AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟೀಮ್ ಇಂಡಿಯಾ ಟಿ20 ವಿಶ್ವಕಪ್ ವೇಳಾಪಟ್ಟಿ

Women's T20 World Cup 2024: ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್​ ಅನ್ನು ಯುಎಇ ದೇಶಕ್ಕೆ ಸ್ಥಳಾಂತರಿಸಲಾಗಿದೆ. ಅಕ್ಟೋಬರ್ 3 ರಿಂದ ಆರಂಭವಾಗಲಿರುವ 10 ತಂಡಗಳ ನಡುವಣ ವುಮೆನ್ಸ್ ಟಿ20 ವರ್ಲ್ಡ್ ಕಪ್ ಟೂರ್ನಿಯು ಅಕ್ಟೋಬರ್ 20 ರವರೆಗೆ ನಡೆಯಲಿದೆ.

T20 World Cup 2024: ಟೀಮ್ ಇಂಡಿಯಾ ಟಿ20 ವಿಶ್ವಕಪ್ ವೇಳಾಪಟ್ಟಿ
Team India
ಝಾಹಿರ್ ಯೂಸುಫ್
|

Updated on:Sep 26, 2024 | 12:41 PM

Share

ಮಹಿಳಾ ಟಿ20 ವಿಶ್ವಕಪ್ ಅಕ್ಟೋಬರ್ 3 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗುಂಪುಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ಜರುಗಲಿವೆ. ಇಲ್ಲಿ ಭಾರತ ತಂಡವು ಗ್ರೂಪ್-ಎ ನಲ್ಲಿದ್ದು, ಹೀಗಾಗಿ ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ವಿರುದ್ಧ ಮೊದಲ ಸುತ್ತಿನ ಪಂದ್ಯಗಳನ್ನಾಡಲಿದೆ. ಅದರಂತೆ  ಭಾರತ ತಂಡದ ಮೊದಲ ಸುತ್ತಿನ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

  • ಅಕ್ಟೋಬರ್ 4: ಭಾರತ vs ನ್ಯೂಝಿಲೆಂಡ್- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ರಾತ್ರಿ- 7:30 IST)
  • ಅಕ್ಟೋಬರ್ 6: ಭಾರತ vs ಪಾಕಿಸ್ತಾನ್- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ಮಧ್ಯಾಹ್ನ 3:30 IST)
  • ಅಕ್ಟೋಬರ್ 9: ಭಾರತ vs ಶ್ರೀಲಂಕಾ- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ರಾತ್ರಿ 7:30 IST)
  • ಅಕ್ಟೋಬರ್ 13: ಭಾರತ vs ಆಸ್ಟ್ರೇಲಿಯಾ- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ರಾತ್ರಿ 7:30 IST)

ಇದನ್ನೂ ಓದಿ: IPL 2025: RCB ಉಳಿಸಿಕೊಳ್ಳುವ ಅನ್​ಕ್ಯಾಪ್ಡ್​ ಆಟಗಾರ ಯಾರು?

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯದ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.

ಮೀಸಲು ಆಟಗಾರ್ತಿಯರು: ಉಮಾ ಚೆಟ್ರಿ (ವಿಕೆಟ್ ಕೀಪರ್), ತನುಜಾ ಕನ್ವರ್, ಸೈಮಾ ಠಾಕೂರ್.

ಸೆಮಿಫೈನಲ್​​ನಲ್ಲಿ ಸೋತಿದ್ದ ಟೀಮ್ ಇಂಡಿಯಾ:

2023 ರಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಅದ್ಭುತ ಪ್ರದರ್ಶನ ನೀಡಿತ್ತು. ಈ ಮೂಲಕ ಸೆಮಿಫೈನಲ್​ಗೆ ಪ್ರವೇಶಿಸಿದ್ದ ಟೀಮ್ ಇಂಡಿಯಾ ನಿರ್ಣಾಯಕ ಪಂದ್ಯದಲ್ಲಿಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಕೇವಲ 5 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಮಹಿಳಾ ಟಿ20 ವಿಶ್ವಕಪ್ ತಂಡಗಳು:

  • ಗುಂಪು A : ಆಸ್ಟ್ರೇಲಿಯಾ, ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್, ಶ್ರೀಲಂಕಾ.
  • ಗುಂಪು B : ಸೌತ್ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ, ಸ್ಕಾಟ್ಲೆಂಡ್.

Published On - 12:40 pm, Thu, 26 September 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ