AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs AUSW 1st ODI: ಇಂದು ಭಾರತ-ಆಸ್ಟ್ರೇಲಿಯಾ ಮಹಿಳಾ ತಂಡಗಳ ಮೊದಲ ಏಕದಿನ ಪಂದ್ಯ: ಎಷ್ಟು ಗಂಟೆಗೆ?

India Women vs Australia Women, 1st ODI: ಆಸ್ಟ್ರೇಲಿಯ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಗೆದ್ದ ನಂತರ, ಆತ್ಮವಿಶ್ವಾಸದಲ್ಲಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪ್ರಥಮ ಏಕದಿನ ಪಂದ್ಯವನ್ನು ಆಯೋಜಿಸಲಾಗಿದೆ.

INDW vs AUSW 1st ODI: ಇಂದು ಭಾರತ-ಆಸ್ಟ್ರೇಲಿಯಾ ಮಹಿಳಾ ತಂಡಗಳ ಮೊದಲ ಏಕದಿನ ಪಂದ್ಯ: ಎಷ್ಟು ಗಂಟೆಗೆ?
INDW vs AUSW 1st ODI
Vinay Bhat
|

Updated on: Dec 28, 2023 | 11:11 AM

Share

ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಗುರುವಾರ (ಡಿಸೆಂಬರ್ 28) ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು (India Women vs Australia Women) ಎದುರಿಸಲಿದೆ. ಸರಣಿಯ ಆರಂಭಿಕ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಕಳೆದ ವಾರ ಇದೇ ಮೈದಾನದಲ್ಲಿ ನಡೆದ ಏಕೈಕ ಟೆಸ್ಟ್‌ನಲ್ಲಿ ಭಾರತವು ಕಾಂಗರೂ ಪಡೆಯನ್ನು ಎದುರಿಸಿತು ಮತ್ತು ಎಂಟು ವಿಕೆಟ್‌ಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿತು. ವುಮೆನ್ ಇನ್ ಬ್ಲೂ ಏಕದಿನದಲ್ಲಿ ಅದೇ ಪ್ರದರ್ಶನವನ್ನು ಮುಂದುವರೆಸುವ ತವಕದಲ್ಲಿದೆ.

ಆದರೆ, ಆಸ್ಟ್ರೇಲಿಯಾ ವನಿತೆಯರವ ವಿರುದ್ಧ ಭಾರತೀಯ ಮಹಿಳೆಯ ದಾಖಲೆ ಉತ್ತಮವಾಗಿಲ್ಲ. ಒಟ್ಟಾರೆ ಆಸ್ಟ್ರೇಲಿಯಾ ವಿರುದ್ಧದ 50 ಏಕದಿನ ಪಂದ್ಯಗಳಲ್ಲಿ ಭಾರತವು ಕೇವಲ 10 ಗೆಲುವುಗಳು ಮತ್ತು 40 ಸೋಲುಗಳನ್ನು ಕಂಡಿದೆ. ತವರಿನಲ್ಲಿ ಕೂಡ ಟೀಮ್ ಇಂಡಿಯಾ ದಾಖಲೆ ಕೆಟ್ಟದಾಗಿದೆ. 21 ODIಗಳಲ್ಲಿ ಕೇವಲ ನಾಲ್ಕು ಗೆಲುವುಗಳು ಮತ್ತು 17 ಸೋಲುಗಳನ್ನು ತವರಿನಲ್ಲಿ ಅನುಭವಿಸಿದೆ. ಫೆಬ್ರವರಿ 2007 ರಿಂದ ತವರಿನಲ್ಲಿ ಆಡಿದ ಕೊನೆಯ ಏಳು ಪಂದ್ಯಗಳಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಸೋಲಿಸಲಿಲ್ಲ.

NZ vs BAN: ನ್ಯೂಝಿಲೆಂಡ್​ಗೆ ಸೋಲುಣಿಸಿ ಹೊಸ ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ್

ಇದನ್ನೂ ಓದಿ
Image
ಫಿಲ್ಡಿಂಗ್​ನಲ್ಲಿ ಕಾಣಿಸಿದ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗದ ರಿಂಕು ಸಿಂಗ್
Image
IPL 2024: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸುರೇಶ್ ರೈನಾ..?
Image
ಸೆಂಚುರಿಯನ್​ನಲ್ಲಿ ಆರ್​ಸಿಬಿಯ ಪುಟ್ಟ ಅಭಿಮಾನಿಯನ್ನು ಭೇಟಿ ಮಾಡಿದ ಕೊಹ್ಲಿ:
Image
ಕೈಗ್ ಹಾಕೋಲೋ...ಪ್ರಸಿದ್ಧ್​ ಕೃಷ್ಣಗೆ ಕನ್ನಡದಲ್ಲೇ ಕೆಎಲ್ ರಾಹುಲ್ ತಾಕೀತು

ಭಾರತ-ಆಸ್ಟ್ರೇಲಿಯಾ ಮಹಿಳಾ ತಂಡಗಳ ಏಕದಿನ ಸರಣಿಯ ನೇರ ಪ್ರಸಾರದ ಕುರಿತ ಮಾಹಿತಿ ಇಲ್ಲಿದೆ:

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನ ಯಾವಾಗ ನಡೆಯಲಿದೆ?

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನ ಪಂದ್ಯವು ಗುರುವಾರ, 28 ಡಿಸೆಂಬರ್ ರಂದು ನಡೆಯಲಿದೆ.

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನ ಎಲ್ಲಿ ನಡೆಯಲಿದೆ?

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ನಡೆಯಲಿದೆ.

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನ 1:30 PM IST ಕ್ಕೆ ಆರಂಭವಾಗಲಿದೆ.

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನವನ್ನು ಯಾವ ಟಿವಿ ಚಾನೆಲ್ ಪ್ರಸಾರ ಮಾಡುತ್ತದೆ?

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನ ಭಾರತದಲ್ಲಿ Sports18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ.

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನದ ಲೈವ್​ ಸ್ಟ್ರೀಮ್ ವೀಕ್ಷಣೆ ಹೇಗೆ?

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನ ಲೈವ್ ಸ್ಟ್ರೀಮಿಂಗ್ JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಉಭಯ ತಂಡಗಳು

ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್.

ಆಸ್ಟ್ರೇಲಿಯಾ: ಡಾರ್ಸಿ ಬ್ರೌನ್, ಹೀದರ್ ಗ್ರಹಾಂ, ಆಶ್ಲೀಗ್ ಗಾರ್ಡ್ನರ್, ಕಿಮ್ ಗಾರ್ತ್, ಅಲಿಸ್ಸಾ ಹೀಲಿ (ನಾಯಕಿ- ವಿಕೆಟ್ ಕೀಪರ್), ಜೆಸ್ ಜೊನಾಸೆನ್, ಅಲಾನಾ ಕಿಂಗ್, ಫೋಬೆ ಲಿಚ್‌ಫೀಲ್ಡ್, ತಾಲಿಯಾ ಮೆಕ್‌ಗ್ರಾತ್, ಬೆತ್ ಮೂನಿ (ವಿಕೆಟ್ ಕೀಪರ್), ಎಲ್ಲಿಸ್ ಪೆರ್ರಿ, ಮೇಗನ್ ಶುಟ್, ಜಾರ್ಜಿಯಾ ವೇರ್‌ಹ್ಯಾಮ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ