ಮೈಸೂರು: ಕಲ್ಲು ಹಾಸಿನ ಮೇಲೆ ಕುಳಿತು ಮಗನ ಆಟ ವೀಕ್ಷಿಸಿದ ರಾಹುಲ್ ದ್ರಾವಿಡ್ ದಂಪತಿಗಳು

Rahul Dravid: ವಾಸ್ತವವಾಗಿ ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಮತ್ತು ಉತ್ತರಾಖಂಡ ನಡುವಿನ ಕೂಚ್ ಬೆಹಾರ್ ಟ್ರೋಫಿ ಪಂದ್ಯವನ್ನು ವೀಕ್ಷಿಸಲು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ತಮ್ಮ ಪತ್ನಿ ವಿಜೇತಾ ಅವರೊಂದಿಗೆ ಮೈದಾನಕ್ಕೆ ಆಗಮಿಸಿದ್ದರು.

ಮೈಸೂರು: ಕಲ್ಲು ಹಾಸಿನ ಮೇಲೆ ಕುಳಿತು ಮಗನ ಆಟ ವೀಕ್ಷಿಸಿದ ರಾಹುಲ್ ದ್ರಾವಿಡ್ ದಂಪತಿಗಳು
ರಾಹುಲ್ ದ್ರಾವಿಡ್ ದಂಪತಿಗಳು
Follow us
ಪೃಥ್ವಿಶಂಕರ
|

Updated on: Dec 02, 2023 | 9:51 AM

ಎರಡನೇ ಅವಧಿಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿರುವ ಕನ್ನಡಿಗ ರಾಹುಲ್ ದ್ರಾವಿಡ್ (Rahul Dravid) ಪ್ರಸ್ತುತ ತಂಡದಿಂದ ದೂರ ಉಳಿದಿದ್ದಾರೆ. ಭಾರತ ಯುವ ಪಡೆ ವಿವಿಎಸ್ ಲಕ್ಷ್ಮಣ್ ಅವರ ಕೋಚಿಂಗ್​ನಲ್ಲಿ ಸದ್ಯ ಆಸ್ಟ್ರೇಲಿಯಾ ವಿರುದ್ಧ (India vs Australia) ಟಿ20 ಸರಣಿಯನ್ನು ಆಡುತ್ತಿದೆ. ಹೀಗಾಗಿ ವಿಶ್ವಕಪ್ (ICC World Cup 2023) ಫೈನಲ್ ಮುಗಿದ ಬಳಿಕ ರಾಹುಲ್ ದ್ರಾವಿಡ್ ತಂಡ ತೊರೆದಿದ್ದರು. ಸದ್ಯ ರಜೆಯ ಮೂಡ್​ನಲ್ಲಿ ದಿ ವಾಲ್ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದು, ತನ್ನ ಮಡದಿಯೊಂದಿಗೆ ಮೈಸೂರಿಗೆ ತೆರಳಿ ತಮ್ಮ ಮಗನ ಆಟವನ್ನು ಕಣ್ತುಂಬಿಕೊಂಡಿದ್ದಾರೆ.

ಮೈಸೂರಿನಲ್ಲಿ ದ್ರಾವಿಡ್ ದಂಪತಿಗಳು

ವಾಸ್ತವವಾಗಿ ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಮತ್ತು ಉತ್ತರಾಖಂಡ ನಡುವಿನ ಕೂಚ್ ಬೆಹಾರ್ ಟ್ರೋಫಿ ಪಂದ್ಯವನ್ನು ವೀಕ್ಷಿಸಲು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ತಮ್ಮ ಪತ್ನಿ ವಿಜೇತಾ ಅವರೊಂದಿಗೆ ಮೈದಾನಕ್ಕೆ ಆಗಮಿಸಿದ್ದರು. ದಂಪತಿಗಳಿಬ್ಬರು ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವ ತಮ್ಮ ಮಗ ಸಮಿತ್ ಅವರ ಆಟವನ್ನು ಕುತೂಹಲದಿಂದ ವೀಕ್ಷಿಸಿದರು.

150 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ಸಮಿತ್

ಇನ್ನು ಸಮಿತ್ ಬಗ್ಗೆ ಹೇಳುವುದಾದರೆ.. 2018 ರಲ್ಲಿ ನಡೆದ ಅಂಡರ್-14 ಪಂದ್ಯಾವಳಿಯಲ್ಲಿ ಸಮಿತ್ 150 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿ ಎಲ್ಲರ ಗಮನ ಸೆಳೆದಿದ್ದರು. ಆ ಬಳಿಕ 2023 ರಲ್ಲಿ ನಡೆದ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಗೂ ಸಮಿತ್ ಆಯ್ಕೆಯಾಗಿದ್ದರು. ಆದಾಗ್ಯೂ, ಪಂದ್ಯಾವಳಿಯಲ್ಲಿ ಅವರ ಪ್ರದರ್ಶನವು ನಿರೀಕ್ಷಿಸಿದಷ್ಟು ಸ್ಮರಣೀಯವಾಗಿರಲಿಲ್ಲ. ಏಕೆಂದರೆ ಅವರು ಆಡಿದ ನಾಲ್ಕು ಇನ್ನಿಂಗ್ಸ್‌ಗಳಿಂದ ಒಂದೇ ಒಂದು ಅರ್ಧಶತಕ ಸೇರಿದಂತೆ ಕೇವಲ 122 ರನ್ ಗಳಿಸಲಷ್ಟೇ ಶಕ್ತರಾದರು.

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಮಹತ್ವದ ನಿರ್ಧಾರ

ಮುಂಬೈ ವಿರುದ್ಧ ಶ್ರೇಷ್ಠ ಪ್ರದರ್ಶನ

ಆದರೆ ಮುಂಬೈ ವಿರುದ್ಧ 95 ಎಸೆತಗಳಲ್ಲಿ 87 ರನ್‌ಗಳನ್ನು ಬಾರಿಸಿದ್ದ ಸಮಿತ್ ಆಟಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅವರ ಗಮನಾರ್ಹ ಪ್ರಯತ್ನದ ಹೊರತಾಗಿಯೂ, ಕರ್ನಾಟಕವು 346 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿ ಪಂದ್ಯವನ್ನು 46 ರನ್‌ಗಳಿಂದ ಕಳೆದುಕೊಂಡಿತು. ತಂಡದ ಪರ ಸ್ಮರಣೀಯ ಪ್ರದರ್ಶನ ನೀಡಿದ ಸಮಿತ್ ತಮ್ಮ ಇನ್ನಿಂಗ್ಸ್‌ನಲ್ಲಿ ಹತ್ತು ಬೌಂಡರಿಗಳನ್ನು ಬಾರಿಸಿದಲ್ಲದೆ, ಬೌಲಿಂಗ್​ನಲ್ಲಿ ಹತ್ತು ಓವರ್‌ ಬೌಲ್ ಮಾಡಿ 59 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ