AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಅಧಿಪತ್ಯಕ್ಕೆ ಬ್ರೇಕ್: ೨ ದಶಕಗಳ ಬಳಿಕ ವೆಸ್ಟ್ ಇಂಡೀಸ್ ಹೊಸ ಇತಿಹಾಸ!

ಭಾರತದ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ಪಡೆ, ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 247 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.3 ಓವರ್‌ಗಳಲ್ಲಿ 223 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ವೆಸ್ಟ್ ಇಂಡೀಸ್ ತಂಡ 24 ರನ್‌ಗಳ ಜಯ ದಾಖಲಿಸಿತು.

ಭಾರತದ ಅಧಿಪತ್ಯಕ್ಕೆ ಬ್ರೇಕ್: ೨ ದಶಕಗಳ ಬಳಿಕ ವೆಸ್ಟ್ ಇಂಡೀಸ್ ಹೊಸ ಇತಿಹಾಸ!
Ind Vs Wi Image Credit source: GettyImages
ಝಾಹಿರ್ ಯೂಸುಫ್
|

Updated on: Oct 15, 2026 | 7:28 AM

Share

ಕ್ರಿಕೆಟ್ ಜಗತ್ತಿನಲ್ಲಿ ಚರಿತ್ರೆಯ ಪುಟಗಳು ಸದಾ ಬದಲಾಗುತ್ತಿರುತ್ತವೆ. ಆದರೆ ಕೆಲವು ದಾಖಲೆಗಳು ದಶಕಗಳ ಕಾಲ ಅಲುಗಾಡದೆ ನಿಂತಿರುತ್ತವೆ. ಅಂಥದ್ದೇ ಒಂದು ದಾಖಲೆಯನ್ನು ಬರೋಬ್ಬರಿ 24 ವರ್ಷಗಳ ನಂತರ ಭಾರತದ ನೆಲದಲ್ಲಿ ಧೂಳೀಪಟ ಮಾಡಿ ವೆಸ್ಟ್ ಇಂಡೀಸ್ ಪಡೆ ಹೊಸ ಇತಿಹಾಸ ನಿರ್ಮಿಸಿದೆ.

ಹೌದು, 2002ರ ನಂತರ ಟೀಮ್ ಇಂಡಿಯಾ ವಿರುದ್ಧ ಅವರದ್ದೇ ದೇಶದಲ್ಲಿ ಒಂದೇ ಪ್ರವಾಸದಲ್ಲಿ 3 ಪಂದ್ಯಗಳನ್ನು ಗೆಲ್ಲುವ ಮೂಲಕ ವಿಂಡೀಸ್ ಪಡೆ ಐತಿಹಾಸಿಕ ಸಾಧನೆ ಮಾಡಿದೆ. ಅಂದರೆ ವೆಸ್ಟ್ ಇಂಡೀಸ್ ತಂಡವು ಭಾರತದಲ್ಲಿ ಒಂದೇ ಸರಣಿಯಲ್ಲಿ ಮೂರು ಪಂದ್ಯಗಳನ್ನು ಗೆದ್ದು 2 ದಶಕಗಳೇ ಕಳೆದಿತ್ತು.

2002 ರಲ್ಲಿ ಕೊನೆಯ ಬಾರಿ ವೆಸ್ಟ್ ಇಂಡೀಸ್ ತಂಡ ಭಾರತದಲ್ಲಿ ಮೂರು ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿತ್ತು. ಇದೀಗ 24 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ ಎಳೆದಿದೆ. ಅಕ್ಟೋಬರ್ 14, 2026 ರಂದು ಹೈದರಾಬಾದ್‌ನಲ್ಲಿ ನಡೆದ ರೋಮಾಂಚಕ 4ನೇ ಟಿ20 ಪಂದ್ಯದಲ್ಲಿ ಭಾರತವನ್ನು 24 ರನ್‌ಗಳಿಂದ ಸೋಲಿಸಿದ ವಿಂಡೀಸ್, 5 ಪಂದ್ಯಗಳ ಸರಣಿಯನ್ನು 2-2 ರಿಂದ ಸಮಬಲಗೊಳಿಸುವುದರ ಜೊತೆಗೆ ಈ ಐತಿಹಾಸಿಕ ಸಾಧನೆ ಮಾಡಿದೆ.

ಪ್ರಸ್ತುತ ಪ್ರವಾಸದಲ್ಲಿ ವೆಸ್ಟ್ ಇಂಡೀಸ್ ತಂಡದ 3 ವಿಜಯ:

ಪಂದ್ಯ ದಿನಾಂಕ ಕ್ರೀಡಾಂಗಣ ಫಲಿತಾಂಶ ಪ್ರಮುಖ ಪ್ರದರ್ಶನ
3ನೇ ಏಕದಿನ ಅಕ್ಟೋಬರ್ 3, 2026 ನ್ಯೂ ಚಂಡೀಗಢ ವಿಂಡೀಸ್‌ಗೆ 5 ವಿಕೆಟ್‌ಗಳ ಜಯ ಶಾಯ್ ಹೋಪ್ (162*)
2ನೇ ಟಿ20 ಪಂದ್ಯ ಅಕ್ಟೋಬರ್ 9, 2026 ರಾಂಚಿ ವಿಂಡೀಸ್‌ಗೆ 6 ವಿಕೆಟ್‌ಗಳ ಜಯ ಶಾಯ್ ಹೋಪ್ (102*)
4ನೇ ಟಿ20 ಪಂದ್ಯ ಅಕ್ಟೋಬರ್ 14, 2026 ಹೈದರಾಬಾದ್ ವಿಂಡೀಸ್‌ಗೆ 24 ರನ್‌ಗಳ ಜಯ ಶಾಯ್ ಹೋಪ್ (102*) ಮತ್ತು ಕೀಮೋ ಪಾಲ್ (5/41)

ಹೋಪ್ ಹೊಸ ಹೋಪ್:

ವಿಶೇಷ ಎಂದರೆ ಈ ಮೂರು ಗೆಲುವುಗಳ ರೂವಾರಿ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್. ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಸೆಂಚುರಿಸಿ ವಿಂಡೀಸ್​ ಪಡೆಗೆ ಗೆಲುವು ತಂದುಕೊಟ್ಟಿದ್ದರು. ಇನ್ನು ಎರಡನೇ ಟಿ20 ಪಂದ್ಯಲ್ಲೂ 102* ರನ್ ಬಾರಿಸಿ ಮಿಂಚಿದ್ದರು. ಇದೀಗ ಮೂರನೇ ಟಿ20 ಪಂದ್ಯದಲ್ಲಿ 102* ರನ್​ ಸಿಡಿಸಿ ವೆಸ್ಟ್ ಇಂಡೀಸ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.  ಈ ಮೂಲಕ ವೆಸ್ಟ್ ಇಂಡೀಸ್ ತಂಡ 24 ವರ್ಷಗಳ ಬಳಿಕ ಭಾರತದಲ್ಲಿ ಮೂರು ಪಂದ್ಯಗಳನ್ನು ಗೆಲ್ಲುವಲ್ಲಿ ಕಾರಣಕರ್ತರಾಗಿದ್ದಾರೆ.

ಸರಣಿ ಸಮಬಲ:

ಪ್ರಸ್ತುತ ನಡೆಯುತ್ತಿರುವ 5 ಪಂದ್ಯಗಳ ರೋಚಕ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಭಾರತ ತಂಡವು ರೋಚಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು.

ಇದನ್ನೂ ಓದಿ: ಇದು ಕೇವಲ ಗೆಲುವಲ್ಲ… ಇತಿಹಾಸವನ್ನೇ ಬದಲಿಸಿದ ವೆಸ್ಟ್ ಇಂಡೀಸ್

ಇದೀಗ ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸುವಲ್ಲಿ ವೆಸ್ಟ್ ಇಂಡೀಸ್ ತಂಡ ಯಶಸ್ವಿಯಾಗಿದೆ. ಈ ಮೂಲಕ ಐದು ಪಂದ್ಯಗಳ ಈ ಸರಣಿಯು ಸದ್ಯ 2-2 ಅಂತರದಿಂದ ಸಮಬಲಗೊಂಡಿದೆ. ಹೀಗಾಗಿ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 5ನೇ ಹಾಗೂ ಅಂತಿಮ ಟಿ20 ಪಂದ್ಯವು ಭಾರೀ ಕುತೂಹಲ ಮೂಡಿಸಿದ್ದು, ಪ್ರಶಸ್ತಿ ಯಾರ ಮುಡಿಗೇರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ