಾ ಪುನಿಯಾ.
ಟೆಸ್ಟ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಶುಭಾ ಸತೀಶ್, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಸ್ನೇಹ ರಾಣಾ, ಸೈಕಾ ಇಶಾಕ್, ರಾಜೇಶ್ವರಿ ಗಾಯಕ್‌ವಾಡ್, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಮೇಘನಾ ಸಿಂಗ್, ಪ್ರಿಯಾ ಪುನಿಯಾ.
ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದಯಾಲನ್ ಹೇಮಲತಾ, ಉಮಾ ಛೆಟ್ರಿ (ವಿಕೆಟ್‌ಕೀಪರ್), ರಿಚಾ ಘೋಷ್ (ವಿಕೆಟ್‌ಕೀಪರ್), ಜೆಮಿಮಾ ರಾಡ್ರಿಗಸ್, ಸಜ್ನಾ ಸಜೀವನ್, ದೀಪ್ತಿ ಯಾದವ್, ಶ್ರೇಯಾಂಕಾ ಪಾಟೀಲ್, ಅಮಂಜೋತ್ ಕೌರ್, ಆಶಾ ಶೋಭನಾ, ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ