ಮಹಿಳಾ ಟಿ20 ವಿಶ್ವಕಪ್ ಅಕ್ಟೋಬರ್ 3 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗುಂಪುಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ಜರುಗಲಿವೆ. ಇಲ್ಲಿ ಭಾರತ ತಂಡವು ಗ್ರೂಪ್-ಎ ನಲ್ಲಿದ್ದು, ಹೀಗಾಗಿ ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ವಿರುದ್ಧ ಮೊದಲ ಸುತ್ತಿನ ಪಂದ್ಯಗಳನ್ನಾಡಲಿದೆ. ಅದರಂತೆ ಭಾರತ ತಂಡದ ಮೊದಲ ಸುತ್ತಿನ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…
ಇದನ್ನೂ ಓದಿ: IPL 2025: RCB ಉಳಿಸಿಕೊಳ್ಳುವ ಅನ್ಕ್ಯಾಪ್ಡ್ ಆಟಗಾರ ಯಾರು?
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯದ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.
ಮೀಸಲು ಆಟಗಾರ್ತಿಯರು: ಉಮಾ ಚೆಟ್ರಿ (ವಿಕೆಟ್ ಕೀಪರ್), ತನುಜಾ ಕನ್ವರ್, ಸೈಮಾ ಠಾಕೂರ್.
2023 ರಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಅದ್ಭುತ ಪ್ರದರ್ಶನ ನೀಡಿತ್ತು. ಈ ಮೂಲಕ ಸೆಮಿಫೈನಲ್ಗೆ ಪ್ರವೇಶಿಸಿದ್ದ ಟೀಮ್ ಇಂಡಿಯಾ ನಿರ್ಣಾಯಕ ಪಂದ್ಯದಲ್ಲಿಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಕೇವಲ 5 ರನ್ಗಳಿಂದ ಸೋಲೊಪ್ಪಿಕೊಂಡಿತು.
Published On - 12:40 pm, Thu, 26 September 24